Rohit Sharma: ದೊಡ್ಡ ದಾಖಲೆಯ ಮೇಲೆ ರೋಹಿತ್ ಕಣ್ಣು: ಈ ದಾಖಲೆ ಅಂಚಿನಲ್ಲಿ ಹಿಟ್ ಮ್ಯಾನ್
ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಣ ಹೈವೋಲ್ಟೇಜ್ ಪಂದ್ಯ ಮುಂಬೈನ ವಾಂಖೇಡೆ ಅಂಗಳದಲ್ಲಿ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಹಲವು ಸ್ಟಾರ್ ಆಟಗಾರರು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ವೇಳೆ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ಪಂದ್ಯದಲ್ಲಿ ಇವರು ಸ್ಥಿರವಾದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದೇ ಆದಲ್ಲಿ ದೊಡ್ಡ ರೆಕಾರ್ಡ್‌ಗೆ ತಮ್ಮ ಹೆಸರನ್ನು ನಮೂದಿಸಬಹುದಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುವ ರೋಹಿತ್ ತಮ್ಮ ನೈಜ್ಯ ಬ್ಯಾಟಿಂಗ್ ನಡೆಸುವ ಅವಶ್ಯಕತೆ ಇದೆ. ಅಲ್ಲದೆ ತಮ್ಮ ಹಳೆಯ ಫಾರ್ಮ್‌ಗೆ ಮರಳಿ ತಮ್ಮ ಮೇಲಿನ ಟೀಕೆಗಳಿಗೆ ಬ್ಯಾಟ್‌ನಿಂದ ಉತ್ತರ ನೀಡುವ ಅನಿವಾರ್ಯತೆ ಇದೆ. ಹೀಗಾಗಿ ಸೋಮವಾರದ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ರೋಹಿತ್ ಶರ್ಮಾ ಅವರ ಮೇಲೆ ನೆಟ್ಟಿರಲಿವೆ. ಐಪಿಎಲ್‌ನಲ್ಲಿ ರೋಹಿತ್ ಕೆಕೆಆರ್ ವಿರುದ್ಧ 900 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಐಪಿಎಲ್ 2025 ರ ಮೊದಲ ಎರಡು ಪಂದ್ಯಗಳಲ್ಲಿ ವೈಫಲ್ಯ ಕಂಡಿರುವ ಮುಂಬೈ ಬ್ಯಾಟರ್, ಮೂರನೇ ಪಂದ್ಯದಲ್ಲಿ ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ಮೂಲಕ ಈ ಹಿಂದೆ ಮುಂಬೈ ಬ್ಯಾಟರ್ ಒಬ್ಬ ಯಾರೂ ಮಾಡದ ಸಾಧನೆಯನ್ನು ಮಾಡಲಿದ್ದಾರೆ.

ಮುಂಬೈನ ವಾಂಖೇಡೆ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರೋಹಿತ್ ಶರ್ಮಾ ಅಂಗಳಕ್ಕೆ ಇಳಿದು, ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ದೊಡ್ಡ ದಾಖಲೆ ಬರೆಯಬಹುದಾಗಿದೆ. ಈ ಮೂಲಕ ರೋಹಿತ್ ಶರ್ಮಾ ಐತಿಹಾಸಿಕ ಸಾಧನೆಯನ್ನು ಮಾಡಲಿದ್ದಾರೆ.
ದೊಡ್ಡ ದಾಖಲೆಯ ಮೇಲೆ ರೋಹಿತ್ ಕಣ್ಣು
ಮುಂಬೈ ಹಾಗೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ. ಈಡನ್ ಗಾರ್ಡನ್ ಆಗಿರಲಿ, ಕೋಲ್ಕತ್ತಾದ ಈಡನ್ ಗಾರ್ಡನ್ ಅಂಗಳವೇ ಆಗಿರಲಿ ರೋಹಿತ್ ಆರ್ಬಟ ಜೋರಾಗಿರುತ್ತದೆ. ರೋಹಿತ್ ಕೆಕೆಆರ್ ವಿರುದ್ಧ 954 ರನ್ ಸಿಡಿಸಿದ್ದಾರೆ. ಈ ವೇಳೆ ಅವರ ಸ್ಟ್ರೈಕ್ ರೇಟ್ 128.05 ಆಗಿದೆ. ಸೋಮವಾರದ ಪಂದ್ಯದಲ್ಲಿ ರೋಹಿತ್ 46 ರನ್ ಬಾರಿಸಿದ್ದೇ ಆದಲ್ಲಿ ಮುಂಬೈ ಪರ ಕೆಕೆಆರ್ ವಿರುದ್ಧ 1 ಸಾವಿರ ರನ್ ಪೂರ್ಣಗೊಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ದಾಖಲೆಯನ್ನು ಹಿಟ್ ಮ್ಯಾನ್ ಸೋಮವಾರ ಸಾಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ಈ ಐಪಿಎಲ್‌ನಲ್ಲಿ ಸಾಲು ಸಾಲು ಸೋಲುಗಳನ್ನು ಕಂಡಿದೆ. ಅಲ್ಲದೆ ಹ್ಯಾಟ್ರಿಕ್ ಸೋಲಿನ ಭೀತಿ ಅನುಭವಿಸುತ್ತಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಡೆಗೆ ಗೆಲುವು ಅನಿವಾರ್ಯವಾಗಿದೆ.
ಮುಂಬೈ ಹಾಗೂ ಕೆಕೆಆರ್ ನಡುವಣ ಅತಿ ಹೆಚ್ಚು ರನ್ ಬಾರಿಸಿದವರು
954- ರೋಹಿತ್ ಶರ್ಮಾ
590- ಸೂರ್ಯಕುಮಾರ್ ಯಾದವ್
362 - ವೆಂಕಟೇಶ್ ಅಯ್ಯರ್
349- ಗೌತಮ್ ಗಂಭೀರ್
327- ಮನೀಶ್ ಪಾಂಡೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications