ಭಾರತ vs ಆಸೀಸ್: ಟೀಮ್ ಇಂಡಿಯಾ ಸೇರಿಕೊಂಡ ಹಿಟ್‌ಮ್ಯಾನ್: ವಿಡಿಯೋ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕುತೂಹಲಕಾರಿ ಟೆಸ್ಟ್ ಸರಣಿ ನಡೆಯುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು 1-1ರ ಸಮಬಲ ಸಾಧಿಸಿದೆ. ಮೂರನೇ ಟೆಸ್ಟ್ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಗಾಯಕ್ಕೀಡಾಗಿದ್ದ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಟೆಸ್ಟ್ ಸರಣಿಯ ನಿಮಿತ್ತ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್, ಬುಧವಾರ (ಡಿಸೆಂಬರ್ 30) ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.
ಐಪಿಎಲ್ ಬಳಿಕ ಭಾರತ ತಂಡ ಪ್ರವಾಸ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಹೊರಟಾಗ ತಂಡದ ಜೊತೆಗೆ ರೋಹಿತ್ ಬಂದಿರಲಿಲ್ಲ. ಡಿಸೆಂಬರ್ 15ರಂದು ಆಸ್ಟ್ರೇಲಿಯಾಕ್ಕೆ ಬಂದಿದ್ದ ಶರ್ಮಾ ಅವರ 14 ದಿನಗಳ ಕೊರೊನಾ ಕ್ವಾರಂಟೈನ್ ಡಿಸೆಂಬರ್ 30ಕ್ಕೆ ಕೊನೆಗೊಂಡಿದೆ. ಹೀಗಾಗಿ ಶರ್ಮಾ ಟೀಮ್ ಇಂಡಿಯಾದ ಆಟಗಾರರೊಂದಿಗೆ ಕಾಣಿಸಿಕೊಂಡಿದ್ದಾರೆ.
ಭಾರತ ತಂಡದ ಆಟಗಾರರಿದ್ದ ಜಾಗಕ್ಕೆ ರೋಹಿತ್ ಬಂದು ಸಹ ಆಟಗಾರರ ಜೊತೆ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಾಕಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications