ಮುಂಬೈ ಇಂಡಿಯನ್ಸ್‌ಗೆ ಆಘಾತ: ಐಪಿಎಲ್‌ನಿಂದ ರೋಹಿತ್ ಶರ್ಮಾ ಔಟ್?

ಫ್ಲೇ ಆಫ್ ಹಂತಕ್ಕೆ ಏರಲು ಇನ್ನೊಂದೇ ಹೆಜ್ಜೆ ಇರುವಾಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಐಪಿಎಲ್ 2020ಯಿಂದ ಪೂರ್ಣ ಪ್ರಮಾಣದಲ್ಲಿ ಹೊರಬಿದ್ದಿರುವ ಸಾಧ್ಯತೆ ಇದೆ.

ನಾಲ್ಕು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಿರಾನ್ ಪೋಲಾರ್ಡ್‌ ನಾಯಕತ್ವದಲ್ಲಿ ಮುನ್ನೆಡೆಯುತ್ತಿದ್ದು, ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತು. ಇದರ ನಡುವೆ ಇದೀಗ ನಾಯಕ ರೋಹಿತ್ ಟೂರ್ನಿಯಲ್ಲಿ ಮತ್ತೆ ಕಣಕ್ಕಿಳಿಯುವುದು ಬಹುತೇಕ ಅನುಮಾನ ಮೂಡಿಸಿದೆ.

ಈ ಅನುಮಾನಗಳಿಗೆ ಕಾರಣ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೂ ಟೀಮ್ ಇಂಡಿಯಾ ಪರ ಮೂರು ಫಾರ್ಮೆಟ್‌ನಲ್ಲಿ ರೋಹಿತ್ ಶರ್ಮಾಗೆ ಸ್ಥಾನ ನೀಡಲಾಗಿಲ್ಲ.ಹೀಗಾಗಿ ರೋಹಿತ್ ಈ ಬಾರಿ ಐಪಿಎಲ್‌ನಲ್ಲಿ ಮತ್ತೆ ಕಣಕ್ಕಿಳಿಯುವುದಿಲ್ಲವೇ ಎಂದು ಅನುಮಾನಕ್ಕೆ ಎಡೆಮಾಡಿದೆ.

ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದಲ್ಲಿ ಸೋಲನ್ನ ಕಂಡಿದ್ದರೂ ಐಪಿಎಲ್ 2020 ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿ ಉಳಿದುಕೊಂಡಿದ್ದು, ಆಡಿರುವ 11 ಪಂದ್ಯಗಳಲ್ಲಿ 7 ಗೆಲುವು ಮತ್ತು 4 ಸೋಲುಗಳನ್ನು ಕಂಡಿದೆ. 14 ಪಾಯಿಂಟ್ಸ್‌ಗಳೊಂದಿಗೆ ನೆಟ್‌ ರನ್‌ರೇಟ್ ಕೂಡ ಉತ್ತಮವಾಗಿದೆ.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Monday, October 26, 2020, 23:03 [IST]
Other articles published on Oct 26, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X