For Quick Alerts
ALLOW NOTIFICATIONS  
For Daily Alerts
 

ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ಉಪನಾಯಕ

Rohit Sharma replaces Cheteshwar Pujara as vice-captain for last 2 Tests

ಮೆಲ್ಬರ್ನ್ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಟೆಸ್ಟ್‌ಗೆ ಉತ್ಸಾಹದಿಂದ ಸಿದ್ಧವಾಗುತ್ತಿದೆ. ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಸೇರ್ಪಡೆಗೊಳ್ಳುತ್ತಿರುವುದು ತಂಡದ ಉತ್ಸಾಹವನ್ನು ಹೆಚ್ಚಿಸಿದೆ. ಈ ಮಧ್ಯೆ ರೋಹಿತ್ ಶರ್ಮಾ ಹೆಗಲಿಗೆ ಮತ್ತೊಂದು ಜವಾಬ್ಧಾರಿ ದೊರೆತಿದೆ.

ಫಿಟ್‌ನೆಸ್ ಕಾರಣದಿಂದ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದ ರೋಹಿತ್ ಶರ್ಮಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಈಗ ಟೆಸ್ಟ್ ಅಜಿಂಕ್ಯ ರಹಾನೆ ಮುನ್ನಡೆಸುತ್ತಿರುವ ಟೆಸ್ಟ್ ತಂಡದ ಉಪನಾಯಕನನ್ನಾಗಿ ರೋಹಿತ್ ಶರ್ಮಾ ಅವರನ್ನು ಹೆಸರಿಸಲಾಗಿದೆ. ಎರಡನೇ ಪಂದ್ಯದಲ್ಲಿ ಚೇತೇಶ್ವರ್ ಪೂಜಾರ ಉಪನಾಯಕನಾಗಿದ್ದರು.

ರೋಹಿತ್ ಶರ್ಮಾ ಎರಡನೇ ಟೆಸ್ಟ್‌ಗೂ ಮುನ್ನವೇ ಆಸ್ಟ್ರೇಲಿಯಾ ಸೇರಿಕೊಂಡಿದ್ದರು. ಆದರೆ ಕೊರೊನಾ ವೈರಸ್‌ನ ಹಿನ್ನೆಲೆಯಲ್ಲಿ 14 ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದ್ದ ಕಾರಣ ರೋಹಿತ್ ಶರ್ಮಾ ಎರಡನೇ ಟೆಸ್ಟ್‌ ಪಂದ್ಯವನ್ನು ಕೂಡ ತಪ್ಪಿಸಿಕೊಂಡಿದ್ದರು. ಕ್ವಾರಂಟೈನ್ ಮುಗಿಸಿದ ಬಳಿಕ ಡಿಸೆಂಬರ್ 30ರಂದು ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದರು, ಈ ವೇಳೆ ತಂಡದ ಆಟಗಾರರು ರೋಹಿತ್ ಶರ್ಮಾ ಅವರಿಗೆ ಭರ್ಜರಿ ಸ್ವಾಗತವನ್ನು ಕೋರಿದ್ದರು.

ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಆಟವನ್ನು ಪ್ರದರ್ಶಿಸಿಯೂ ಎರಡನೆ ಇನ್ನಿಂಗ್ಸ್‌ನಲ್ಲಿನ ಕಳಪೆ ಆಟದಿಂದಾಗಿ ಸೋಲಿ ಕಂಡಿತ್ತು. ಎರಡನೇ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಕೂಡ ಅಲಭ್ಯರಾಗಿದ್ದು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿತ್ತು. ಆದರೆ ಈ ಪಂದ್ಯದಲ್ಲಿ ಭಾರತ ಆಸಿಸ್ ತಂಡಕ್ಕೆ ಭರ್ಜರಿಯಾಗಿ ತಿರುಗೇಟು ನೀಡಿತು.

ಎರಡನೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಇನ್ನೂರು ರನ್‌ಗಳಿಗೂ ಮೊದಲೇ ಆಲೌಟ್ ಮಾಡುವಲ್ಲಿ ಭಾರತ ಯಶಸ್ವಿಯಾಗಿತ್ತು. ಅಜಿಂಕ್ಯ ರಹಾನೆ ನಾಯಕನ ಆಟವನ್ನು ಪ್ರದರ್ಶಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದೀಗ ಮೂರನೇ ಪಂದ್ಯಕ್ಕೆ ರೋಹಿತ್ ಶರ್ಮಾ ಕಣಕ್ಕಿಳಿಯಲು ಸಜ್ಜಾಗಿದ್ದು ಮಾತ್ರವಲ್ಲ ಉಪನಾಯಕನಾಗಿ ಅಜಿಂಕ್ಯ ರಹಾನೆಗೆ ಬೆಂಬಲವಾಗಿ ನಿಲ್ಲಲಿದ್ದಾರೆ.

Story first published: Saturday, January 2, 2021, 9:30 [IST]
Other articles published on Jan 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+