ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ಫಾರ್ಮ್ ಮುಂದುವರೆಸಿದ್ದಾರೆ. ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಜಯ ಸಾಧಿಸಿದೆ. ಪ್ರವಾಸಿ ತಂಡ ಮೊದಲು ಬ್ಯಾಟ್ ಮಾಡಿ 270 ರನ್‌ಗಳಿಗೆ ಆಲೌಟ್ ಮಾಡಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 39.5 ಓವರ್‌ಗಳಲ್ಲಿ 1 ವಿಕೆಟ್‌ಗೆ 271 ರನ್ ಸೇರಿಸಿ ಜಯ ಸಾಧಿಸಿತು.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇನಿಂಗ್ಸ್‌ನ 13.4 ಓವರ್‌ಗಳಲ್ಲಿ ಕೇಶವ ಮಹಾರಾಜ್ ಅವರ ಎಸೆತವನ್ನು ಲಾಂಗ್ ಆನ್‌ನತ್ತ ಚೆಂಡನ್ನು ತಳ್ಳಿ ಒಂದು ರನ್ ಕದ್ದರು. ಈ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್ ಪೂರ್ಣಗೊಳಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಅವರೊಂದಿಗೆ ಸೇರಿಕೊಂಡರು.
ಸ್ಟಾರ್ ಆರಂಭಿಕ ಆಟಗಾರ ರೋಹಿತ್ ಶರ್ಮಾ ಏಕದಿನ ಸ್ವರೂಪದಲ್ಲಿ 11480 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ 4301 ರನ್, ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 4231 ರನ್ ಗಳಿಸಿದ್ದಾರೆ. 20000 ರನ್‌ಗಳ ಗಡಿ ತಲುಪಿದ ವಿಶ್ವದ 14ನೇ ಆಟಗಾರ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡರು.
ಸಚಿನ್ ತೆಂಡೂಲ್ಕರ್ - 34357 ರನ್
ವಿರಾಟ್ ಕೊಹ್ಲಿ - 27910 ರನ್
ರಾಹುಲ್ ದ್ರಾವಿಡ್ - 24064 ರನ್
ರೋಹಿತ್ ಶರ್ಮಾ - 20018 ರನ್
ಸೌರವ್ ಗಂಗೂಲಿ - 18433 ರನ್