For Quick Alerts
ALLOW NOTIFICATIONS  
For Daily Alerts
 

Rohit Sharma: ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾಗೆ ಇತಿಹಾಸ ಸೃಷ್ಟಿಸುವ ಅವಕಾಶ

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಇತ್ತೀಚಿನ ಫಾರ್ಮ್ ಅತ್ಯಂತ ಕಳಪೆಯಾಗಿದೆ. ಈಗ ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತನ್ನ ಸ್ಪೋಟಕ ಫಾರ್ಮ್‌ಗೆ ಮರಳಲು ಸಜ್ಜಾಗಿದ್ದಾರೆ. ಫೆಬ್ರವರಿ 19 ರಿಂದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಅದಕ್ಕೂ ಮುನ್ನ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ವಿಶೇಷ ಸಾಧನೆ ಮಾಡುವ ಅವಕಾಶವನ್ನು ಹೊಂದಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಮೊದಲು ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿ ಮೊದಲ ಏಕದಿನ ಪಂದ್ಯ ಗುರುವಾರ ಫೆಬ್ರವರಿ 6 ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ (ವಿಸಿಎ) ಕ್ರೀಡಾಂಗಣದಲ್ಲಿ ನಡೆಯಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಸೋಲಿನ ನಂತರ ಭಾರತ ಏಕದಿನ ಕ್ರಿಕೆಟ್ ಆಡುತ್ತಿದೆ. ಈ ವೇಳೆ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆಯನ್ನು ಮುರಿಯುವ ಗುರಿಯನ್ನು ಹೊಂದಿದ್ದಾರೆ.

Rohit Sharma gets chance to create history in ODI cricket

ಫೆಬ್ರವರಿ 6 ರಿಂದ ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿರು ರೋಹಿತ್ ಫಾರ್ಮ್‌ಗೆ ಮರಳುವುದರ ಜೊತೆಗೆ ದಾಖಲೆ ಸೃಷ್ಟಿಸಲಿದ್ದಾರೆ. ರೋಹಿತ್ ಶರ್ಮಾ ಏಕದಿನದಲ್ಲಿ 11000 ರನ್ ಪೂರೈಸಿದ ಎರಡನೇ ವೇಗದ ಆಟಗಾರನಾಗಲು ಕೇವಲ 134 ರನ್ ಅಗತ್ಯವಿದೆ. ವಿರಾಟ್ ಕೊಹ್ಲಿ ಕೇವಲ 222 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಟೀಮ್ ಇಂಡಿಯಾ ಪರ ಏಕದಿನ ಮಾದರಿ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಅವರು 257 ಏಕದಿನ ಇನ್ನಿಂಗ್ಸ್‌ಗಳಲ್ಲಿ 49.16 ರ ಅತ್ಯುತ್ತಮ ಸರಾಸರಿ ಮತ್ತು 92.43 ರ ಸ್ಟ್ರೈಕ್ ರೇಟ್‌ನಲ್ಲಿ 10866 ರನ್ ಕಲೆ ಹಾಕಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲು ರೋಹಿತ್ ಶರ್ಮಾ ಅವರಿಗೆ 18 ಇನ್ನಿಂಗ್ಸ್‌ಗಳಲ್ಲಿ 134 ರನ್ ಅವಶ್ಯಕತೆಯಿದೆ. ಸಚಿನ್ 276 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ಇದೀಗ ಸಚಿನ್ ತೆಂಡೂಲ್ಕರ್ (18426), ವಿರಾಟ್ ಕೊಹ್ಲಿ (13906) ಮತ್ತು ಸೌರವ್ ಗಂಗೂಲಿ (11363) ನಂತರ 11000 ರನ್ ಗಳಿಸಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಲಿದ್ದಾರೆ. ವಿಶ್ವ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ 11ನೇ ಸ್ಥಾನ ಪಡೆದಿದ್ದಾರೆ.

ದೇಶೀಯ ಕ್ರಿಕೆಟ್‌ನತ್ತ ಶರ್ಮಾ

ಫಾರ್ಮ್ ಸಮಸ್ಯೆಗಳನ್ನು ಎದುರಿಸುತ್ತಿರುವ ರೋಹಿತ್ ಶರ್ಮಾ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ಹಳೆಯ ಟ್ರ್ಯಾಕ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ರೋಹಿತ್ ಕಣಕ್ಕಿಳಿಯಲಿದ್ದಾರೆ. ಮುಂಬೈ ಕ್ರಿಕೆಟ್ ಸೋಮವಾರ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದೆ. ಮುಂಬೈ ತಂಡವನ್ನು ಅಜಿಂಕ್ಯಾ ರಹಾನೆ ಮುನ್ನಡೆಸುತ್ತಿದ್ದಾರೆ.

Story first published: Tuesday, January 21, 2025, 22:23 [IST]
Other articles published on Jan 21, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+