Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ನಂತರ ಏಕದಿನ ನಾಯಕತ್ವವನ್ನೂ ಕಳೆದುಕೊಂಡ ಕೊಹ್ಲಿ; ರೋಹಿತ್ ನಾಯಕತ್ವದ ಯುಗ ಶುರು!

Rohit Sharma replaces Virat Kohli as ODI captain; officially announced by BCCI

ಇತ್ತೀಚೆಗಷ್ಟೇ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ವಿರಾಟ್ ಕೊಹ್ಲಿ ಇದೀಗ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡ ಕಳೆದುಕೊಂಡಿದ್ದಾರೆ.

ಹೌದು, ಇತ್ತೀಚೆಗಷ್ಟೇ ಯುಎಇಯಲ್ಲಿ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಣೆ ಮಾಡಿದ್ದ ವಿರಾಟ್ ಕೊಹ್ಲಿಯ ದಿಢೀರ್ ನಿರ್ಧಾರ ಅವರ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರಾಸೆಯನ್ನು ಮೂಡಿಸಿತ್ತು. ಅಷ್ಟೇ ಅಲ್ಲದೇ ಇದಕ್ಕೂ ಮುನ್ನ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಕೂಡ ವಿರಾಟ್ ಕೊಹ್ಲಿ ತಮ್ಮ ನಾಯಕತ್ವವನ್ನು ತ್ಯಜಿಸಿದ್ದರು. ಹೌದು, ಯುಎಇಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಆರಂಭವಾಗುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಘೋಷಣೆಯನ್ನು ಮಾಡಿದ್ದರು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ವಿರಾಟ್ ಕೊಹ್ಲಿ ಇದೀಗ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡ ಕಳೆದುಕೊಂಡಿದ್ದಾರೆ. ಈ ಮೂಲಕ ಸದ್ಯ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ಮಾತ್ರ ವಿರಾಟ್ ಕೊಹ್ಲಿ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಅತಿ ಶೀಘ್ರದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಲಿದ್ದಾರೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಯಥೇಚ್ಛವಾಗಿ ಹರಿದಾಡುತ್ತಿತ್ತು. ಹೀಗೆ ವಿರಾಟ್ ಕೊಹ್ಲಿ ಏಕದಿನ ನಾಯಕತ್ವ ತ್ಯಜಿಸುವ ಕುರಿತಾಗಿ ಹರಿದಾಡುತ್ತಿದ್ದ ಸುದ್ದಿಯನ್ನು ಕೆಲ ವಿರಾಟ್ ಕೊಹ್ಲಿ ಅಭಿಮಾನಿಗಳು ಗಾಳಿ ಸುದ್ದಿ ಎಂದು ತಿರಸ್ಕಾರ ಮಾಡಿದ್ದರು. ಆದರೆ ಇದೀಗ ಬಿಸಿಸಿಐ ಅಧಿಕೃತವಾಗಿ ಘೋಷಣೆಯನ್ನು ಹೊರಡಿಸಿದ್ದು, ಆಯ್ಕೆಗಾರರ ಸಮಿತಿ ರೋಹಿತ್ ಶರ್ಮಾ ಅವರನ್ನು ಭಾರತ ಏಕದಿನ ತಂಡದ ನೂತನ ನಾಯಕನಾಗಿ ಆಯ್ಕೆ ಮಾಡಿದೆ ಎಂದಿದೆ. ಈ ಕುರಿತಾಗಿ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಕೂಡ ಮಾಡಿದೆ.

ವೈಟ್ ಬಾಲ್ ಕ್ರಿಕೆಟ್‍ಗೆ ಒಬ್ಬನೇ ನಾಯಕನಿರಲಿ ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡ ಬಿಸಿಸಿಐ

ವೈಟ್ ಬಾಲ್ ಕ್ರಿಕೆಟ್‍ಗೆ ಒಬ್ಬನೇ ನಾಯಕನಿರಲಿ ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡ ಬಿಸಿಸಿಐ

ಈ ಹಿಂದೆ ಹರಿದಾಡುತ್ತಿದ್ದ ಸುದ್ದಿಯ ಪ್ರಕಾರ ವೈಟ್ ಬಾಲ್ ಕ್ರಿಕೆಟ್‍ನ ಮಾದರಿಗಳಾದ ಟಿ ಟ್ವೆಂಟಿ ಮತ್ತು ಏಕದಿನ ಎರಡಕ್ಕೂ ಸಹ ಒಬ್ಬನೇ ನಾಯಕನಿರಬೇಕು ಎಂಬ ಚಿಂತನೆಯನ್ನು ಬಿಸಿಸಿಐ ನಡೆಸುತ್ತಿದೆ ಎನ್ನಲಾಗಿತ್ತು. ಅದರಂತೆ ಇದೀಗ ಇತ್ತೀಚೆಗಷ್ಟೇ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದ ರೋಹಿತ್ ಶರ್ಮಾಗೆ ಮತ್ತೊಂದು ವೈಟ್ ಬಾಲ್ ಕ್ರಿಕೆಟ್ ಮಾದರಿಯಾದ ಏಕದಿನ ತಂಡದ ನಾಯಕತ್ವದ ಜವಾಬ್ದಾರಿಯನ್ನು ಕೂಡ ವಹಿಸಲಾಗಿದೆ.

ದಕ್ಷಿಣ ಆಫ್ರಿಕಾದ ಪ್ರವಾಸದಿಂದಲೇ ರೋಹಿತ್ ಶರ್ಮಾ ನಾಯಕನ ಜವಾಬ್ದಾರಿ ಶುರು

ದಕ್ಷಿಣ ಆಫ್ರಿಕಾದ ಪ್ರವಾಸದಿಂದಲೇ ರೋಹಿತ್ ಶರ್ಮಾ ನಾಯಕನ ಜವಾಬ್ದಾರಿ ಶುರು

ಸದ್ಯ ಭಾರತ ಏಕದಿನ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಮುಂಬರುವ ದಕ್ಷಿಣ ಆಫ್ರಿಕಾದ ಪ್ರವಾಸದಿಂದಲೇ ತಮ್ಮ ಕೆಲಸವನ್ನು ಆರಂಭಿಸಲಿದ್ದಾರೆ. ಮೊದಲಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ 3 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಇದು ಮುಗಿದ ನಂತರ ಜನವರಿ 19ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಯಿಂದ ರೋಹಿತ್ ಶರ್ಮಾ ತಮ್ಮ ನಾಯಕನ ಅಧಿಕಾರ ಸ್ವೀಕರಿಸಲಿದ್ದಾರೆ.

ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಅಂಕಿಅಂಶ

ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಅಂಕಿಅಂಶ

ರೋಹಿತ್ ಶರ್ಮಾ ಇದುವರೆಗೂ ಒಟ್ಟು 10 ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು, ಈ ಪಂದ್ಯಗಳ ಪೈಕಿ ಭಾರತ 8 ಪಂದ್ಯಗಳಲ್ಲಿ ಗೆದ್ದಿದ್ದು, ಕೇವಲ 2 ಪಂದ್ಯಗಳಲ್ಲಿ ಸೋತಿದೆ.ಈ ಮೂಲಕ ರೋಹಿತ್ ಶರ್ಮಾ ತಾವು ನಾಯಕನಾಗಿ ಮುನ್ನಡೆಸಿರುವ ಪಂದ್ಯಗಳಲ್ಲಿ ಶೇ.80ರಷ್ಟು ಗೆಲುವನ್ನು ಸಾಧಿಸಿದ್ದಾರೆ.

Story first published: Thursday, December 9, 2021, 9:30 [IST]
Other articles published on Dec 9, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+