ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೆ ಮೈದಾನಕ್ಕಿಳಿದಿದ್ದಾರೆ.
ಗಾಯಾಳುವಾಗಿ ತಂಡದಿಂದ ಹೊರಬಿದ್ದಿದ್ದ ರೋಹಿತ್ ಶರ್ಮಾ ಕುರಿತು ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿದ್ದವು. ಆದರೆ ರೋಹಿತ್ ಮತ್ತೆ ಕಣಕ್ಕಿಳಿಯುವ ಮೂಲಕ ತಮ್ಮ ಫಿಟ್ನೆಸ್ ಸಾಭೀತುಪಡಿಸಿದ್ದಾರೆ.
ರೋಹಿತ್ ಶರ್ಮಾ ಗಾಯಾಳುವಾಗಿದ್ದ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಆಲ್‌ರೌಂಡರ್ ಕಿರಾನ್ ಪೊಲಾರ್ಡ್ ಮುನ್ನೆಡೆಸಿದ್ದರು. ಆದರೆ ರೋಹಿತ್ ವಾಪಸ್ಸಾತಿಯು ಇದೀಗ ಮುಂಬೈ ಇಂಡಿಯನ್ಸ್‌ಗೆ ನೂರಾನೆ ಬಲ ಬಂದಂತಾಗಿದ್ದು, ಎದುರಾಳಿಯ ಮನಸ್ಥಿತಿ ಮೇಲೂ ಪರಿಣಾಮ ಬೀರಿದೆ.
ಆಸ್ಟ್ರೇಲಿಯಾ ಪ್ರವಾಸಕ್ಕೆ ರೋಹಿತ್ ಶರ್ಮಾ ಆಯ್ಕೆಯಾಗಿಲ್ಲ. ರೋಹಿತ್ ಶರ್ಮಾ ಫಿಟ್ನೆಸ್ ಕುರಿತು ಯಾವುದೇ ಮಾಹಿತಿ ಇರದ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿಯು ಮೂರು ಫಾರ್ಮೆಟ್‌ನ ಸರಣಿಗೆ ರೋಹಿತ್‌ರನ್ನು ಹೊರಗಿಟ್ಟಿತ್ತು. ಆದರೆ ರೋಹಿತ್ ಇದೀಗ ಮೈದಾನಕ್ಕಿಳಿದಿರುವುದು ಗಮನಿಸಿದರೆ, ಹಿಟ್‌ಮ್ಯಾನ್ ಆಸ್ಟ್ರೇಲಿಯಾ ವಿರುದ್ಧ ಆಡಲು ಟೀಮ್ ಇಂಡಿಯಾ ಜೊತೆ ಪ್ರವಾಸ ಮಾಡುವುದು ಮೇಲ್ನೋಟಕ್ಕೆ ಖಚಿತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications