For Quick Alerts
ALLOW NOTIFICATIONS  
For Daily Alerts
 

ಟಿ20 ಪಂದ್ಯಗಳಲ್ಲೂ ಬೌಲರ್‌ಗಳನ್ನು ಕಾಡಲಿರುವ ರೋಹಿತ್‌ ಶರ್ಮಾ!

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ರೋಹಿತ್ ಶರ್ಮಾ ಸದ್ಯ ಏಕದಿನ ಕ್ರಿಕೆಟ್ ಆಡುತ್ತಿದ್ದಾರೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಈಗ ರೋಹಿತ್‌ ಶರ್ಮಾ ಟಿ20 ಕ್ರಿಕೆಟ್‌ನಲ್ಲೂ ಬೌಲರ್‌ಗಳನ್ನು ಕಾಡಲಿದ್ದಾರೆ. ಏನಪ್ಪಾ 2024ರ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ರೋಹಿತ್ ಶರ್ಮಾ ಯೂ-ಟರ್ನ್‌ ಹೊಡೆದ್ರಾ ಎಂಬ ಪ್ರಶ್ನೆ ಸಹಜವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಬಹುದು. ಇದಕ್ಕೆ ಉತ್ತರ ಇಲ್ಲಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಹೊಂದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಟಿ20 ವಿಶ್ವಕಪ್‌ ಗೆದ್ದ ಬಳಿಕ ಚುಟುಕು ಫಾರ್ಮೆಟ್‌ಗೆ, ಐಪಿಎಲ್‌ ವೇಳೆ ಟೆಸ್ಟ್‌ ಫಾರ್ಮೆಟ್‌ಗೆ ವಿದಾಯ ಹೇಳಿರುವ ರೋಹಿತ್‌, ಮತ್ತೆ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೆ ಈ ಬಾರಿ ರೋಹಿತ್‌ ಭಾರತದ ಪರ ಟಿ20 ಪಂದ್ಯಗಳನ್ನು ಆಡುವುದಿಲ್ಲ. ಬದಲಿಗೆ ಮುಂಬೈ ಪರ ಆಡಲಿದ್ದಾರೆ ಎಂಬ ವರದಿಗಳು ಬಂದಿವೆ.

Rohit Sharma Set for T20 Comeback in Syed Mushtaq Ali Trophy Knockouts for Mumbai

ದೇಶೀಯ ಟಿ20 ಫಾರ್ಮೆಟ್‌ ಸೈಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಟೂರ್ನಿ ನಡೆಯುತ್ತಿದೆ. ಈ ಟೂರ್ನಿಯಲ್ಲ ಮುಂಬೈ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ವರದಿಯ ಪ್ರಕಾರ ರೋಹಿತ್ ಮುಂಬೈ ಪರ ನಾಕೌಟ್‌ ಪಂದ್ಯಗಳನ್ನು ಆಡಬಹುದು ಎಂದು ತಿಳಿದು ಬಂದಿದೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ ಮೂಲಗಳು ರೋಹಿತ್‌ ದೇಶೀಯ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಪರ ಆಡಲಿದ್ದಾರೆ ಎಂದು ತಿಳಿಸಿವೆ. ರೋಹಿತ್ ಇದುವರೆಗೆ 463 ಟಿ20 ಪಂದ್ಯಗಳನ್ನು ಆಡಿದ್ದು, 8 ಶತಕಗಳು ಮತ್ತು 82 ಅರ್ಧಶತಕಗಳು ಸೇರಿದಂತೆ 12,248 ರನ್ ಗಳಿಸಿದ್ದಾರೆ. ಇವರ ಆಗಮನ ನಿಶ್ಚಿತವಾಗಿ ಮುಂಬೈ ತಂಡಕ್ಕೆ ಆನೆ ಬಲ ನೀಡಲಿದೆ.

ನಾಕೌಟ್‌ನಲ್ಲಿ ಕಣಕ್ಕೆ ಇಳಿಯಲಿರುವ ಹಿಟ್‌ ಮ್ಯಾನ್‌

ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳಲ್ಲಿ ಆಡಲು ಬಯಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಶನಿವಾರ ಕೊನೆಗೊಳ್ಳಲಿದೆ. ಆ ಬಳಿಕ ಅವರು ಮುಂಬೈ ಜೆರ್ಸಿಯಲ್ಲಿ ಟಿ20 ಫಾರ್ಮೆಟ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳು ಡಿಸೆಂಬರ್ 12 ರಿಂದ 18 ರವರೆಗೆ ಇಂದೋರ್‌ನಲ್ಲಿ ನಡೆಯಲಿವೆ.

Rohit Sharma Set for T20 Comeback in Syed Mushtaq Ali Trophy Knockouts for Mumbai

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡ ಸ್ಥಿರ ಪ್ರದರ್ಶನ ನೀಡಿದೆ. ಎಲೈಟ್‌ ಗ್ರುಪ್‌ ಎ ನಲ್ಲಿ ಸ್ಥಾನ ಪಡೆದಿರುವ ಮುಂಬೈ ಆಡಿರುವ 4 ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ 16 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕೂಡ ಮುಂಬೈ ಪರ ಆಡುತ್ತಿದ್ದಾರೆ. ಇಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ.

Story first published: Thursday, December 4, 2025, 13:36 [IST]
Other articles published on Dec 4, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+