For Quick Alerts
ALLOW NOTIFICATIONS  
For Daily Alerts
 

5 ಸಿಕ್ಸರ್‌ ಬಾರಿಸುತ್ತಲೇ ರೋಹಿತ್ ಶರ್ಮಾ ದೊಡ್ಡ ದಾಖಲೆ

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ರೋಹಿತ್‌, ಎರಡನೇ ಪಂದ್ಯದಲ್ಲೂ ಇದೇ ಪ್ರದರ್ಶನ ಮುಂದುವರೆಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಮತ್ತೊಂದು ದಾಖಲೆ ನಿರ್ಮಿಸುವ ಕನಸು ರೋಹಿತ್‌ ಶರ್ಮಾ ಅವರದ್ದಾಗಿದೆ.

ಏಕದಿನ ಫಾರ್ಮೆಟ್‌ನ ದಿಗ್ಗಜ ಪ್ಲೇಯರ್‌ಗಳಲ್ಲಿ ಒಬ್ಬರು ಎಂದು ಕಾಣಿಸಿಕೊಳ್ಳುವ ರೋಹಿತ್ ಶರ್ಮಾ, ರಾಯ್‌ಪುರ್‌ದಲ್ಲಿ ಇತಿಹಾಸ ನಿರ್ಮಿಸುವ ಕನಸು ಹೊಂದಿದ್ದಾರೆ. ಈ ಪಂದ್ಯದಲ್ಲಿ ರೋಹಿತ್‌ ಆರಂಭಿಕನಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಗೆ ತಮ್ಮ ಹೆಸರನ್ನು ನಮೂದಿಸಬಹುದಾಗಿದೆ. ಇವರು ರಾಯ್‌ಪುರ್‌ದಲ್ಲಿ ಕ್ರಿಸ್‌ ಗೇಲ್‌ ಅವರ ದಾಖಲೆಯನ್ನು ಅಳಿಸಿ ಹಾಕಬಹುದಾಗಿದೆ.

Rohit Sharma on Verge of Breaking Chris Gayle s ODI Record for Most Sixes as Opener

ಕ್ರಿಸ್‌ ಗೇಲ್ ಆರಂಭಿಕರಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆ ಹೊಂದಿದ್ದಾರೆ. ಏಕದಿನ ಫಾರ್ಮೆಟ್‌ನಲ್ಲಿ ಗೇಲ್‌ ಆಡಿದ 274 ಇನಿಂಗ್ಸ್‌ಗಳಲ್ಲಿ 328 ಸಿಕ್ಸರ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್‌ ಏಕದಿನ ಪಂದ್ಯಗಳಲ್ಲಿ ಆರಂಭಿಕರಾಗಿ ಈ ವರೆಗೆ 188 ಇನ್ನಿಂಗ್ಸ್‌ಗಳಲ್ಲಿ 324 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರಾಯ್‌ಪುರ್‌ದಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್‌ 5 ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರೆ, ಆರಂಭಿಕನಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಆರಂಭಿಕರಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಪಟ್ಟಿಯಲ್ಲಿ ಸನತ್‌ ಜಯಸೂರ್ಯ (263 ಸಿಕ್ಸರ್) ಮೂರನೇ ಸ್ಥಾನದಲ್ಲಿದ್ದಾರೆ.

5 ಸಿಕ್ಸರ್‌ ಬಾರಿಸುತ್ತಲೇ ರೋಹಿತ್ ದಾಖಲೆ

ರೋಹಿತ್ ಶರ್ಮಾ ಎರಡನೇ ಏಕದಿನ ಪಂದ್ಯದಲ್ಲಿ 5 ಸಿಕ್ಸರ್ ಬಾರಿಸುತ್ತಲೇ ಮತ್ತೊಂದು ದಾಖಲೆ ನಿರ್ಮಾಣವಾಗಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್‌ ಆಡಿದ 503 ಪಂದ್ಯಗಳ 536 ಇನ್ನಿಂಗ್ಸ್‌ಗಳಲ್ಲಿ 645 ಸಿಕ್ಸರ್‌ ಸಿಡಿಸಿದ್ದಾರೆ. ಎರಡನೇ ಪಂದ್ಯದಲ್ಲಿ 5 ಸಿಕ್ಸರ್ ಬಾರಿಸುವಲ್ಲಿ ಸಫಲರಾದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ 650 ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ರಾಂಚಿಯಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ 51 ಎಸೆತಗಳಲ್ಲಿ 57 ರನ್ ಬಾರಿಸಿದ್ದರು. ಈ ವೇಳೆ 5 ಬೌಂಡರಿ, 3 ಸಿಕ್ಸರ್ ಬಾರಿಸಿ ಅಬ್ಬರಿಸಿದ್ದರು. ಅಲ್ಲದೆ ಈ ವೇಳೆ ರೋಹಿತ್ ಏಕದಿನ ಫಾರ್ಮೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಪಾಕ್‌ ಬ್ಯಾಟರ್ ಶಾಹಿನ್ ಆಫ್ರೀದಿ ದಾಖಲೆ ಮುರಿದರು. ಆಫ್ರೀದಿ ಏಕದಿನ ಕ್ರಿಕೆಟ್‌ನಲ್ಲಿ 351 ಸಿಕ್ಸರ್ ಬಾರಿಸಿದ್ದರು. ರೋಹಿತ್ ಬುಟ್ಟಿಯಲ್ಲಿ ಸದ್ಯ 352 ಸಿಕ್ಸರ್‌ಗಳು ಸೇರಿವೆ.

Story first published: Wednesday, December 3, 2025, 7:05 [IST]
Other articles published on Dec 3, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+