Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಸಚಿನ್ ದಾಖಲೆ ಬ್ರೇಕ್ ಮಾಡಲು ರೋಹಿತ್ ಶರ್ಮಾ ರೆಡಿ

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯ ಪರ್ತ್‌ನಲ್ಲಿ ನವೆಂಬರ್ 22 ರಿಂದ ನಡೆಯಲಿದೆ. ಪರ್ತ್ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನವಿದೆ. ಒಂದು ಅವರು ಆಡಿದರೆ, ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ.

ಎರಡನೇ ಮಗುವಿನ ಜನನದಿಂದಾಗಿ ರೋಹಿತ್ ಶರ್ಮಾ ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಆದರೆ ಉಳಿದ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ಅವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸವನ್ನು ಸೃಷ್ಟಿಸಬಹುದು.

Rohit Sharma ready to break Sachin Tendulkar record in Border Gavaskar Trophy

ಏನಿದು ದಾಖಲೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಆಗ್ರಸ್ಥಾನದಲ್ಲಿದ್ದಾರೆ. ಸಚಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 34 ಬಾರ್ಡರ್ ಗವಾಸ್ಕರ್ ಟ್ರೋಫಿ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು 25 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 24 ಸಿಕ್ಸರ್‌ಗಳನ್ನು ಬಾರಿಸಿದ್ದ ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ಮ್ಯಾಥ್ಯೂ ಹೇಡನ್ ಅವರನ್ನು ಸಚಿನ್ ಹಿಂದಿಕ್ಕಿದ್ದಾರೆ.

ರೋಹಿತ್ ಶರ್ಮಾ ಈಗ ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇದುವರೆಗೆ ಅವರು ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಡಿದ 11 ಪಂದ್ಯಗಳಲ್ಲಿ 15 ಸಿಕ್ಸರ್ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲು ರೋಹಿತ್ ಗೆ 11 ಸಿಕ್ಸರ್‌ಗಳ ಅಗತ್ಯವಿದೆ.

ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದರೆ ಸಚಿನ್ ದಾಖಲೆಯನ್ನು ಮುರಿಯಲಿದ್ದಾರೆ. ರೋಹಿತ್ ಶರ್ಮಾ ಎರಡು ಸಿಕ್ಸರ್‌ ಬಾರಿಸುವಲ್ಲಿ ಯಶಸ್ವಿಯಾದರೆ,
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 16 ಸಿಕ್ಸರ್‌ಗಳನ್ನು ಹೊಂದಿರುವ ಎಂಎಸ್ ಧೋನಿ ಅವರನ್ನು ಹಿಂದಿಕ್ಕಲಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್‌

  • ಸಚಿನ್ ತೆಂಡೂಲ್ಕರ್ - 25
  • ಮ್ಯಾಥ್ಯೂ ಹೇಡನ್ - 24
  • ಎಂಎಸ್ ಧೋನಿ - 16
  • ರೋಹಿತ್ ಶರ್ಮಾ - 15
  • ಮುರಳಿ ವಿಜಯ್ - 15

Story first published: Sunday, November 17, 2024, 12:13 [IST]
Other articles published on Nov 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+