ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಪಂದ್ಯ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿಯನ್ನು ವಶಕ್ಕೆ ಪಡೆಯುವ ಇರಾದೆ ಭಾರತ ತಂಡದ್ದಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಪಂದ್ಯ ರೋಚಕತೆ ಹೆಚ್ಚಿಸಿದೆ. ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.
ಉತ್ತಮ ಲಯದಲ್ಲಿರುವ ರೋಹಿತ್ ಶರ್ಮಾ ರನ್‌ಗಳನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೆ ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ. ಈ ಬ್ಯಾಟರ್ ಮೂರನೇ ಪಂದ್ಯದಲ್ಲಿ ಇನ್ನು ಎರಡು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಸಫಲರಾದರೆ, ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರನಾಗಬಹುದು, ಈ ವಿಷಯದಲ್ಲಿ ಪಾಕಿಸ್ತಾನದ ಮಾಜಿ ಬ್ಯಾಟ್ಸ್‌ಮನ್ ಶಾಹಿದ್ ಅಫ್ರಿದಿ ಅವರನ್ನು ಹಿಂದಿಕ್ಕಬಹುದು.

ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆಗೆ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿಗೆ ಸಲ್ಲುತ್ತದೆ. ಇವರು ಕಿವೀಸ್ ವಿರುದ್ಧ 50 ಸಿಕ್ಸರ್‌ಗಳ ದಾಖಲೆ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಇವರು ನ್ಯೂಜಿಲೆಂಡ್ ವಿರುದ್ಧ 33 ಏಕದಿನ ಪಂದ್ಯಗಳಲ್ಲಿ 49 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಎರಡು ಅಥವಾ ಹೆಚ್ಚಿನ ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿದ್ದಾರೆ. ಇವರು 30 ಪಂದ್ಯಗಳಲ್ಲಿ 45 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ 26 ರನ್ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ 24 ರನ್ ಬಾರಿಸಿದ್ದಾರೆ. ಇವರು ಉತ್ತಮ ಆರಂಭವನ್ನು ಪಡೆದರೂ ಸಹ ಇದನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ರೋಹಿತ್ 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ಅಂಕಿಅಂಶಗಳು ಉತ್ತಮವಾಗಿವೆ. ಈ ಮೈದಾನದಲ್ಲಿ ಈವರೆಗೆ ಆಡಲಾದ 5 ಏಕದಿನ ಪಂದ್ಯಗಳಲ್ಲಿ 41 ಸರಾಸರಿಯಲ್ಲಿ 205 ರನ್ ಗಳಿಸಿದ್ದಾರೆ. ಈ ಹಿಂದೆ ಇದೇ ಮೈದಾನದಲ್ಲಿ ರೋಹಿತ್ ಆಡಿದ ಎರಡೂ ಪಂದ್ಯಗಳಲ್ಲೂ 50ಕ್ಕೂ ಹೆಚ್ಚು ರನ್ ಬಾರಿಸಿದ್ದಾರೆ.