Rohit Sharma: ನಿವೃತ್ತಿ ಘೋಷಿಸಲು ಕಾರಣ ಬಿಚ್ಚಿಟ್ಟ ರೋಹಿತ್
2024ರ ವರ್ಷ ಭಾರತ ತಂಡಕ್ಕೆ ಅದೃಷ್ಟ ಎನ್ನಬಹುದು. ಏಕೆಂದರೆ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಐಸಿಸಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಜೊತೆಗೆ ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲೂ ಟೀಮ್ ಇಂಡಿಯಾ ಅದ್ಭುತ ದಾಖಲೆಗಳನ್ನು ಸೃಷ್ಟಿಸಿದೆ.
ಜೂನ್ ತಿಂಗಳಿನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅದ್ಬುತ ಪ್ರದರ್ಶನ ನೀಡಿತ್ತು. ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಸೋಲಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿತ್ತು. ಇದಕ್ಕೂ ಮೊದಲ ಆರಂಭಿಕ ಆವೃತ್ತಿ 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕಪ್ ಗೆದ್ದಿತ್ತು.

ಟೀಮ್ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಮತ್ತು ರನ್ ಮಷಿನ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ದಿಗ್ಭ್ರಮೆಗೊಳಿಸಿದ್ದರು. ಹೀಗಿರುವಾಗ ವಿಶ್ವಕಪ್ ಗೆಲುವನ್ನು ಸಂಭ್ರಮಿಸಬೇಕೋ ಅಥವಾ ಈ ಆಟಗಾರರ ನಿವೃತ್ತಿಯ ಬಗ್ಗೆ ಬೇಸರಿಸಿಕೊಳ್ಳಬೇಕೋ ತಿಳಿಯದ ಪರಿಸ್ಥಿತಿಯಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಿಲುಕಿದ್ದರು.
ಇದಾದ ಬಳಿಕ ರೋಹಿತ್ ಶರ್ಮಾ ತನ್ನ ನಿವೃತ್ತಿಯ ಕಾರಣವನ್ನು ತಿಳಿಸಿರಲಿಲ್ಲ. ಆದರೆ ಈಗ 3 ತಿಂಗಳ ನಂತರ, ಹಿಟ್‌ಮ್ಯಾನ್ ತನ್ನ ನಿವೃತ್ತಿಯ ಕಾರಣವನ್ನು ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸಂದರ್ಶನದಲ್ಲಿ ಹಿಟ್‌ಮ್ಯಾನ್‌ಗೆ ವಯಸ್ಸಾದ ಕಾರಣದಿಂದ ಟಿ20 ನಿಂದ ನಿವೃತ್ತಿ ಘೋಷಿಸಿದ್ದೀರಾ ಎಂದು ಪ್ರಶ್ನೆ ಕೇಳಲಾಯಿತು.
ಸತ್ಯ ಬಿಚ್ಚಿಟ್ಟ ರೋಹಿತ್
ಈ ಪ್ರಶ್ನೆಗೆ ಉತ್ತಿರಿಸಿದ ರೋಹಿತ್ ಶರ್ಮಾ ಅವರು, 'ನಾನು ಇನ್ನೂ ಮೂರು ಫಾರ್ಮ್ಯಾಟ್‌ಗಳಲ್ಲಿ ಆಡುವ ಸಾಮರ್ಥ್ಯವನ್ನು ಹೊಂದಿದ್ದೇನೆ. ಆದರೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನ ನಿವೃತ್ತಿ ಘೋಷಿಸಲು ಇದು ಒಳ್ಳೆಯ ಸಮಯ ಎಂದಿದ್ದಾರೆ. ರೋಹಿತ್ ಶರ್ಮಾ 17 ವರ್ಷಗಳು ಟಿ20 ಕ್ರಿಕೆಟ್ ಆಡಿದ್ದಾರೆ. ಈಗ ಭಾರತ ಪರ ನಾಯಕನ್ನಾಗಿ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಆಡುತ್ತಿದ್ದಾರೆ.
ಕ್ಲೀನ್ ಸ್ವೀಪ್ ಸಾಧನೆ
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿದೆ. ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದೆ. 2-0 ಅಂತರದ ಗೆಲುವಿನೊಂದಿಗೆ ಟೆಸ್ಟ್ ಸರಣಿ ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್ (ಡಬ್ಲ್ಯೂಟಿಸಿ) ಅಂಕಪಟ್ಟಿಯಲ್ಲಿ ಭಾರತ ಆಗ್ರಸ್ಥಾನವನ್ನು ಬಲಪಡಿಸಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications