ನಾಯಕತ್ವದ ನಿಜವಾದ ಒತ್ತಡ ರೋಹಿತ್‌ಗೆ ಆ ಪಂದ್ಯದಲ್ಲಿ ಅರ್ಥವಾಗಲಿದೆ ಎಂದು ಎಚ್ಚರಿಸಿದ ಮಾಜಿ ಕ್ರಿಕೆಟಿಗ!

ಕಳೆದ ವರ್ಷ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯವರೆಗೂ ಟೀಮ್ ಇಂಡಿಯಾದ ಓರ್ವ ಸದಸ್ಯನಾಗಿದ್ದ ರೋಹಿತ್ ಶರ್ಮಾ ಇದೀಗ ಭಾರತ ಟಿ ಟ್ವೆಂಟಿ ಹಾಗೂ ಏಕದಿನ ತಂಡಗಳ ನಾಯಕನಾಗಿದ್ದಾರೆ. ಹೌದು, ಕಳೆದ ವರ್ಷ ನಡೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ನಂತರ ವಿರಾಟ್ ಕೊಹ್ಲಿ ಸ್ವಇಚ್ಛೆಯಿಂದ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿದರು. ಹೀಗಾಗಿ ಬಿಸಿಸಿಐ ರೋಹಿತ್ ಶರ್ಮಾ ಹೆಗಲಿಗೆ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ಹಾಕಿತು. ನಂತರ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಿದ ಬಿಸಿಸಿಐ ವಿರಾಟ್ ಕೊಹ್ಲಿ ಅವರನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ತೆಗೆದುಹಾಕಿ ರೋಹಿತ್ ಶರ್ಮಾ ಅವರನ್ನು ಭಾರತ ಏಕದಿನ ತಂಡದ ನೂತನ ನಾಯಕ ಎಂದು ಘೋಷಿಸಿತು.
ಹೀಗೆ ಭಾರತ ಟಿ ಟ್ವೆಂಟಿ ಹಾಗೂ ಏಕದಿನ ತಂಡಗಳ ನೂತನ ನಾಯಕನಾಗಿ ಆಯ್ಕೆಯಾದ ರೋಹಿತ್ ಶರ್ಮಾ ಸದ್ಯ ಭಾರತ ಟೆಸ್ಟ್ ತಂಡದ ನಾಯಕನಾಗಿ ಕೂಡ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹೌದು, ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ನಂತರ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ಕೂಡ ರಾಜೀನಾಮೆಯನ್ನು ಸಲ್ಲಿಸಿದ್ದು, ಕೊಹ್ಲಿ ನಂತರ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿಕೊಳ್ಳುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.
ಹೀಗೆ ಸಾಲು ಸಾಲು ನಾಯಕತ್ವದ ಜವಾಬ್ದಾರಿಗಳನ್ನು ರೋಹಿತ್ ಶರ್ಮಾ ಹೆಗಲಿಗೆ ಬಿಸಿಸಿಐ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ರೋಹಿತ್ ಶರ್ಮಾ ದೊಡ್ಡ ಮಟ್ಟದ ಜವಾಬ್ದಾರಿಯೊಂದಿಗೆ ತಂಡವನ್ನು ಮುನ್ನಡೆಸಬೇಕಾಗಿದೆ. ಇನ್ನು ಈ ವರ್ಷ ಆಸ್ಟ್ರೇಲಿಯಾ ನೆಲದಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ನಡೆಯಲಿದ್ದು ರೋಹಿತ್ ಶರ್ಮಾ ನಾಯಕನಾಗಿ ಇದೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯೊಂದರಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಕುರಿತಾಗಿ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಮಾತನಾಡಿದ್ದು, ರೋಹಿತ್ ಶರ್ಮಾ ಹಾಗೂ ಭಾರತ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿಯ ಕುರಿತು ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.
{photo-feature}
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications