Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ಚಾಂಪಿಯನ್ಸ್ ಟ್ರೋಫಿ ಅಖಾಡಕ್ಕಿಳಿಯಲು ಹಿಟ್‌ಮ್ಯಾನ್ ಸಿದ್ಧತೆ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಳಪೆ ಫಾರ್ಮ್‌ನಿಂದಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ರೋಹಿತ್ ಶರ್ಮಾ ಬ್ಯಾಟಿಂಗ್‌ನಲ್ಲಿ ತುಂಬಾ ಕೆಟ್ಟ ಹಂತವನ್ನು ಎದುರಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಇದು ಅವರ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯು ಫೆಬ್ರವರಿ 6 ರಿಂದ ನಾಗ್ಪುರದಲ್ಲಿ ಪ್ರಾರಂಭವಾಗಲಿದೆ. ಈ ಸರಣಿ ಮೂಲಕ ತಮ್ಮ ನೆಚ್ಚಿನ ವೈಟ್ ಬಾಲ್ ಮಾದರಿ ಕ್ರಿಕೆಟ್‌ನಲ್ಲಿ ಪುನರಾಗಮನ ಮಾಡಲು ಸಿದ್ಧತೆ ಆರಂಭಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ನಂತರ, ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಿದೆ. ಈ ಟೂರ್ನಿಯಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್‌ನೊಂದಿಗೆ ಅದ್ಭುತ ಪ್ರದರ್ಶನ ನೀಡಲು ಸಜ್ಜಾಗುತ್ತಿದ್ದಾರೆ. ಫೆಬ್ರವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಪ್ರಾರಂಭವಾಗಲಿದೆ. ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಆಡುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕೂ ಮುನ್ನ ರೋಹಿತ್ ಬ್ಯಾಟಿಂಗ್ ಅಭ್ಯಾಸ ಮಾಡಿರುವ ವಿಡಿಯೋ ವೈರಲ್ ಆಗಿದೆ.

Rohit Sharma preparing to make splash in Champions Trophy 2025

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ ಗಳಿಸಲು ರೋಹಿತ್ ಶರ್ಮಾ ಬೆವರು ಹರಿಸುತ್ತಿದ್ದಾರೆ. ರೋಹಿತ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಾ ತಮ್ಮ ಸಿದ್ಧತೆ ಆರಂಭಿಸಿದ್ದಾರೆ. ಈ ಅಭ್ಯಾಸದ ವಿಡಿಯೋವನ್ನು ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ತಮ್ಮ ನೆಚ್ಚಿನ ಫುಲ್ ಶಾಟ್ ಹೊಡೆತಗಳನ್ನು ಅಭ್ಯಾಸ ನಡೆಸುತ್ತಿದ್ದಾರೆ. ರೋಹಿತ್ ಮಿಡಲ್ ಸ್ಟಂಪ್ ಗಾರ್ಡ್‌ನೊಂದಿಗೆ ವೇಗದ ಬೌಲರ್‌ಗಳನ್ನು ಎದುರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ರೋಹಿತ್ ಶರ್ಮಾ ಅವರ ಬ್ಯಾಟ್ ಹಲವು ದಿನಗಳಿಂದ ಮೌನವಾಗಿದೆ. ಅನುಭವಿ ಬ್ಯಾಟರ್ ರನ್ ಗಳಿಸಲು ಸಾಧ್ಯವಾಗದೆ ಔಟಾಗಿದ್ದಾರೆ. ಇದೀಗ ರೋಹಿತ್ ಶರ್ಮಾ ರನ್ ಗಳಿಸಲು ಚಾಂಪಿಯನ್ಸ್ ಟ್ರೋಫಿಗಿಂತ ಉತ್ತಮ ಅವಕಾಶ ಮತ್ತೊಂದಿಲ್ಲ. ಈ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ಬ್ಯಾಟರ್ ಬೌಂಡರಿ ಸಿಕ್ಸರ್ ಸಿಡಿಸುವುದನ್ನು ನೋಡಿ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದರು. ಟಿ20 ವಿಶ್ವಕಪ್ ಗೆಲುವಿನ ಬಳಿಕ ಚುಟುಕು ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ನಂತರ ಆಗಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ರೋಹಿತ್ ಆಡಿದ್ದರು.

ರೋಹಿತ್ ಇದುವರೆಗೆ 265 ಏಕದಿನ ಪಂದ್ಯಗಳಲ್ಲಿ 31 ಶತಕ ಮತ್ತು 57 ಅರ್ಧ ಶತಕಗಳೊಂದಿಗೆ 10866 ರನ್ ಗಳಿಸುವ ಮೂಲಕ ಭಾರತದ ಅತ್ಯಂತ ಯಶಸ್ವಿ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ. ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿದ್ದು, ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. 264 ರನ್‌ಗಳು ಏಕದಿನದಲ್ಲಿ ಆಟಗಾರರೊಬ್ಬರು ಮಾಡಿದ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಇದು ರೋಹಿತ್ ಹೆಸರಿನಲ್ಲಿದೆ.

Story first published: Saturday, January 18, 2025, 7:30 [IST]
Other articles published on Jan 18, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+