IND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯಗಳಿಗೆ ರೋಹಿತ್ ಶರ್ಮಾ ಅಲಭ್ಯ?
ದಿನದಿಂದ ದಿನಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2024ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಕುತೂಹಲ ಮೂಡಿಸುತ್ತಿದೆ. ಮುಂದಿನ ತಿಂಗಳು ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇಷ್ಟು ದಿನ ಸರಣಿಯ ಸೋಲು ಗೆಲುವಿನ ಬಗ್ಗೆ ಲೆಕ್ಕಚಾರ ನಡೆಯುತ್ತಿದ್ದವು. ಇದೀಗ ಈ ಬ್ಲಾಕ್ ಬಸ್ಟರ್ ಸರಣಿಗೂ ಮುನ್ನ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ಭಾರತದ ನಾಯಕ ರೋಹಿತ್ ಶರ್ಮಾ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.

ಭಾರತೀಯ ಕ್ರಿಕೆಟ್ ಮಂಡಳಿಗೆ (ಬಿಸಿಸಿಐ) ಮೂಲಗಳ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಒಂದಕ್ಕೆ ವೈಯಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಹೊರಗುಳಿಯಬಹುದು. ಸರಣಿ ಆರಂಭಕ್ಕೂ ಮುನ್ನ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಅವರು ಎಲ್ಲಾ ಐದು ಟೆಸ್ಟ್ ಪಂದ್ಯಗಳನ್ನು ಆಡಬಹುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ರೋಹಿತ್ ಶರ್ಮಾ ಬದಲಿಗೆ ಯಾರು?
ಬಾರ್ಡರ್-ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯಗಳನ್ನು ರೋಹಿತ್ ಶರ್ಮಾ ಆಡಲು ಸಾಧ್ಯವಾಗದಿದ್ದರೆ, ಅವರ ಸ್ಥಾನದಲ್ಲಿ ಇನ್ ಫಾರ್ಮ್ ಅಭಿಮನ್ಯು ಈಶ್ವರನ್ ಅವರಿಗೆ ಅವಕಾಶ ಸಿಗಬಹುದು. ಆದರೆ, ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಕೂಡ ಆರಂಭಿಕ ಸ್ಥಾನದ ರೇಸ್‌ನಲ್ಲಿದ್ದಾರೆ. ಈಶ್ವರನ್ ಅವರು ಭಾರತ ಎ ತಂಡದೊಂದಿಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದು, ತಂಡದ ನಾಯಕತ್ವವನ್ನು ವಹಿಸಲಿದ್ದಾರೆ.
ಕಳೆದ ವಾರ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಮುಕ್ತಾಯವಾದ 2024ರ ಇರಾನಿ ಟ್ರೋಫಿ ಪಂದ್ಯದಲ್ಲಿ ಮುಂಬೈ ವಿರುದ್ಧ ರೆಸ್ಟ್ ಆಫ್ ಇಂಡಿಯಾ ಪರ ಸ್ಟಾರ್ ಬ್ಯಾಟರ್ ಅಭಿಮನ್ಯು ಈಶ್ವರನ್ ಅಮೋಘ ಬ್ಯಾಟಿಂಗ್ ಮಾಡಿದ್ದರು. ಅವರು 292 ಎಸೆತಗಳಲ್ಲಿ16 ಬೌಂಡರಿ ಮತ್ತು 1 ನೆರವಿನಿಂದ 191 ರನ್‌ಗಳನ್ನು ಹೊಡೆದು ಮಿಂಚಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ರೋಹಿತ್ ಶರ್ಮಾ ಬದಲಿಗೆ ಅಭಿಮನ್ಯು ಈಶ್ವರನ್ ಗೆ ಆಡುವ ಅವಕಾಶ ಸಿಗುವ ಸಾಧ್ಯತೆಯಿದೆ.
ಬಾಂಗ್ಲಾದೇಶ ವಿರುದ್ಧ ಸರಣಿ ಗೆಲುವು
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಎರಡೂ ಪಂದ್ಯಗಳ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಭಾರತ ಗೆದ್ದಿದೆ. ಈ ಸರಣಿ ಎರಡೂ ಪಂದ್ಯಗಳನ್ನು ರೋಹಿತ್ ಶರ್ಮಾ ಆಡಿದ್ದರು. ಆದರೆ ರೋಹಿತ್ ಶರ್ಮಾ ಅವರಿಂದ ಹೇಳಿಕೊಳ್ಳುವಂತ ಪ್ರದರ್ಶನ ಬರಲಿಲ್ಲ. ಭಾರತ ಈಗ ನ್ಯೂಜಿಲೆಂಡ್‌ಗೆ ಆತಿಥ್ಯ ವಹಿಸಲಿದ್ದು, ಅಕ್ಟೋಬರ್ 16 ರಿಂದ ಮೂರು ಟೆಸ್ಟ್‌ಗಳ ಸರಣಿಗೆ ಆರಂಭವಾಗಲಿದೆ. ಈ ಸರಣಿಯಲ್ಲಿ ರೋಹಿತ್ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಅಭಿಮಾನಿಗಳು ಕೂಡ ಅವರ ಶತಕದ ಸಂಭ್ರಮಾಚರಣೆ ನೋಡಲು ಕಾಯುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications