Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ಮೂರು ಸಿಕ್ಸರ್‌ ಸಿಡಿಸುತ್ತಿದ್ದಂತೆ ದಾಖಲೆ ಬರೆಯಲಿರುವ ಹಿಟ್‌ ಮ್ಯಾನ್‌

ಮುಂಬೈ ಇಂಡಿಯನ್ಸ್‌ ತಂಡದ ಸ್ಟಾರ್ ಬ್ಯಾಟರ್‌ ರೋಹಿತ್ ಶರ್ಮಾ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ರೋಹಿತ್‌ ಬಿಗ್‌ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್‌ ದೊಡ್ಡ ಸಾಧನೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಪಡೆ ಮುನ್ನಡೆ ಸಾಧಿಸಬೇಕಿದ್ದರೆ, ಈ ಪಂದ್ಯ ಮಹತ್ವದಾಗಿದೆ.

ಈಗಾಗಲೇ ಆಡಿದ 12 ಪಂದ್ಯಗಳಲ್ಲಿ 14 ಅಂಕಗಳನ್ನು ಕಲೆ ಹಾಕಿರುವ ಮುಂಬೈ ಇಂಡಿಯನ್ಸ್‌ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದದ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆಯುವ ಕನಸನ್ನು ಮುಂಬೈ ಕಾಣುತ್ತಿದೆ ಈ ವೇಳೆ ರೋಹಿತ್ ಶರ್ಮಾ ಅಬ್ಬರಿಸುವುದು ತಂಡಕ್ಕೆ ಅನಿವಾರ್ಯವಾಗಿದೆ.

Rohit Sharma Eyes 300 IPL Sixes Milestone Against Delhi Capitals

ಇತ್ತೀಚಿಗೆ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌ ಶರ್ಮಾ, ಈಗ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್‌ ಮಾತ್ರ ಆಡುತ್ತಾರೆ. ಇವರು ಐಪಿಎಲ್‌ನಲ್ಲಿ ಈ ಬಾರಿ ಉತ್ತಮವಾಗಿ ರನ್‌ ಕಲೆ ಹಾಕುತ್ತಿದ್ದಾರೆ. ರೋಹಿತ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 152 ಸ್ಟ್ರೈಕ್‌ರೇಟ್‌ನಲ್ಲಿ 300 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 30 ಆಗಿದೆ. ಇನ್ನು 17 ಸಿಕ್ಸರ್‌ ಹಾಗೂ 28 ಬೌಂಡರಿ ಬಾರಿಸಿರುವ ರೋಹಿತ್‌ ಶರ್ಮಾ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.

ದೊಡ್ಡ ದಾಖಲೆಯ ಮೇಲೆ ಕಣ್ಣು

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದ್ರೆ, ಐಪಿಎಲ್‌ನಲ್ಲಿ 300 ಸಿಕ್ಸರ್‌ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್‌ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ರೋಹಿತ್‌ ಐಪಿಎಲ್‌ನಲ್ಲಿ 268 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ, ಈ ವರೆಗೆ 297 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೂರು ಸಿಕ್ಸರ್‌ ಸಿಡಿಸುವಲ್ಲಿ ಯಶಸ್ವಿಯಾದರೆ ದೊಡ್ಡ ದಾಖಲೆ ಬರೆಯಬಹುದು.

ಗೇಲ್‌ಗೆ ಅಗ್ರ ಸ್ಥಾನ

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಕೀರ್ತಿ ಯುನಿವರ್ಸಲ್‌ ಬಾಸ್‌ ಖ್ಯಾತಿಯ ಕ್ರಿಸ್‌ ಗೇಲ್‌ ಅವರಿಗೆ ಸಲ್ಲುತ್ತದೆ. ಇವರು ಆಡಿದ 142 ಪಂದ್ಯಗಳಲ್ಲಿ 357 ಸಿಕ್ಸರ್‌ ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ 300ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಡಿದ್ದಾರೆ. ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್

ಕ್ರಿಸ್‌ ಗೇಲ್‌, 142 ಪಂದ್ಯ, 357 ಸಿಕ್ಸರ್
ರೋಹಿತ್ ಶರ್ಮಾ, 268 ಪಂದ್ಯ, 297 ಸಿಕ್ಸರ್
ವಿರಾಟ್‌ ಕೊಹ್ಲಿ, 263 ಪಂದ್ಯ, 290 ಸಿಕ್ಸರ್
ಎಂಎಸ್‌ಧೋನಿ, 277 ಪಂದ್ಯ, 264 ಸಿಕ್ಸರ್
ಎಬಿ ಡಿವಿಲಿಯರ್ಸ್‌, 184 ಪಂದ್ಯ, 251 ಸಿಕ್ಸರ್

Story first published: Wednesday, May 21, 2025, 10:08 [IST]
Other articles published on May 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+