ಸಾಲು ಸಾಲು ಕಳಪೆ ಪ್ರದರ್ಶನ; ರಹಾನೆ ಬದಲು ಭಾರತ ಟೆಸ್ಟ್ ತಂಡಕ್ಕೆ ನೂತನ ಉಪನಾಯಕನ ಆಯ್ಕೆ!

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ನ್ಯೂಜಿಲೆಂಡ್ ಕೈಗೊಂಡಿರುವ ಈ ಪ್ರವಾಸ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಈಗಾಗಲೇ ಇತ್ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಮೊದಲನೇ ಪಂದ್ಯ ಮುಕ್ತಾಯಗೊಂಡಿದೆ.
ಮೊದಲಿಗೆ ಇತ್ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಎಲ್ಲಾ ಪಂದ್ಯಗಳನ್ನು ಗೆಲ್ಲುವುದರ ಮೂಲಕ ವೈಟ್ ವಾಷ್ ಬಳಿಯಿತು. ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಟಿ ಟ್ವೆಂಟಿ ಸರಣಿಯನ್ನು ಸಂಪೂರ್ಣವಾಗಿ ಟೀಮ್ ಇಂಡಿಯಾ ಕೈವಶ ಮಾಡಿಕೊಂಡಿತು. ಹೀಗೆ ಟಿ ಟ್ವೆಂಟಿ ಸರಣಿಯಲ್ಲಿ ಮುಖಭಂಗಕ್ಕೆ ಒಳಗಾದ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ಮಹತ್ವದ್ದಾಗಿದ್ದು ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯ ವಿಜೇತರಾಗಲಿದ್ದಾರೆ.
ಇನ್ನು ನ್ಯೂಜಿಲೆಂಡ್ ವಿರುದ್ಧ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿಗೆಂದು ಹೊರಗುಳಿದಿದ್ದ ಕಾರಣ ಟೀಮ್ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಅವರೇ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಆದರೆ ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲಿಯೂ ಕೂಡ ಉತ್ತಮ ಪ್ರದರ್ಶನ ನೀಡಲಾಗದೇ ಓರ್ವ ಆಟಗಾರನಾಗಿ ಯಶಸ್ಸಿನ ಹಾದಿಗೆ ಮರಳುವಲ್ಲಿ ಮತ್ತೆ ವಿಫಲರಾದರು. ಹೀಗೆ ಕಳೆದ ಒಂದೂವರೆ ವರ್ಷದಿಂದ ಫಾರ್ಮ್ ಕಂಡುಕೊಳ್ಳುವಲ್ಲಿ ಪದೇ ಪದೇ ವಿಫಲರಾಗುತ್ತಿರುವ ಅಜಿಂಕ್ಯ ರಹಾನೆಯ ಉಪನಾಯಕನ ಸ್ಥಾನಕ್ಕೆ ಇದೀಗ ಕುತ್ತು ಬಂದಿದೆ. ಹೌದು ಅಜಿಂಕ್ಯ ರಹಾನೆ ಬದಲಾಗಿ ಭಾರತ ಟೆಸ್ಟ್ ತಂಡಕ್ಕೆ ನೂತನ ಉಪ ನಾಯಕನ ನೇಮಕವಾಗುವ ಕುರಿತು ಚರ್ಚೆಗಳು ಆರಂಭವಾಗುತ್ತಿದ್ದು, ಮೂಲಗಳ ಪ್ರಕಾರ ಈ ಕೆಳಕಂಡಂತೆ ಉಪ ನಾಯಕನ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿಯೇ ಭಾರತ ಟೆಸ್ಟ್ ತಂಡಕ್ಕೆ ನೂತನ ಉಪ ನಾಯಕನ ನೇಮಕ
ಬಿಸಿಸಿಐನ ಅಧಿಕಾರಿಯೋರ್ವರು ನೀಡಿರುವ ಮಾಹಿತಿಯ ಪ್ರಕಾರ ಭಾರತ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿದ್ದು ಟೆಸ್ಟ್ ಸರಣಿಯನ್ನು ಆಡಲಿದೆ. ಈ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸುವ ಮುನ್ನ ಆಯ್ಕೆಗಾರರು ವಿಶೇಷ ಸಭೆಯನ್ನು ನಡೆಸಲಿದ್ದು ಭಾರತ ಟೆಸ್ಟ್ ತಂಡಕ್ಕೆ ನೂತನ ಉಪನಾಯಕನನ್ನು ನೇಮಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗೆ ಆಯ್ಕೆ ಸಮಿತಿ ನೇಮಿಸಲಿರುವ ಭಾರತ ಟೆಸ್ಟ್ ತಂಡದ ನೂತನ ಉಪ ನಾಯಕ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೇ ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ.

ಯಾರಾಗಲಿದ್ದಾರೆ ಉಪನಾಯಕ?
ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡದ ನೂತನ ಉಪ ನಾಯಕನ ಆಯ್ಕೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಬಿಸಿಸಿಐ ಅಧಿಕಾರಿಯೋರ್ವರು ತಿಳಿಸಿರುವ ಪ್ರಕಾರ ರೋಹಿತ್ ಶರ್ಮಾ ಅಜಿಂಕ್ಯ ರಹಾನೆ ನಂತರ ಭಾರತ ಟೆಸ್ಟ್ ತಂಡದ ಉಪನಾಯಕನ ಸ್ಥಾನವನ್ನು ಅಲಂಕರಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ರೋಹಿತ್ ಶರ್ಮಾ ಇತ್ತೀಚೆಗಷ್ಟೇ ಭಾರತ ಟಿ ಟ್ವೆಂಟಿ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದರು. ಇದೀಗ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಕೂಡ ರೋಹಿತ್ ಶರ್ಮಾ ಅಧಿಕಾರ ಸ್ವೀಕರಿಸುತ್ತಿರುವುದು ರೋಹಿತ್ ಶರ್ಮಾಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಾದಂತಾಗಿದೆ.

ದ್ವಿತೀಯ ಟೆಸ್ಟ್‌ನಿಂದ ಹೊರಬಿದ್ದಿರುವ ಅಜಿಂಕ್ಯ ರಹಾನೆ
ವಿರಾಟ್ ಕೊಹ್ಲಿ ಅಲಭ್ಯರಾಗಿದ್ದ ಕಾರಣ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೌದು, ಸದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಿಂದ ಅಜಿಂಕ್ಯ ರಹಾನೆ ಹೊರಗುಳಿದಿದ್ದು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕೂಡ ಕಳಪೆ ಪ್ರದರ್ಶನ ನೀಡಿದ್ದರು. ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ್ದ ಅಜಿಂಕ್ಯ ರಹಾನೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇವಲ 4 ರನ್ ಗಳಿಸಿದ್ದರು. ಹೀಗೆ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಅಜಿಂಕ್ಯ ರಹಾನೆ ದ್ವಿತೀಯ ಟೆಸ್ಟ್ ಪಂದ್ಯದಿಂದ ಗಾಯದ ಸಮಸ್ಯೆ ಕಾರಣದಿಂದಾಗಿ ಹೊರಗುಳಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications