4 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸುವ ಕನಸಿನಲ್ಲಿ ರೋಹಿತ್ ಶರ್ಮಾ
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ, ಸರಣಿಯಲ್ಲಿ ಕಮ್ ಬ್ಯಾಕ್ ಮಾಡುವ ಇರಾದೆಯನ್ನು ಟೀಮ್ ಇಂಡಿಯಾ ಹೊಂದಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಎರಡನೇ ಟೆಸ್ಟ್ ಗೆಲ್ಲುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯನ್ನು ರೋಹಿತ್ ಪಡೆ ಹೊಂದಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಒಂದು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ದಾಖಲೆಯನ್ನು ನಿರ್ಮಿಸಲು ಸಚಿನ್ ತೆಂಡೂಲ್ಕರ್ ಅವರಿಗೂ ಸಾಧ್ಯವಾಗಿರಲಿಲ್ಲ. ಪುಣೆಯಲ್ಲಿ ರೋಹಿತ್ ಈ ಸಾಧನೆ ಮಾಡಿದರೆ, ಭಾರತದ ಪರ ಈ ದಾಖಲೆ ಬರೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಹಾಗಿದ್ದರೆ ಆ ದಾಖಲೆ ಯಾವುದು ಎಂಬ ಬಗ್ಗೆ ವರದಿ ಇಲ್ಲಿದೆ.

ದಾಖಲೆಯ ಪುಟ ಸೇರಲು 4 ಸಿಕ್ಸರ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಕ್ಟೋಬರ್ 24 ರಿಂದ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಲಿದ್ದಾರೆ. ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ರೋಹಿತ್ 4 ಸಿಕ್ಸರ್ ಬಾರಿಸುವಲ್ಲಿ ಯಶಸ್ವಿ ಆದಲ್ಲಿ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.
ರೋಹಿತ್ ಶರ್ಮಾ ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ 88 ಸಿಕ್ಸರ್ ಬಾರಿಸಿದ ದಾಖಲೆ ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆ ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರಿಗೆ ಸಲ್ಲುತ್ತದೆ. ಇವರು ಟೆಸ್ಟ್ ಫಾರ್ಮೆಟ್‌ನಲ್ಲಿ 91 ಸಿಕ್ಸರ್ ಬಾರಿಸಿದ ಹಿರಿಮೆ ಹೊಂದಿದ್ದಾರೆ. ಪುಣೆ ಟೆಸ್ಟ್‌ನಲ್ಲಿ ಭಾರತ ಎರಡು ಇನ್ನಿಂಗ್ಸ್ ಆಡಿದರೆ, ರೋಹಿತ್ ಶರ್ಮಾ ಈ ಶ್ರೇಷ್ಠ ದಾಖಲೆಯನ್ನು ಸುಲಭವಾಗಿ ಮಾಡಬಹುದು.
ಮೂವರಿಂದ ಶತಕ ಸಾಧನೆ
ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಸಿಕ್ಸರ್ ಬಾರಿಸುವ ಲೆಕ್ಕಾಚಾರದಲ್ಲಿ ಮೂವರು ಆಟಗಾರರು ಶತಕ ಸಾಧನೆಯನ್ನು ಮಾಡಿದ್ದಾರೆ. ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ 131 ಸಿಕ್ಸರ್ ಬಾರಿಸಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡಂ ಮೆಕಲಂ ಸಹ 107 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಆಡಂ ಗಿಲ್‌ಕ್ರಿಸ್ಟ್ ಸಹ ಲಾಂಗರ್ ಫಾರ್ಮೆಟ್‌ನಲ್ಲಿ ಸಿಕ್ಸರ್ ಬಾರಿಸುವ ಲೆಕ್ಕಾಚಾರದಲ್ಲಿ ಮೂರಂಕಿ ಮುಟ್ಟಿದ್ದಾರೆ.
ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರಿಗೆ ಮೊದಲ ಸ್ಥಾನ. ಇವರು ಮೂರು ಫಾರ್ಮೆಟ್ ಸೇರಿದಂತೆ ಒಟ್ಟು 623 ಸಿಕ್ಸರ್ ಸಿಡಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದು ಇವರು 553 ಸಿಕ್ಸರ್ ಬಾರಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಶಾಹೀದ್ ಅಫ್ರಿದಿ ಇದ್ದಾರೆ. ಇವರು 476 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications