31 ಎಸೆತದಲ್ಲಿ ಅರ್ಧ ಶತಕ ಸಿಡಿಸಿದ ರೋಹಿತ್ ಶರ್ಮಾ: ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಎರಡು ತಂಡಗಳು ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ. ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬೃಹತ್ ಗುರಿ ನೀಡಿದ್ದು 353 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸಿದೆ. ಇದನ್ನು ದಿಟ್ಟವಾಗಿ ಬೆನ್ನಟ್ಟಲು ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಅದ್ಭುತ ಆರಂಭ ಒದಗಿಸಿದ್ದಾರೆ.
ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 57 ಎಸೆತಗಳಲ್ಲಿ 81 ರನ್‌ಗಳನ್ನು ಬಾರಿಸಿದ್ದು ಉತ್ತಮ ಆರಂಭಕ್ಕೆ ಕಾರಣವಾದರು. ಸ್ಪೋಟಕ ಪ್ರದರ್ಶನ ನಿಡಿದ ಅವರು 6 ಸಿಕ್ಸರ್ ಹಾಗೂ 5 ಬೌಂಡರಿ ಸಿಡಿಸಿದ್ದು 142.11ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದರು.

ಇನ್ನು ಈ ಪಂದ್ಯದಲ್ಲಿ ಮೊದಲನೇ ಸಿಕ್ಸರ್ ಬಾರಿಸುವ ಮೂಲಕ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ದೇಶದಲ್ಲಿ ಅತ್ಯಂತ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್ ಸಿಡಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಈಗ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ದಾಖಲೆ ಹೊಂದಿದ್ದ ಮಾರ್ಟಿಲ್ ಗಪ್ಟಿಲ್ ಅವರನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಭಾರತದಲ್ಲಿ ಮಾತ್ರವೇ ಈಗ 258 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ.
ಇನ್ನು ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ 5ನ ಸಿಕ್ಸರ್ ಸಿಡಿಸಿದ ಸಂದರ್ಭದಲ್ಲಿ ಅತ್ಯಂತ ವೇಗವಾಗಿ 550 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ಕೂಡ ಬರೆದಿದ್ದಾರೆ. ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಈ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. 550 ಸಿಕ್ಸರ್‌ಗಳನ್ನು ಸಿಡಿಸಲು ಕ್ರಿಸ್ ಗೇಲ್ 548 ಇನ್ನಿಂಗ್ಸ್‌ಗಳನ್ನು ಬಳಸಿಕೊಂಡಿದ್ದರೆ ರೋಹಿತ್ ಶರ್ಮಾ ಕೇವಲ 471 ಇನ್ನಿಂಗ್ಸ್‌ಗಳಲ್ಲಿಯೇ ಈ ಸಾಧನೆ ಮಾಡಿದ್ದಾರೆ.
ಇನ್ನು ನಾಯಕ ರೋಹಿತ್ ಶರ್ಮಾ ಕೇವಲ 4 ಸಿಕ್ಸರ್‌ಗಳನ್ನು ಮಾತ್ರವೇ ಸಿಡಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರೀ ದೊಡ್ಡ ದಾಖಲೆಯೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರಸ್ತುತ ಗೈಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಯಲ್ಲಿಯೂ ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದು ರೋಹಿತ್ ಶರ್ಮಾ 550 ಸಿಕ್ಸರ್ ಪೂರ್ಣಗೊಳಿಸಿದ್ದಾರೆ.
ಎಲ್ಲಾ ಮಾದರಿಗಳಲ್ಲಿಯೂ ಹೆಚ್ಚಿನ ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರು
1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 553 ಸಿಕ್ಸರ್
2. ರೋಹಿತ್ ಶರ್ಮಾ (ಭಾರತ) - 550 ಸಿಕ್ಸರ್*
3. ಶಾಹಿದ್ ಅಫ್ರಿದಿ (ಪಾಕಿಸ್ತಾನ) - 476 ಸಿಕ್ಸರ್
4. ಬ್ರೆಂಡನ್ ಮೆಕ್ಕಲಮ್ (ನ್ಯೂಜಿಲೆಂಡ್) - 398 ಸಿಕ್ಸರ್
5. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 383 ಸಿಕ್ಸರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications