ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹೇಗಿದೆ ರೋಹಿತ್ ಶರ್ಮಾ ಫಿಟ್‌ನೆಸ್? ವೆಸ್ಟ್ ಇಂಡೀಸ್ ಸರಣಿಗೆ ನಾಯಕ ರೋಹಿತ್ ಅಥವಾ ರಾಹುಲ್?

Rohit Sharma is almost fit now and likely to participate in West Indies Series

ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ಅಂತರದಲ್ಲಿ ಸೋಲುವುದರ ಮೂಲಕ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ಮುಖಬಂಗಕ್ಕೊಳಗಾಗಿದೆ.

ಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರುಆತ ಇದ್ದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿತ್ತು ಎಂದ ನೆಟ್ಟಿಗರು

ಹೀಗೆ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವ ಪ್ರವಾಸಿ ಟೀಂ ಇಂಡಿಯಾ ಜನವರಿ 19ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಸಂಚಲನಗಳು ನಡೆಯುತ್ತಿದ್ದು, ಇತ್ತೀಚೆಗಷ್ಟೇ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆಯನ್ನು ನೀಡಿ ಕೆಳಗಿಳಿದಿದ್ದಾರೆ. ಹೀಗಾಗಿ ಸದ್ಯ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಎದ್ದಿದ್ದು, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಇಬ್ಬರ ಹೆಸರು ಹೆಚ್ಚಾಗಿ ಕೇಳಿಬರುತ್ತಿವೆ.

ಭಾರತದ ಸೋಲಿಗೆ ಕಾರಣನಾದ ದ.ಆಫ್ರಿಕಾದ ಈ ಆಟಗಾರನನ್ನು ಕನ್ನಡಿಗನಿಗೆ ಹೋಲಿಸಿ ಹೊಗಳಿದ ರವಿಶಾಸ್ತ್ರಿಭಾರತದ ಸೋಲಿಗೆ ಕಾರಣನಾದ ದ.ಆಫ್ರಿಕಾದ ಈ ಆಟಗಾರನನ್ನು ಕನ್ನಡಿಗನಿಗೆ ಹೋಲಿಸಿ ಹೊಗಳಿದ ರವಿಶಾಸ್ತ್ರಿ

ಇನ್ನು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಟೀಮ್ ಇಂಡಿಯಾ ಆಟಗಾರರು ಕೈಗೊಳ್ಳುವ ಮುನ್ನ ಭಾರತ ಏಕದಿನ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದ ಬಿಸಿಸಿಐ ರೋಹಿತ್ ಶರ್ಮಾ ಹೆಗಲಿಗೆ ಆ ಜವಾಬ್ದಾರಿಯನ್ನು ಹೊರೆಸಿತ್ತು. ಆ ಮೂಲಕ ಭಾರತ ಟಿ ಟ್ವೆಂಟಿ ಹಾಗೂ ಏಕದಿನ ತಂಡಗಳ ನಾಯಕತ್ವವನ್ನು ಪಡೆದುಕೊಂಡಿದ್ದ ರೋಹಿತ್ ಶರ್ಮಾ, ಪ್ರವಾಸ ಕೈಗೊಳ್ಳುವ ಮುನ್ನವೇ ಅಭ್ಯಾಸ ನಡೆಸುತ್ತಿದ್ದ ವೇಳೆ ಮಂಡಿರಜ್ಜು ಗಾಯಕ್ಕೊಳಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದರು. ಹೀಗೆ ಗಾಯದ ಸಮಸ್ಯೆಗಳಿಂದಾಗಿ ಹೊರಬಿದ್ದಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಪ್ರವಾಸ ಮುಗಿದ ನಂತರ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗಳಿಗೆ ಅಲಭ್ಯರಾಗಿರುತ್ತಾರಾ ಅಥವಾ ಇಲ್ಲವಾ ಎಂಬ ಪ್ರಶ್ನೆಗಳು ಇದೀಗ ಮೂಡಿದ್ದು, ಈ ಕೆಳಕಂಡ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿವೆ.

ರೋಹಿತ್ ಅಲಭ್ಯರಾದರೆ ಕೆಎಲ್ ರಾಹುಲ್ ನಾಯಕ

ರೋಹಿತ್ ಅಲಭ್ಯರಾದರೆ ಕೆಎಲ್ ರಾಹುಲ್ ನಾಯಕ

ಮೊದಲಿಗೆ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಸುಧಾರಿಸಿಕೊಳ್ಳದ ಕಾರಣ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಜನವರಿ 19ರಿಂದ ಆರಂಭಗೊಳ್ಳುತ್ತಿರುವ ಏಕದಿನ ಸರಣಿಯಿಂದಲೂ ಕೂಡ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮುನ್ನಡೆಸುತ್ತಿದ್ದಾರೆ. ಒಂದುವೇಳೆ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಪ್ರವಾಸ ಮುಗಿದ ನಂತರವೂ ಕೂಡ ಚೇತರಿಸಿಕೊಳ್ಳದೇ ಇದ್ದರೆ ಟೀಮ್ ಇಂಡಿಯಾವನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿಯೂ ಕೂಡ ಕೆಎಲ್ ರಾಹುಲ್ ಅವರೇ ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿವೆ.

ರೋಹಿತ್ ಫಿಟ್‌ನೆಸ್ ಈಗ ಹೇಗಿದೆ?

ರೋಹಿತ್ ಫಿಟ್‌ನೆಸ್ ಈಗ ಹೇಗಿದೆ?

ಇನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಅಭ್ಯಾಸ ನಡೆಸುವ ವೇಳೆ ಗಾಯಕ್ಕೊಳಗಾಗಿದ್ದ ರೋಹಿತ್ ಶರ್ಮಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಮರಳಿ ಪಡೆಯಲು ಬೆವರು ಹರಿಸಿದ್ದಾರೆ. ಮಂಡಿರಜ್ಜು ಗಾಯಕ್ಕೊಳಗಾಗಿದ್ದ ರೋಹಿತ್ ಶರ್ಮಾ ಚೇತರಿಸಿಕೊಳ್ಳಬೇಕೆಂದರೆ ತೂಕ ಇಳಿಸಿಕೊಳ್ಳಬೇಕು ಎಂಬ ಷರತ್ತನ್ನು ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ವಿಧಿಸಿತ್ತು. ಅದರಂತೆ ಇದೀಗ ರೋಹಿತ್ ಶರ್ಮಾ ಫಿಟ್ ಆಗಿದ್ದು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸೀಮಿತ ಓವರ್ ಸರಣಿಗಳಲ್ಲಿ ನಾಯಕನಾಗಿ ಕಣಕ್ಕಿಳಿಯವುದು ಬಹುತೇಕ ಖಚಿತವಾಗಿದೆ. ಸದ್ಯ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹಂಚಿಕೊಂಡಿರುವ ಚಿತ್ರಗಳಲ್ಲಿ ಸಾಕಷ್ಟು ತೆಳ್ಳಗಾಗಿದ್ದು, ಮೈದಾನದಲ್ಲಿ ಅಬ್ಬರಿಸಲು ಫಿಟ್ ಆಗಿದ್ದಾರೆ.

Usman Khawajaರನ್ನು stage ಮೇಲೆ ಕರೆಯಲು Pat Cummins ಮಾಡಿದ್ದೇನು | Oneindia Kannada
ಭಾರತ vs ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ

ಭಾರತ vs ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮುಗಿದ ನಂತರ ಟೀಮ್ ಇಂಡಿಯಾ ಭಾರತಕ್ಕೆ ಮರಳಲಿದ್ದು, ವೆಸ್ಟ್ ಇಂಡೀಸ್ ಭಾರತದ ಪ್ರವಾಸವನ್ನು ಕೈಗೊಂಡು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸಲಿದೆ. ಈ ಪಂದ್ಯಗಳ ವೇಳಾ ಪಟ್ಟಿ ಈ ಕೆಳಕಂಡಂತಿದೆ..

ಮೊದಲನೇ ಏಕದಿನ ಪಂದ್ಯ: ಫೆಬ್ರವರಿ 6ಕ್ಕೆ ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ

ದ್ವಿತೀಯ ಏಕದಿನ ಪಂದ್ಯ: ಫೆಬ್ರವರಿ 9ಕ್ಕೆ ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣ

ತೃತೀಯ ಏಕದಿನ ಪಂದ್ಯ: ಫೆಬ್ರವರಿ 12ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ


ಪ್ರಥಮ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 15ಕ್ಕೆ, ಬರಬತಿ ಕ್ರೀಡಾಂಗಣ, ಕಟಕ್

ದ್ವಿತೀಯ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 18ಕ್ಕೆ ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ

ತೃತೀಯ ಟಿ ಟ್ವೆಂಟಿ ಪಂದ್ಯ: ಫೆಬ್ರವರಿ 20, ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

Story first published: Monday, January 17, 2022, 18:46 [IST]
Other articles published on Jan 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X