Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರೋಹಿತ್ ಶರ್ಮಾಗೆ ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಭಾರತ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಆಟಗಾರ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಅಮೋಘ ಸಾಧನೆಗೆ ದೇಶದ ಅತ್ಯುನ್ನತ ಗೌರವ ಲಭಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ಅವರು ಮಾಡಿರುವ ಅದ್ಭುತ ಸಾಧನೆ ಮತ್ತು ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರವು ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಪದ್ಮಶ್ರೀ' ನೀಡಿ ಗೌರವಿಸಿದೆ. ಮಂಗಳವಾರದಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಿತ್ ಶರ್ಮಾಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಪ್ರತಿಷ್ಠಿತ ಸಮಾರಂಭ ಅದ್ಧೂರಿಯಿಂದ ಕೂಡಿತ್ತು. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹಲವು ಕೇಂದ್ರ ಸಚಿವರು ಮತ್ತು ದೇಶದ ವಿವಿಧ ರಂಗಗಳ ಪ್ರಮುಖ ಗಣ್ಯರು ಸಾಕ್ಷಿಯಾದರು. ರೋಹಿತ್ ಶರ್ಮಾ ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ಪತ್ನಿ ರಿತಿಕಾ ಸಜ್ದೇ ಉಪಸ್ಥಿತರಿದ್ದರು.

Rohit Sharma

ಮೈದಾನದಲ್ಲಿ ಎದುರಾಳಿ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡುವ ರೋಹಿತ್ ಶರ್ಮಾ ಅವರನ್ನು ಹಿಟ್‌ ಮ್ಯಾನ್‌ ಎಂದು ಕರೆಯುತ್ತಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಬಾರಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆ ಹೊಂದಿರುವ ರೋಹಿತ್‌, ಟೀಮ್ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆದಾಗ ನಾಯಕರಾಗಿದ್ದರು. ಅವರ ಈ ಅಗಾಧ ಕ್ರೀಡಾ ಸಾಧನೆಗಾಗಿ ಈ ಹಿಂದೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ' ಪ್ರಶಸ್ತಿ ನೀಡಲಾಗಿತ್ತು. ಈಗ ಅವರ ಸಾಧನೆಗೆ ಮತ್ತೊಂದು ಗರಿ ಸಂದಿದೆ.

ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು ಜಾಗತಿಕ ಮಟ್ಟದಲ್ಲಿ ಹಲವಾರು ಐತಿಹಾಸಿಕ ಸಾಧನೆ ಮಾಡಿದೆ. ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ಒಬ್ಬ ಯಶಸ್ವಿ ನಾಯಕನಾಗಿ ಯುವ ಆಟಗಾರರನ್ನು ಮುನ್ನಡೆಸಿದ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಧ್ವಜವನ್ನು ಎತ್ತಿಹಿಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

65 ಸಾಧಕರಿಗೆ ಪದ್ಮ ಪ್ರಶಸ್ತಿ

ರಾಷ್ಟ್ರಪತಿ ಭವನದಲ್ಲಿ ಜೂನ್ 23 ರಂದು ನಡೆದ ಕಾರ್ಯಕ್ರಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಒಟ್ಟು 65 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಈ ಪೈಕಿ 2 ಪದ್ಮವಿಭೂಷಣ, 7 ಪದ್ಮಭೂಷಣ ಹಾಗೂ 56 ಪದ್ಮಶ್ರೀ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ನೀಡಿದರು.

2027ರ ವಿಶ್ವಕಪ್ ಆಡುವ ಕನಸು

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇವರು ಭಾರತದ ಪರ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ತಂಡದ ಭಾಗವಾಗಿದ್ದಾರೆ. ಇವರು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗುವ ಕನಸು ಕಾಣುತ್ತಿದ್ದಾರೆ.

Story first published: Tuesday, June 23, 2026, 19:57 [IST]
Other articles published on Jun 23, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+