ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಕ್ರೀಡಾಪಟುಗಳು ಬಾಲಿವುಡ್ ತಾರೆಯರ ಕಡೆಯಿಂದ ಸಾಕಷ್ಟು ಅರ್ಥಿಕ ನೆರವು ಹರಿದುಬರುತ್ತಿದೆ. ಕೊರೊನಾ ವೈರಸ್ ವಿರುದ್ಧದ ಸಮರಕ್ಕೆ ಟೀಮ್ ಇಂಡಿಯಾ ಆಟಗಾರರೂ ಕೂಡ ಆರ್ಥಿಕವಾಗಿ ಬೆಂಬಲವನ್ನು ನೀಡುತ್ತಿದ್ದಾರೆ.
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಕೂಡ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಭಾರೀ ಮೊತ್ತದ ಧನ ಸಹಾಯವನ್ನು ನೀಡಿದ್ದಾರೆ. ಈ ಮೂಲಕ ಸರ್ಕಾರದ ಜೊತೆಗೆ ಬೆಂಬಲವಾಗಿ ನಿಂತಿದ್ದಾರೆ.
ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ 70 ಲಕ್ಷ ರೂಪಾಯಿ ಹಣವನ್ನು ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಸರ್ಕಾರಕ್ಕೆ ನೀಡಿದ್ದಾರೆ. 45 ಲಕ್ಷ ರೂಪಾಯಿಯನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡಿದರೆ 25 ಲಕ್ಷ ರೂಪಾಯಿ ಹಣವನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಭಾರತದ ಹಿಟ್ಮ್ಯಾನ್ ಆದರ್ಶ!
ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಫೀಡಿಂಗ್ ಇಂಡಿಯಾ ಸಂಸ್ಥೆಗೆ ಐದು ಲಕ್ಷ ಮತ್ತು ಬೀದಿ ನಾಯಿಗಳ ಕ್ಷೇಮಾಭಿವೃದ್ಧಿಗಾಗಿ ಐದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ರೋಹಿತ್ ಶರ್ಮಾ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾವನ್ನು ಯಾವತ್ತೂ ಮುನ್ನಡೆಸದ 3 ಸೂಪರ್ ಸ್ಟಾರ್ಗಳು ಇವರು
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ, ಸುರೇಶ್ ರೈನಾ ಅಜಿಂಕ್ಯಾ ರಹಾನೆ ಮತ್ತೂ ಹಲವಾರು ಕ್ರಿಕೆಟಿಗರ ಜೊತೆಗೆ ರೋಹಿತ್ ಶರ್ಮಾ ಕೂಡ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಆರ್ಥಿಕವಾಗಿ ಸ್ಪಂದಿಸಿದ್ದಾರೆ.