For Quick Alerts
ALLOW NOTIFICATIONS  
For Daily Alerts
 

Melbourne Test: ರೋಹಿತ್ ಶರ್ಮಾಗೆ ರಹಾನೆ-ಕೊಹ್ಲಿ ಕ್ಲಬ್ ಸೇರುವ ಅವಕಾಶ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಉಭಯ ತಂಡಗಳು ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರಿಕೆಟ್ ಸ್ಟೃಡಿಯಂನಲ್ಲಿ ಮುಖಾಮುಖಿಯಾಗಲಿವೆ. ಮೆಲ್ಬೋರ್ನ್‌ ಅಂಗಳದಲ್ಲಿ ಟೀಮ್ ಇಂಡಿಯಾದ ದಾಖಲೆ ಉತ್ತಮವಾಗಿದೆ. ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಅವರಿಗೆ ಹೊಸ ದಾಖಲೆ ಮಾಡುವ ಅವಕಾಶವನ್ನು ಹೊಂದಿದ್ದಾತೆ.

ಮೆಲ್ಬೋರ್ನ್‌ನಲ್ಲಿ ಟೀಮ್ ಇಂಡಿಯಾದಲ್ಲಿ 2014ರಿಂದ ಇಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆಲುವು ಸಾಧಿಸಿದ್ದಾರೆ. ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೆಲ್ಬೋರ್ನ್‌ನಲ್ಲಿ
ಟೀಮ್ ಇಂಡಿಯಾ ಕೊನೆಯ ಸೋಲು ಕಂಡಿದ್ದು 2011ರಲ್ಲಿ. ಆಗ ಎಂಎಸ್‌ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿತ್ತು. ಇದಾದ ನಂತರ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ.

Rohit Sharma has chance to join Ajinkya Rahane-Virat Kohli achievement club in Melbourne

ಭಾರತ ತಂಡ ಮೆಲ್ಬೋರ್ನ್‌ನಲ್ಲಿ 1948 ರಿಂದ 2020 ರವರೆಗೆ ಒಟ್ಟು 14 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಕೇವಲ ನಾಲ್ಕರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲಿ ಭಾರತ ಸೋಲು ಮತ್ತು ಡ್ರಾ ಎದುರಿಸಿದೆ.

2007ರಲ್ಲಿ ಭಾರತ ತಂಡವನ್ನು 337 ರನ್‌ಗಳಿಂದ ಆಸ್ಟ್ರೇಲಿಯಾ ಸೋಲಿಸಿತ್ತು. ಆಗ ಭಾರತ ತಂಡ ಕಮಾಂಡ್ ಮಾಜಿ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಕೈಯಲ್ಲಿತ್ತು. ನಂತರ 2011ರಲ್ಲಿ ಎಂಎಸ್‌ ಧೋನಿ ನಾಯಕತ್ವದಲ್ಲಿ ಭಾರತ ಎದುರು ಆಸ್ಟ್ರೇಲಿಯಾ 122 ರನ್‌ಗಳ ಗೆಲುವು ಸಾಧಿಸಿತ್ತು. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ 2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಡ್ರಾ ಮಾಡಿಕೊಂಡಿತ್ತು. ಬಳಿಕ 2018ರಲ್ಲಿ ವಿರಾಟ್ ಕೊಹ್ಲಿ ಮತ್ತು 2020ರಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ. ಇದೀಗ ಮೆಲ್ಬೋರ್ನ್‌ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಕ್ಲಬ್ ಸೇರುವ ಅವಕಾಶವನ್ನು ರೋಹಿತ್ ಶರ್ಮಾ ಹೊಂದಿದ್ದಾರೆ.

ಮೆಲ್ಬೋರ್ನ್‌ನಲ್ಲಿ ಭಾರತದ ಗೆಲುವಿಗೆ ಕಾರಣರಾದವರು ಕೇವಲ ನಾಲ್ವರು ನಾಯಕರು. ಇವರಲ್ಲಿ ಬಿಷನ್ ಸಿಂಗ್ ಬೇಡಿ, ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಸೇರಿದ್ದಾರೆ. ಈ ಪಟ್ಟಿಗೆ ಸೇರಲು ರೋಹಿತ್ ಶರ್ಮಾಗೆ ಸುವರ್ಣಾವಕಾಶ ಸಿಕ್ಕಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ಈ ಪಟ್ಟಿಯಲ್ಲಿ ಸೇರ್ಪಡೆಗೊಂಡ ಐದನೇ ಭಾರತದ ನಾಯಕ ಎನಿಸಿಕೊಳ್ಳಲಿದ್ದಾರೆ.

ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನಿವೃತ್ತಿಯ ನಂತರ ಭಾರತ ಆಡುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಬ್ರಿಸ್ಬೇನ್‌ನಲ್ಲಿ ನಡೆದ ಕೊನೆಯ ಪಂದ್ಯದ ನಂತರ ಅಶ್ವಿನ್ ನಿವೃತ್ತರಾದರು. ಪ್ರಸಕ್ತ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಶ್ವಿನ್ ಇದುವರೆಗೆ ಆಡಿರುವ ಮೂರು ಪಂದ್ಯಗಳ ಪೈಕಿ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದರು. ಸದ್ಯ ಸರಣಿ 1-1ರಲ್ಲಿ ಸಮಬಲವಾಗಿದ್ದು, ಟೀಮ್ ಇಂಡಿಯಾ ಮುನ್ನಡೆಯ ಮೇಲೆ ಕಣ್ಣಿಟ್ಟಿದೆ.

Story first published: Saturday, December 21, 2024, 15:14 [IST]
Other articles published on Dec 21, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+