Rohit Sharma: ಹಿಟ್‌ಮ್ಯಾನ್ ಹೆಸರಿನಲ್ಲಿ 5 ಐತಿಹಾಸಿಕ ದಾಖಲೆಗಳು; ಮುರಿಯಲು ಅಸಾಧ್ಯ!
ವಿಶ್ವ ಕ್ರಿಕೆಟ್‌ನಲ್ಲಿ ಇಂದಿಗೂ ಮುರಿಯಲಾಗದ ಹಲವು ದಾಖಲೆಗಳಿವೆ. ಈ ಸಾಲಿನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಐದು ದಾಖಲೆಗಳಿವೆ. ಈ ದಾಖಲೆಗಳನ್ನು ಮಾಡುವುದು ಕಷ್ಟಕರವಲ್ಲ. ಆದರೇ ದಾಖಲೆಗಳನ್ನು ಮುರಿಯುವುದು ಅಸಾಧ್ಯ.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್‌ಗೆ ರೋಹಿತ್ ಶರ್ಮಾ ಹೆಸರುವಾಸಿಯಾಗಿದ್ದಾರೆ. ಈ ಸ್ಪೋಟಕ ಬ್ಯಾಟಿಂಗ್‌ನಿಂದಲ್ಲೇ ಸೃಷ್ಟಿಸಿರುವ ಐದು ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ತಿಳಿಯಿರಿ.

ಗರಿಷ್ಠ ಸ್ಕೋರ್
2014ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಯಾರೂ ಊಹಿಸಲಾಗದ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಈ ಪಂದ್ಯದಲ್ಲಿ 264 ರನ್ ಗಳಿಸುವ ಮೂಲಕ ಅವರು ಏಕದಿನ ಮಾದರಿಯಲ್ಲಿ ಗರಿಷ್ಠ ಸ್ಕೋರ್ ಮಾಡಿದ ವಿಶ್ವದಾಖಲೆ ಮಾಡಿದ್ದರು. ಅವರ ಈ ದಾಖಲೆ ಮುರಿಯುವುದು ಅಸಾಧ್ಯ ಎನಿಸುತ್ತಿದೆ.
ಮೂರು ದ್ವಿಶತಕಗಳು
ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಶ್ರೇಷ್ಠ ಬ್ಯಾಟರ್ ಎಂಬುದಕ್ಕೆ ಯಾವುದೇ ಉದಾಹರಣೆಗಳು ಬೇಕಿಲ್ಲ. ಏಕೆಂದರೆ ಅವರ ದಾಖಲೆಗಳಿಂದ ಅಳೆಯಬಹುದು. ಅನೇಕ ಬ್ಯಾಟರ್‌ಗಳು ತಮ್ಮ ಏಕದಿನ ವೃತ್ತಿಜೀವನದಲ್ಲಿ ಒಂದು ದ್ವಿಶತಕವನ್ನು ಸಹ ಗಳಿಸುವಲ್ಲಿ ಯಶಸ್ವಿಯಾಗದಿದ್ದರೂ, ರೋಹಿತ್ ತಲಾ ಮೂರು ದ್ವಿಶತಕಗಳನ್ನು ಗಳಿಸಿದ್ದಾರೆ. ಅವರು 208, 209 ಮತ್ತು 264 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿ ಮಿಂಚಿದ್ದಾರೆ.
ಅತಿಹೆಚ್ಚು ಸಿಕ್ಸರ್
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ ರೋಹಿತ್ ಶರ್ಮಾ. ಒಟ್ಟಾರೆಯಾಗಿ, ಅವರು ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಇದುವರೆಗೆ 620 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದುವರೆಗೆ 600ರ ಗಡಿ ಮುಟ್ಟಲು ಬೇರೆ ಯಾವುದೇ ಬ್ಯಾಟರ್‌ಗಳಿಂದ ಸಾಧ್ಯವಾಗಿಲ್ಲ.
ವಿಶ್ವಕಪ್ ಶತಕಗಳ ದಾಖಲೆ
ರೋಹಿತ್ ಶರ್ಮಾ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. 2019 ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅವರು ಅಮೋಘ ಬ್ಯಾಟಿಂಗ್ ಮಾಡುವಾಗ 5 ಶತಕಗಳನ್ನು ಹೊಡೆದಿದ್ದರು. ಈ ದಾಖಲೆಯನ್ನು ಮುರಿಯುವುದಲ್ಲ, ಅದನ್ನು ಸರಿಗಟ್ಟಲು ಯಾರಿಂದಲ್ಲೂ ಸಾಧ್ಯವಾಗಿಲ್ಲ.
ಟಿ20ಯಲ್ಲಿ ಅತಿಹೆಚ್ಚು ಸಿಕ್ಸರ್
ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪೈಕಿ ರೋಹಿತ್ ಶರ್ಮಾ ಆಗ್ರ ಸ್ಥಾನದಲ್ಲಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ನಂತರ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿರುವ ಹಿಟ್‌ಮ್ಯಾನ್ 205 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇವರನ್ನು ಬಿಟ್ಟರೆ ಬಿಟ್ಟರೆ ವಿಶ್ವದ ಯಾವ ಬ್ಯಾಟರ್ ಕೂಡ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಗಳಿಸಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications