Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ನಿವೃತ್ತಿಯ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ಭಾರತ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಗುರುವಾರ ನಾಗ್ಪುರದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ವಾಡಿಕೆಯಂತೆ ಉಭಯ ತಂಡಗಳ ನಾಯಕರು ಬುಧವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈಗಿನ ಸದ್ಯದ ಪರಿಸ್ಥಿತಿಗಳನ್ನು ನೋಡಿದರೆ, ರೋಹಿತ್‌ ಶರ್ಮಾಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಆಗ ರೋಹಿತ್ ಶರ್ಮಾ ಕೊಂಚ ಸಿಟ್ಟಾದರು ಎಂದು ತಿಳಿದು ಬಂದಿದೆ.

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಅವರಿಗೆ ನಿವೃತ್ತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಬಗ್ಗೆ ಉತ್ತರ ನೀಡಿರುವ ರೋಹಿತ್ ಸದ್ಯ ಭವಿಷ್ಯದ ಬಗ್ಗೆ ಚಿಂತೆ ಇಲ್ಲ. ಈಗ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಯ ಮೇಲೆ ಚಿತ್ತ ಹರಿಸಲಾಗುವುದು. ಈ ಸಮಯದಲ್ಲಿ ವೃತ್ತಿ ಜೀವನದ ಬಗ್ಗೆ ಯಾವುದೇ ಹೇಳಿಕೆಗಳನ್ನು ನಾನು ಕೊಡಲಾರೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

Rohit Sharma Focused on England ODI Series and Champions Trophy Dismisses Retirement Talks

ಟೀಮ್ ಇಂಡಿಯಾ ತವರಿನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದೆ. ಅಲ್ಲದೆ ಸರಣಿಯನ್ನು 4-1ರಿಂದ ವಶಕ್ಕೆ ಪಡೆದಿದೆ. ಈಗ ಮತ್ತೊಂದು ಸರಣಿ ಗೆಲುವಿನ ನಗೆ ಬೀರಿ ಚಾಂಪಿಯನ್ಸ್‌ ಟ್ರೋಫಿಗೆ ಪ್ರಯಾಣ ಬೆಳೆಸುವ ಇರಾದೆ ಟೀಮ್ ಇಂಡಿಯಾದ್ದಾಗಿದೆ. ಈ ನಿಟ್ಟಿನಲ್ಲಿ ತಂಡದ ಆಟಗಾರರು ಸಹ ಭರ್ಜರಿ ಅಭ್ಯಾಸವನ್ನು ನಡೆಸಿದ್ದಾರೆ. ಇಂಗ್ಲೆಂಡ್‌ ಸಹ ಈ ಸರಣಿಯಲ್ಲಿ ಭರ್ಜರಿ ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದೆ.

"ನನ್ನ ಭವಿಷ್ಯದ ಬಗ್ಗೆ ಹಲವು ವರ್ಷಗಳಿಂದ ವರದಿಗಳು ಬರುತ್ತಿವೆ. ಮತ್ತೆ ವರದಿಗಳನ್ನು ಸ್ಪಷ್ಟಪಡಿಸಲು ನಾವು ಇಲ್ಲಿ ಕುಳಿತಿಲ್ಲ. ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿ ಹಾಗೂ ಚಾಂಪಿಯನ್ಸ್‌ ಟ್ರೋಫಿಗಳ ಮೇಲೆ ತಮ್ಮ ಚಿತ್ತ ನೆಟ್ಟಿವೆ. ಕ್ರಿಕೆಟಿಗರಾಗಿ ಏರಿಳಿತಗಳು ಇದ್ದೇ ಇರುತ್ತವೆ ಮತ್ತು ಅವರು ತಮ್ಮ ವೃತ್ತಿಜೀವನದಲ್ಲಿ ಅವುಗಳನ್ನು ಹಲವು ಬಾರಿ ಎದುರಿಸಿದ್ದಾವೆ. ಪ್ರತಿ ದಿನವೂ ಹೊಸ ದಿನ, ಪ್ರತಿ ಸರಣಿಯೂ ಹೊಸ ಸರಣಿ ಎಂದು ನಮಗೆ ತಿಳಿದಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

Rohit Sharma Focused on England ODI Series and Champions Trophy Dismisses Retirement Talks

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ರೋಹಿತ್‌ ಆಡಿದ ಮೂರು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಇವರು ಟೀಕೆಗೆ ಗುರಿಯಾಗಿದ್ದರು. ಅಲ್ಲದೆ ತಮ್ಮ ಫಾರ್ಮ್‌ ಕಂಡುಕೊಳ್ಳಲು ಅನುಭವಿ ಆಟಗಾರರಿಗೆ ಬಿಸಿಸಿಐ ದೇಶೀಯ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಿತ್ತು. ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನೀಡುವಷ್ಟೇ ಮನ್ನಣೆಯನ್ನು ದೇಸೀಯ ಟೂರ್ನಿಗಳಿಗೆ ನೀಡಬೇಕು ಎಂದು ತಿಳಿಸಿತ್ತು. ಈ ಬೆನ್ನಲ್ಲೆ ರೋಹಿತ್ ಶರ್ಮಾ ಮುಂಬೈ ಪರ ರಣಜಿ ಟೂರ್ನಿ ಆಡಿದ್ದರು. ಆದರೆ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ತಮ್ಮ ನೈಜ ಆಟವನ್ನು ಆಡಿದರು.

Story first published: Wednesday, February 5, 2025, 23:00 [IST]
Other articles published on Feb 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+