ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ಈ ಸರಣಿಯು ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಸರಣಿಯನ್ನು ಗೆದ್ದು ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ಈ ಸರಣಿ ಮಹತ್ವದಾಗಿದೆ.
ವಿರಾಟ್ ಕೊಹ್ಲಿ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ತಂಡದ ಭಾಗವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಸರಣಿಯಲ್ಲಿ ಅವರು ವಿಶೇಷ ದಾಖಲೆಯನ್ನು ಬರೆಯುವ ನಿರೀಕ್ಷೆ ಇದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಎಂಎಸ್ ಧೋನಿಯನ್ನು ಮೀರಿಸಬಹುದು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಎಲ್ಲಾ ಮೂರು ಮಾದರಿಗಳಲ್ಲಿ ಟೀಮ್ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರು. ಅವರು ಇದುವರೆಗೆ ಟೀಮ್ ಇಂಡಿಯಾ ಪರ 295 ಪಂದ್ಯಗಳನ್ನು ಗೆದ್ದಿದ್ದಾರೆ. ಇಂಗ್ಲೆಂಡ್ ಸರಣಿಯಲ್ಲಿ ಒಂದು ಪಂದ್ಯ ಗೆದ್ದರೆ ಭಾರತ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯಲ್ಲಿ ಎಂಎಸ್ ಧೋನಿಯನ್ನು ಹಿಂದಿಕ್ಕಲಿದ್ದಾರೆ. ಎಂಎಸ್ ಧೋನಿ ಭಾರತ ಪರ 535 ಪಂದ್ಯಗಳನ್ನು ಆಡಿದ್ದು, 295 ರನ್ ಜಯ ಸಾಧಿಸಿದ್ದಾರೆ.
ಭಾರತ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಇದುವರೆಗೆ 313 ಗೆಲುವು ದಾಖಲಿಸಿದ್ದಾರೆ. ಅದೇ ಸಮಯದಲ್ಲಿ, ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ ಭಾರತ ಪರ 307 ಪಂದ್ಯಗಳನ್ನು ಗೆದ್ದಿದ್ದಾರೆ. ಈ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಭಾರತದ ಪರ 300 ಪಂದ್ಯಗಳನ್ನು ಗೆದ್ದ ಕ್ಲಬ್‌ಗೆ ಸೇರಲು ಕೇವಲ 5 ಗೆಲುವುಗಳಿಂದ ದೂರ ನಿಂತಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಎಲ್ಲಾ ಮೂರು ಮಾದರಿಗಳಲ್ಲಿ ಟೀಮ್ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರು. ಅವರು ಇದುವರೆಗೆ ಟೀಮ್ ಇಂಡಿಯಾ ಪರ 295 ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂಗ್ಲೆಂಡ್ ಸರಣಿಯಲ್ಲಿ ಒಂದು ಪಂದ್ಯ ಗೆದ್ದರೆ ಭಾರತ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯಲ್ಲಿ ಎಂಎಸ್ ಧೋನಿಯನ್ನು ಹಿಂದಿಕ್ಕಲಿದ್ದಾರೆ.

ಟೀಮ್ ಇಂಡಿಯಾ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿದ ನಾಯಕರ ಪಟ್ಟಿಯನ್ನು ನೋಡುತ್ತಾ ಸಾಗಿದರೆ ಈ ಪಟ್ಟಿಯ ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ ನಿಲ್ಲುತ್ತಾರೆ. ಇವರು ಭಾರತಕ್ಕೆ 313 ಬಾರಿ ಜಯದ ಮಾಲೆ ತೊಡಿಸಿದ್ದರು. ಇನ್ನು ಸಚಿನ್ 307 ಗೆದ್ದಿದ್ದಾರೆ. ರೋಹಿತ್ ಶರ್ಮಾ ಹಾಗೂ ಎಂಎಸ್ ಧೋನಿ ಕ್ರಮವಾಗಿ 295 ಗೆಲುವಿನ ರುಚಿ ಕಂಡಿದೆ. ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಯುವರಾಜ್ ಸಿಂಗ್ ಹೆಸರು ಕಾಣಿಸಿಕೊಳ್ಳುತ್ತದೆ. ಇವರ ನಾಯಕತ್ವದಲ್ಲಿ ಟೀಮ್ ಇಂಡಿಯಾ 227 ಪಂದ್ಯ ಗೆದ್ದಿದೆ. ಇನ್ನು ಟೀಮ್ ಇಂಡಿಯಾದ ಹಾಲಿ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಭಾರತ 216 ಜಯ ಸಾಧಿಸಿದೆ.