Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರೋಹಿತ್ ಶರ್ಮಾ ಕಣಕ್ಕೆ ಇಳಿಯುವುದು ಯಾವಾಗ? ಇಲ್ಲಿದೆ ಮಾಹಿತಿ

19ನೇ ಆವೃತ್ತಿ ಐಪಿಎಲ್‌ನ 41ನೇ ಪಂದ್ಯ ಮುಂಬೈ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಮುಂಬೈ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಣಕ್ಕೆ ಇಳಿಯುವ ಬಗ್ಗೆ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಇವರು ಕಣಕ್ಕೆ ಇಳಿಯಲಿಲ್ಲ. ಈ ಬಗ್ಗೆ ಹಾರ್ದಿಕ್ ಪಾಂಡ್ಯ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯ ಟಾಸ್‌ ಗೆದ್ದ ಬಳಿಕ ಬ್ಯಾಟಿಂಗ್ ಮಾಡಲು ಮುಂದಾಯಿತು. ಈ ವೇಳೆ ಎಲ್ಲರ ಚಿತ್ತ ತಂಡದ ಸಂಯೋಜನೆಯ ಮೇಲೆ ನೆಟ್ಟಿದ್ದವು. ಆಗ ರೋಹಿತ್ ಶರ್ಮಾ ಇನ್ನು ಫಿಟ್ ಆಗಿಲ್ಲ ಎಂದು ಹಾರ್ದಿಕ್ ಹೇಳಿದರು. ಅಲ್ಲದೆ ರೋಹಿತ್ ಇನ್ನೂ 1-2 ಪಂದ್ಯಗಳಿಗೆ ಹೊರಗುಳಿಯಬಹುದು ಎಂದು ಹೇಳಿದ್ದಾರೆ. ರೋಹಿತ್ ಶರ್ಮಾ, ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದರು. ಅಲ್ಲಿಂದ ಇವರು ಮುಂಬೈ ಪರ ಕಣಕ್ಕೆ ಇಳಿದಿಲ್ಲ. ಈ ಬಾರಿಯ ಲೀಗ್‌ನಲ್ಲಿ ರೋಹಿತ್‌ ನಾಲ್ಕನೇ ಪಂದ್ಯದಿಂದ ವಂಚಿತರಾಗಿದ್ದಾರೆ.

Rohit Sharma

ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲಿ ಮೈದಾನಕ್ಕೆ ಮರಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ, ಆದರೆ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂದು ಹಾರ್ದಿಕ್ ಹೇಳಿದ್ದಾರೆ. ಗಾಯದ ಚಿಂತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಬಹುವಾಗಿ ಕಾಡುತ್ತಿದೆ. ಗಾಯದ ಕಾರಣದಿಂದಾಗಿ ಮಿಚೆಲ್ ಸ್ಯಾಂಟ್ನರ್ ಇಡೀ ಋತುವಿನಿಂದ ಹೊರ ನಡೆದಿದ್ದಾರೆ. ಇನ್ನು ಇವರಿಗೆ ಬದಲಿ ಆಟಗಾರನನ್ನು ಮುಂಬೈ ಘೋಷಿಸಿಲ್ಲ.

ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್‌

ಐದು ಬಾರಿ ಐಪಿಎಲ್‌ ಚಾಂಪಿಯನ್ ಮುಂಬೈ ಇಂಡಿಯನ್ಸ್ ಆಡಿದ 7 ಪಂದ್ಯಗಳಲ್ಲಿ 2 ಜಯ, 5 ಸೋಲು ಕಂಡಿದ್ದು, 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ರೋಹಿತ್ ಶರ್ಮಾ ಸಾಧನೆ

38 ವರ್ಷದ ರೋಹಿತ್ ಶರ್ಮಾ ಸದ್ಯ ಭಾರತದ ಪರ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಕಣಕ್ಕೆ ಇಳಿಯುತ್ತಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಆಡಿದ 276 ಪಂದ್ಯಗಳಲ್ಲಿ 7183 ರನ್‌ ಸೇರಿಸಿದ್ದಾರೆ. ಈ ವೇಳೆ 2 ಶತಕ, 48 ಅರ್ಧಶತಕ ಬಾರಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ರಾಬಿನ್ ಮಿಂಜ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಎ.ಎಮ್. ಗಜನ್ಫರ್, ಅಶ್ವನಿ ಕುಮಾರ್.

Story first published: Wednesday, April 29, 2026, 20:08 [IST]
Other articles published on Apr 29, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+