For Quick Alerts
ALLOW NOTIFICATIONS  
For Daily Alerts
 

1 ಶತಕ, 2 ಸಿಕ್ಸರ್‌ ಬಾರಿಸುತ್ತಲೇ ರೋಹಿತ್‌ ಶರ್ಮಾ ದಾಖಲೆ

ಭಾರತ ಹಾಗೂ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿ ಭಾನುವಾರ (ಜ.11) ದಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಅನುಭವಿ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಈಗಾಗಲೇ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಆಡಿದ್ದು, ಈಗ ಅಂಗಳ ಪ್ರವೇಶಿಸಲು ಸಜ್ಜಾಗಿದ್ದಾರೆ. ಉಭಯ ಆಟಗರರು ಭರ್ಜರಿ ಫಾರ್ಮ್‌ನಲ್ಲಿದ್ದು, ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಮೊದಲ ಪಂದ್ಯ ವಡೋದರಾದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ರೋಹಿತ್ ಶರ್ಮಾ ಸಚಿನ್ ತೆಂಡೂಲ್ಕರ್ ಅವರ ಮಹತ್ವದ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಭರ್ಜರಿ ಲಯದಲ್ಲಿರುವ ರೋಹಿತ್‌ ಶರ್ಮಾ ಈ ಸಾಧನೆಯನ್ನು ಮಾಡಿ ಬಿಗಬಹುದು ಎಂಬ ಲೆಕ್ಕಾಚಾರವನ್ನು ಹೊಂದಿದ್ದಾರೆ. ರೋಹಿತ್‌ ಶರ್ಮಾ ಬರೆಯಲಿರುವ ದಾಖಲೆಯ ವರದಿ ಇಲ್ಲಿದೆ.

Rohit Sharma Eyes Master Blaster s Record One Century Away from Creating History vs NZ

ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ರೋಹಿತ್ ಆಗಬಹುದು. ರೋಹಿತ್‌ ಶರ್ಮಾ ಹಾಗೂ ಸಚಿನ್ ತೆಂಡೂಲ್ಕರ್ ಭಾರತದ ಪರ ಆರಂಭಿಕರಾಗಿ ತಲಾ 45 ಶತಕಗಳನ್ನು ಬಾರಿಸಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ರೋಹಿತ್ ಮತ್ತೊಂದು ಶತಕ ಗಳಿಸಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಶತಕ ಬಾರಿಸಿದ ಓಪನರ್ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ ಅತಿ ಹೆಚ್ಚು ಶತಕ ಬಾರಿಸಿದ ಹೆಗ್ಗಳಿಕೆ, ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಅವರಿಗೆ ಸಲ್ಲುತ್ತದೆ.

2 ಸಿಕ್ಸರ್‌ ಬಾರಿಸುತ್ತಲೇ ದಾಖಲೆ

ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 648 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಸರಣಿಯಲ್ಲಿ ರೋಹಿತ್‌ ಇನ್ನು ಎರಡು ಸಿಕ್ಸರ್ ಬಾರಿಸಿದ್ದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಆರಂಭಿಕರಾಗಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಸದ್ಯ ಈ ಸ್ಥಾನದಲ್ಲಿ ಅಗ್ರ ಸ್ಥಾನದಲ್ಲಿ ಕ್ರಿಸ್‌ ಗೇಲ್‌ ಇದ್ದಾರೆ. ಕ್ರಿಸ್‌ ಗೇಲ್‌ 328 ಸಿಕ್ಸರ್‌ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಒಟ್ಟು 327 ಸಿಕ್ಸರ್‌ಗಳನ್ನು ಹೊಂದಿದ್ದಾರೆ.

Rohit Sharma Eyes Master Blaster s Record One Century Away from Creating History vs NZ

ರೋಹಿತ್‌ ಶರ್ಮಾ ಸಾಧನೆ

ರೋಹಿತ್‌ ಶರ್ಮಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. 38 ವರ್ಷದ ರೋಹಿತ್‌ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ಈ ಪ್ರವಾಸದಲ್ಲಿ ರೋಹಿತ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ರೋಹಿತ್‌ ಶರ್ಮಾ ಸದ್ಯ ಟಿ20 ಕ್ರಿಕೆಟ್ ಹಾಗೂ ಟೆಸ್ಟ್‌ಗೆ ವಿದಾಯ ಹೇಳಿದ್ದಾರೆ. ಸದ್ಯ ರೋಹಿತ್‌ ಶರ್ಮಾ ಏಕದಿನ ಕ್ರಿಕೆಟ್‌ ಆಡುತ್ತಿದ್ದಾರೆ. ರೋಹಿತ್ ಶರ್ಮಾ 279 ಪಂದ್ಯಗಳಲ್ಲಿ 11516 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರು 49ರ ಸರಾಸರಿಯಲ್ಲಿ ರನ್‌ ಕಲೆ ಹಾಕಿದ್ದಾರೆ. ಈ ವೇಳೆ 33 ಶತಕ, 61 ಅರ್ಧಶತಕ ಬಾರಿಸಿದ್ದಾರೆ.

Story first published: Saturday, January 10, 2026, 15:33 [IST]
Other articles published on Jan 10, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+