For Quick Alerts
ALLOW NOTIFICATIONS  
For Daily Alerts
 

IND vs ENG: ಫಾರ್ಮ್‌ಗೆ ಮರಳಿದ ರೋಹಿತ್ ಭರ್ಜರಿ ಶತಕ; ದಿಗ್ಗಜರ ದಾಖಲೆ ಉಡೀಸ್

ಭಾರತ ಮತ್ತು ಇಂಗ್ಲೆಂಡ್ ನಡುವೆ ಕಟಕ್‌ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಬಿರುಗಾಳಿಯ ಶತಕ ಬಾರಿಸುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿದ್ದಾರೆ. ರೋಹಿತ್ ತಮ್ಮ ಸ್ಫೋಟಕ ಇನ್ನಿಂಗ್ಸ್ ಮೂಲಕ ತಮ್ಮ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 32ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ರೋಹಿತ್ ಶತಕ ಗಳಿಸುವ ಮೂಲಕ ಹಲವು ದಾಖಲೆಗಳನ್ನು ಮುರಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಕ್ರಿಸ್ ಗೇಲ್ ಅವರ ಮೂರು ದೊಡ್ಡ ದಾಖಲೆಗಳನ್ನು ಅವರು ಬ್ರೇಕ್ ಮಾಡಿದ್ದಾರೆ. ಇದರೊಂದಿಗೆ, ಅವರು ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೂ ಮಾಡಿದ್ದಾರೆ.

Rohit Sharma returns to form with stunning century in second ODI against England

ಶುಭಮನ್ ಗಿಲ್ ಜೊತೆ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಅವರು ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಆಡುವ ಮೂಲಕ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಿದರು. ಮೊದಲು 30 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅರ್ಧಶತಕವನ್ನು ಪೂರ್ಣಗೊಳಿಸಿದರು. ರೋಹಿತ್ ಶರ್ಮಾ ಇಲ್ಲಿಗೆ ನಿಲ್ಲದೆ ತಮ್ಮ ಆಕ್ರಮಣಕಾರಿ ಆಟವನ್ನು ಮುಂದುವರಿಸಿದರು.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಇನ್ನಿಂಗ್ಸ್‌ನ 24ನೇ ಓವರ್‌ನಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅವರು 76 ಎಸೆತಗಳಲ್ಲಿ 9 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ 132.46 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ ಶತಕ ಬಾರಿಸಿದರು. ಈ ಶತಕದೊಂದಿಗೆ ರೋಹಿತ್ ಶರ್ಮಾ ತಮ್ಮ ಕಳಪೆ ಫಾರ್ಮ್‌ ಅನ್ನು ಬಿಟ್ಟು ಅದ್ಭುತ ಪುನರಾಗಮನ ಮಾಡಿದರು.

ಸಚಿನ್ ದಾಖಲೆ ಬ್ರೇಕ್

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಆರಂಭಿಕ ಬ್ಯಾಟರ್ ಆಗಿ ಭಾರತ ತಂಡದ ಪರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು. ಇದರೊಂದಿಗೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 346 ಪಂದ್ಯಗಳಲ್ಲಿ 48.07 ಸರಾಸರಿಯಲ್ಲಿ 15335 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರು. ರೋಹಿತ್, ತೆಂಡೂಲ್ಕರ್ ಸ್ಕೋರ್‌ಗಿಂತ ಕೇವಲ 50 ರನ್‌ಗಳ ಹಿಂದಿದ್ದರು. ಅರ್ಧಶತಕ ಗಳಿಸುತ್ತಿದ್ದಂತೆ ಸಚಿನ್ ಅವರನ್ನು ಹಿಂದಿಕ್ಕಿದರು. ಭಾರತದ ಆರಂಭಿಕ ಆಟಗಾರರಲ್ಲಿ ವೀರೇಂದ್ರ ಸೆಹ್ವಾಗ್ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಆಟಗಾರರಾಗಿದ್ದು, 321 ಪಂದ್ಯಗಳಲ್ಲಿ 41.90 ಸರಾಸರಿಯಲ್ಲಿ 15758 ರನ್ ಗಳಿಸಿದ್ದಾರೆ.

ಅತಿಹೆಚ್ಚು ಸಿಕ್ಸರ್ ದಾಖಲೆ

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ರಾವಿಡ್ ಮತ್ತು ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದರು. ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ 331 ಸಿಕ್ಸರ್‌ಗಳನ್ನು ಬಾರಿಸಿರುವ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿದರು. ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೆಸರಲ್ಲಿದೆ. ಅವರು 351 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 336 ಸಿಕ್ಸರ್‌ಗಳನ್ನು ಹೊಂದಿದ್ದಾರೆ.

ದ್ರಾವಿಡ್ ದಾಖಲೆ ಉಡೀಸ್

ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಭಾರತ ತಂಡದ ದಿಗ್ಗಜ ಬ್ಯಾಟರ್ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರು. ಅವರು ಈಗ ಏಕದಿನ ಪಂದ್ಯಗಳಲ್ಲಿ ಭಾರತದ ಪರ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ನಂತರ ರೋಹಿತ್ ಇದ್ದಾರೆ. ಭಾರತ ಪರ ಸಚಿನ್ ತೆಂಡೂಲ್ಕರ್ 18426 ರನ್, ವಿರಾಟ್ ಕೊಹ್ಲಿ 13906 ರನ್ ಮತ್ತು ಸೌರವ್ ಗಂಗೂಲಿ 11363 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 10890 ರನ್ ಗಳಿಸಿದ್ದಾರೆ. ರಾಹುಲ್ ದ್ರಾವಿಡ್ 10889 ರನ್ ಬಾರಿಸಿದ್ದಾರೆ.

Story first published: Sunday, February 9, 2025, 20:20 [IST]
Other articles published on Feb 9, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+