Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India vs Australia: ಪಂದ್ಯದ ಆರಂಭಕ್ಕೂ ಮುನ್ನ ರೋಹಿತ್‌ಗೆ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ: ವಿಡಿಯೋ

Rohit Sharma face Virat Kohli bowling during warm-up before India vs Australia 1st Test: video

ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಗ್ಪುರದಲ್ಲಿ ಭರ್ಜರಿಯಾಗಿ ಆರಂಭವಾಗಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಚಾಲನೆ ದೊರೆತಿದೆ. ಇನ್ನು ಈ ಸರಣಿಯ ಆರಂಭಕ್ಕೂ ಮುನ್ನ ಎರಡು ತಂಡಗಳು ಕೂಡ ವಿಶೇಷ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದವು. ಆಸ್ಟ್ರೇಲಿಯಾ ತಂಡ ಬೆಂಗಳೂರಿನ ಆಲೂರಿನಲ್ಲಿ ಅಶ್ವಿನ್ ಬೌಲಿಂಗ್ ಶೈಲಿಗೆ ಹೋಲುವ ಮಹೇಶ್ ಪಿಥಿಯಾಗೆ ಅವರ ಬೌಲಿಂಗ್ ಎದುರಿಸಿದರೆ ಭಾರತ ನಾಗ್ಪುರದಲ್ಲಿಯೇ ಸಿದ್ಧತೆ ನಡೆಸಿತ್ತು.

ಆದರೆ ಕುತೂಹಲಕಾರಿ ಅಂಶವೆಂದರೆ ಟೀಮ್ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೊದಲ ಟೆಸ್ಟ್‌ಗೂ ಮುನ್ನ ತಾಲೀಮು ನಡೆಸಿದ ರೀತಿ. ಪಂದ್ಯಕ್ಕೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ನಡೆಸುತ್ತಿದ್ದರೆ ಅವರಿಗೆ ವಿರಾಟ್ ಕೊಹ್ಲಿ ಚೆಂಡೆಯುತ್ತಿದ್ದರು. ಈ ಮೂಲಕ ಇಬ್ಬರು ದಿಗ್ಗಜ ಆಟಗಾರರು ವಾರ್ಮ್‌ಅಪ್ ನಡೆಸಿದರು. ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಈ ಕ್ಷಣವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದರು.

ಇನ್ನು ಮತ್ತೊಂದು ಗಮನಾರ್ಹ ಅಂಶವೆಂದರೆ ರೋಹಿತ್ ಶರ್ಮಾ ಅವರಿಗೆ ಇದು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ. ಇನ್ನು ನಾಯಕನಾಗಿ ತವರಿನಲ್ಲಿ ಮೊದಲ ಮಹತ್ವದ ಸರಣಿ. ಹೀಗಾಗಿ ಟೀಮ್ ಇಂಡಿಯಾ ನಾಯಕ ಈ ಸವಾಲನ್ನು ಯಾವ ರೀತಿಯಾಗಿ ಎದುರಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದ್ದಾರೆ. ಸೂರ್ಯಕುಮಾರ್ ಯಾದವ್ ಹಾಗೂ ಕೆಎಸ್ ಭರತ್ ಭಾರತ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಆಡುವ ಅವಕಾಶ ಗಳಿಸಿಕೊಂಡಿದ್ದಾರೆ. ಈ ಮೂಲಕ ಈ ಇಬ್ಬರು ಆಟಗಾರರು ಕೂಡ ಸುದೀರ್ಘ ಕಾಲದಿಂದ ಕಾಯುತ್ತಿದ್ದ ಸಂದರ್ಭ ಇಂದು ನಿಜವಾಗಿದೆ.

ಇನ್ನು ಟೀಮ್ ಇಂಡಿಯಾ ಈ ಪಂದ್ಯಕ್ಕೆ ಮೂವರು ಸ್ಪಿನ್ನರ್‌ಗಳು ಹಾಗೂ ಇಬ್ಬರು ವೇಗಿಗಳ ಸಂಯೋಜನೆಯೊಂದಿಗೆ ಕಣಕ್ಕಿಳಿದಿದೆ. ರವೀಂದ್ರ ಜಡೇಜಾ, ಆರ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಸ್ಪಿನ್ನರ್‌ಗಳಾಗಿ ತಂಡದಲ್ಲಿದ್ದರೆ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ವೇಗಿಗಳಾಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (WK), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (WK), ಪ್ಯಾಟ್ ಕಮಿನ್ಸ್ (c), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಲ್ಯಾನ್ಸ್ ಮೋರಿಸ್

Story first published: Thursday, February 9, 2023, 11:30 [IST]
Other articles published on Feb 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+