For Quick Alerts
ALLOW NOTIFICATIONS  
For Daily Alerts
 

WTC ಫೈನಲ್‌ಗೆ 3 ಪಂದ್ಯಗಳು ಬೇಕು ಎಂದ ರೋಹಿತ್: ಪ್ಯಾಟ್ ಕಮ್ಮಿನ್ಸ್ ಖಡಕ್ ಪ್ರತಿಕ್ರಿಯೆ!

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಆಸ್ಟ್ರೇಲಿಯಾ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ಈ ಮೂಲಕ ಎಲ್ಲಾ ಐಸಿಸಿ ಟ್ರೋಫಿ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ ಆಸ್ಟ್ರೇಲಿಯಾ. ಈ ಪಂದ್ಯದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆಯ್ಕೆಯ ಮಾದರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂದ್ಯದ ಮುಕ್ತಾಯದ ಬಳಿಕ ಭಾರತದ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ "ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ನಾನು ಬಯಸುತ್ತೇನೆ. ನಾವು ಬಹಳ ಪರಿಶ್ರಮಪಟ್ಟಿದ್ದೇವೆ ಹಾಗೂ ಹೋರಾಟ ನಡೆಸಿದ್ದೇವೆ. ಆದರೆ ಇಲ್ಲಿ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಮುಂದಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಆವೃತ್ತಿಯಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿಸುವುದು ಸೂಕ್ತ" ಎಂದಿದ್ದಾರೆ ರೋಹಿತ್ ಶರ್ಮಾ.

Rohit Sharma said 3-match series need for next WTC Final: Pat Cummins contradictory reaction

ಇನ್ನು ರೋಹಿತ್ ಶರ್ಮಾ ಅವರ ಈ ಅನಿಸಿಕೆಯ ಬಗ್ಗೆ ಪ್ಯಾಟ್ ಕಮ್ಮಿನ್ಸ್ ಜೊತೆಗೆ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಪ್ಯಾಟ್ ಕಮ್ಮಿನ್ಸ್ ಭಿನ್ನವಾಗಿ ಉತ್ತರವನ್ನು ನೀಡಿದ್ದಾರೆ. "ನಾವು ಈಗಾಗಲೇ ಐಸಿಸಿ ಟ್ರೋಫಿಯನ್ನು ಗೆದ್ದಾಗಿದೆ. WTC ಫೈನಲ್‌ಗೆ ಕೇವಲ 3 ಪಂದ್ಯಗಳ ಸರಣಿಯನ್ನು ಮಾತ್ರವಲ್ಲ, 16 ಪಂದ್ಯಗಳ ಸರಣಿಯನ್ನಾದರೂ ಇಡಬಹುದು. ಆದರೆ ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲಲು ಕೇವಲ ಒಂದು ಆಟ ಮಾತ್ರವೇ ದೊರೆಯುತ್ತದೆ. ಆಟ ಅಂದರೆ ಅದು ಇರುವುದೇ ಹಾಗೆ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.

"ಇಲ್ಲಿ ಗೆಲುವು ಸಾಧಿಸಬೇಕಾದರೆ ನೀವು ವಿಶ್ವದ ಎಲ್ಲಾ ಭಾಗದಲ್ಲಿಯೂ ಆಡಬೇಕಾಗುತ್ತದೆ. ನನ್ನ ಪ್ರಕಾರ ಈ ಆವೃತ್ತಿ 20 ಪಂದ್ಯಗಳ ಸರಣಿಯನ್ನು ಹೊಂದಿತ್ತು. ನಾವು ಬಹುಶಃ ಮೂರು ಅಥವಾ ನಾಲ್ಕು ಪಂದ್ಯಗಳಲ್ಲಿ ಮಾತ್ರವೇ ಸೋಲು ಕಂಡಿದ್ದೇವೆ. ಉಳಿದೆಲ್ಲಾ ಪಂದ್ಯಗಳಲ್ಲಿಯೂ ಆಟಗಾರರು ಅದ್ಭುತ ಪ್ರದರ್ಶನ ನೀಡಿದ ಕಾರಣ ಇಲ್ಲಿಗೆ ತಲುಪಲು ಸಾಧ್ಯವಾಯಿತು. ನಾವು ಎಲ್ಲಾ ಪರಿಸ್ಥಿತಿಗಳಿಗೂ ಅದ್ಭುತವಾಗಿ ಒಗ್ಗಿಕೊಂಡೆವು. ಹಾಗಾಗಿ ಈ ಗೆಲುವು ಬಹಳ ತೃಪ್ತಿದಾಯಕ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.

Rohit Sharma said 3-match series need for next WTC Final: Pat Cummins contradictory reaction

ಪಂದ್ಯದ ಮುಕ್ತಾಯದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಶನ್ ಕಾರ್ಯಕ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದ ಬಳಿಕ ಭಾರತ ಉತ್ತಮ ಆರಂಭವನ್ನು ಪಡೆಯಿತು ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಹಿನ್ನಡೆ ಕಾಣಲು ಬೌಲರ್‌ಗಳು ಕಾರಣ ಎಂದು ದೂರಿದರು ರೋಹಿತ್. ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಆಟಗಾರರು ಬೇಗನೆ ವಿಕೆಟ್ ಕಳೆದುಕೊಂಡಿದ್ದರೂ ಅಂತಿಮವಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ಗಳಿಸಲು ಶಕ್ತವಾಯಿತು. ಟ್ರೆವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಸಿಡಿಸಿದ ಭರ್ಜರಿ ಶತಕ ಆಸ್ಟ್ರೇಲಿ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸುವಂತೆ ಮಾಡಿದರು.

Story first published: Sunday, June 11, 2023, 21:45 [IST]
Other articles published on Jun 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+