Rohit Sharma: ಆಸೀಸ್ ಸರಣಿಯಲ್ಲಿ ಹಲವು ದಾಖಲೆಗಳ ಮೇಲೆ ರೋಹಿತ್ ಕಣ್ಣು
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಅಕ್ಟೋಬರ್ 9 ರಿಂದ ಆರಂಭವಾಗಲಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಮಾಜಿ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಕಂ ಬ್ಯಾಕ್ ಮಾಡಿದ್ದಾರೆ. ಈ ಸರಣಿಯ ಮೂಲಕ ಭಾರತ ತಂಡಕ್ಕೆ ಏಕದಿನ ಫಾರ್ಮೆಟ್‌ಗೆ ನೂತನ ನಾಯಕ ಸಿಕ್ಕಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಈ ಸರಣಿಯಲ್ಲಿ ಒಬ್ಬ ಪ್ಲೇಯರ್ ಆಗಿ ಆಡಲಿದ್ದಾರೆ. ಒತ್ತಡವಿಲ್ಲದೇ ರೋಹಿತ್ ಶರ್ಮಾ ಬಿಗ್ ಇನಿಂಗ್ಸ್ ಕಟ್ಟುವತ್ತ ಚಿತ್ತ ನೆಟ್ಟಿದ್ದಾರೆ. ಆಸೀಸ್ ನೆಲದಲ್ಲಿ ರೋಹಿತ್ ಇತಿಹಾಸ ನಿರ್ಮಿಸಲು ಸಿದ್ಧರಾಗಿದ್ದಾರೆ.
ಟೀಮ್ ಇಂಡಿಯಾದ ಹಿಟ್ ಮ್ಯಾನ್ ಖ್ಯಾತಿ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಒಂದೇ ಒಂದು ಶತಕವನ್ನು ಬಾರಿಸುವಲ್ಲಿ ಸಫಲರಾದಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸುವ ಮೂಲಕ ರೋಹಿತ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ 50 ಶತಕ ಬಾರಿಸಿದ ಸಾಧನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ಈ ಸಾಧನೆಯನ್ನು ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹಿರಿಮೆ ತಮ್ಮದಗಾಸಿಕೊಳ್ಳಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಭಾರತದ ಪರ ಅತಿ ಹೆಚ್ಚು ಶತಕವನ್ನು ಸಿಡಿಸಿದ ಕೀರ್ತಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ಇವರು 100 ಶತಕಗಳನ್ನು ಬಾರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಅವರದ್ದಾಗಿದೆ. ಇವರು 82 ಶತಕಗಳನ್ನು ಬಾರಿಸಿದ್ದಾರೆ. ಇನ್ನು ಆಸೀಸ್ ಪ್ರವಾಸದಲ್ಲಿ ರೋಹಿತ್ ಈ ಸಾಧನೆ ಮಾಡುವಲ್ಲಿ ಸಫಲರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ 50 ಶತಕ ಬಾರಿಸಿದ ಮೂರನೇ ಆಟಗಾರ ಎಂಬ ಹಿರಿಮೆಯನ್ನು ರೋಹಿತ್ ತಮ್ಮದಾಗಿಸಿಕೊಳ್ಳಲಿದ್ದಾರೆ.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಟಾಪ್ 5 ಬ್ಯಾಟರ್ಸ್
ಸಚಿನ್ ತೆಂಡೂಲ್ಕರ್ - 100
ವಿರಾಟ್ ಕೊಹ್ಲಿ - 82
ರಿಕಿ ಪಾಂಟಿಂಗ್ - 71
ಕುಮಾರ್ ಸಂಗಕ್ಕಾರ - 63
ಜಾಕ್ವೆಸ್ ಕಾಲಿಸ್ - 62

ಟೀಮ್ ಇಂಡಿಯಾದ ಮಾಹಿ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಲಿದ್ದಾರೆ. ಇವರು 500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ ವಿಶ್ವದ 11ನೇ ಹಾಗೂ ಭಾರತದ ಐದನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೊದಲು ಭಾರತದ ಪರ ಈ ಸಾಧನೆಯನ್ನು ಸಚಿನ್ ತೆಂಡೂಲ್ಕರ್ (660), ವಿರಾಟ್ ಕೊಹ್ಲಿ (550), ಎಂಎಸ್ ಧೋನಿ (538), ರಾಹುಲ್ ದ್ರಾವಿಡ್ (509), ಮಾಡಿದ್ದಾರೆ. ಈ ಎಲ್ಲ ದೃಷ್ಟಿಕೋನದಿಂದ ಆಸ್ಟ್ರೇಲಿಯಾ ಪ್ರವಾಸ ಹಿಟ್ ಮ್ಯಾನ್‌ಗೆ ವಿಶೇಷವಾಗಿರಲಿದೆ. ರೋಹಿತ್ ಶರ್ಮಾ ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಏಕದಿನ ವಿಶ್ವಕಪ್‌ಗೆ ಸಿದ್ಧರಾಗಿರುವುದಾಗಿ ಸಾಬೀತು ಪಡಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications