IND vs NZ: ನ್ಯೂಜಿಲೆಂಡ್ ಟೆಸ್ಟ್ ಸರಣಿಗಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ತಯಾರಿ
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿದೆ. ಈ ಗೆಲುವಿನ ನಂತರ ರೋಹಿತ್ ಶರ್ಮಾ ಫುಲ್ ಖುಷ್ ಆಗಿದ್ದು, ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದ್ದಾರೆ.
ಅಕ್ಟೋಬರ್ 16 ರಂದು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಹಿಟ್‌ಮ್ಯಾನ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಂಬೈನ ಜಿಯೋ ಪಾರ್ಕ್‌ನಲ್ಲಿ ರೋಹಿತ್ ಶರ್ಮಾ ಅಭ್ಯಾಸ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ಸ್ಟ್ರೆಚಿಂಗ್‌ಗಳನ್ನು ಮಾಡಿರುವ ಅವರು ಮೈದಾನದ ಸುತ್ತಲ್ಲೂ ಓಡಾಡುತ್ತಿರುವುದು ಕೂಡ ವಿಡಿಯೋದಲ್ಲಿದೆ. ಈ ಸಂದಭದಲ್ಲಿ ಮೈದಾನದಲ್ಲಿದ್ದ ಹಿಟ್‌ಮ್ಯಾನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಹುರಿದುಂಬಿಸಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ ರೋಹಿತ್ ಶರ್ಮಾ ಅಭ್ಯಾಸ ಮುಗಿಸಿ ಮನೆಗೆ ಹಿಂತಿರುಗುತ್ತಿರುವಾಗ ಅಭಿಮಾನಿಗಳು ಫೋಟೋ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದಲ್ಲದೆ, ರೋಹಿತ್ ಡ್ರೈವ್ ಮಾಡುತ್ತಿದ್ದ ನೀಲಿ ಬಣ್ಣದ ಲಂಬೋರ್ಗಿನಿ ಕಾರು ಎಲ್ಲರ ಗಮನ ಸೆಳೆದಿದೆ.
ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿ
ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಿದೆ. ಉಭಯ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದಾದ ಬಳಿಕ ಅಕ್ಟೋಬರ 24 ರಿಂದ ಪುಣೆಯಲ್ಲಿ ಎರಡನೇ ಪಂದ್ಯ ನಡೆಯಲಿದೆ. ಸರಣಿಯ ಕೊನೆಯ ಪಂದ್ಯವು ನವೆಂಬರ್ 1 ರಿಂದ ಮುಂಬೈನಲ್ಲಿ ಶುರುವಾಗಲಿದೆ. ಈ ಮೂರು ಪಂದ್ಯಗಳನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಡಿ ಆಡಲಾಗುತ್ತಿದೆ. ಈ ಟೆಸ್ಟ್ ಸರಣಿಯನ್ನು ಗೆದ್ದು ಭಾರತ ಫೈನಲ್ ಟಿಕೆಟ್ ಅನ್ನು ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಕೇನ್ ಆಡೋದು ಡೌಟ್?
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಆಯ್ಕೆಯಾಗಿದ್ದಾರೆ. ಆದರೆ ಸರಣಿಯ ಮೊದಲ ಪಂದ್ಯ ಆಡುವುದು ಅನುಮಾನವಾಗಿದೆ. ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಲಿಯಮ್ಸನ್ ತೊಡೆಸಂದು ಗಾಯಕ್ಕೆ ತುತ್ತಾಗಿದ್ದಾರೆ. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅವರು ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಬುಧವಾರ ತಿಳಿಸಿದೆ. ಈ ಬಗ್ಗೆ ಕೇನ್ ವಿಲಿಯಮ್ಸನ್ ಕೂಡ ಪ್ರತಿಕ್ರಿಯಿಸಿದ್ದು,
ಶುಕ್ರವಾರ ತಂಡದೊಂದಿಗೆ ಭಾರತಕ್ಕೆ ಪ್ರಯಾಣಿಸುವದಿಲ್ಲ. ಬದಲಿಗೆ ಮನೆಯಲ್ಲಿಯೇ ಉಳಿದು ಗಾಯದಿಂದ ಚೇತರಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications