For Quick Alerts
ALLOW NOTIFICATIONS  
For Daily Alerts
 

ವಿಂಡೀಸ್ ಟೆಸ್ಟ್ ಸರಣಿಗಿಲ್ಲ ರೋಹಿತ್ ಶರ್ಮಾ: ಟೆಸ್ಟ್ ಮಾದರಿಗೆ ರಹಾನೆ ನಾಯಕ?

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಮುಂದಿಬ ವೆಸ್ಟ್ ಇಂಡೀಸ್ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಒತ್ತಡದಲ್ಲಿರುವ ರೋಹಿತ್ ಶರ್ಮಾ ವಿಂಡೀಸ್ ಪ್ರವಾಸಕ್ಕೆ ತೆರಳುವುದು ಅನುಮಾನವಾಗಿದೆ. ಈ ಸರಣಿಯಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ದೃಷ್ಟಿಯಿಂದ ರೋಹಿತ್ ಸಹಿತ ಇನ್ನೂ ಕೆಲ ಹಿರಿಯ ಆಟಗಾರರು ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆಯಿದೆ.

ರೋಹಿತ್ ಶರ್ಮಾ ಕಳೆದ ಹನ್ನೆರಡು ತಿಂಗಳುಗಳಿಂದ ಗಾಯದ ಸಮಸ್ಯೆಗೆ ಆಗಾಗ ತುತ್ತಾಗುತ್ತಿದ್ದಾರೆ. ಅಲ್ಲದೆ ಬ್ಯಾಟಿಂಗ್‌ನಲ್ಲಿಯೂ ಅವರು ಉತ್ತಮ ಲಯದಲ್ಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಅವರಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಯ್ಕೆಯ ವಿಚಾರವಾಗಿಯೂ ಸಾಕಷ್ಟು ಚರ್ಚೆಗಳು ನಡೆದಿದ್ದು ಆರ್ ಅಶ್ವಿನ್‌ ಅವರನ್ನು ಆಡುವಬಳಗದಿಂದ ಹೊರಗಿಟ್ಟ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿತ್ತು.

Rohit Sharma set to be rested for West Indies tour: Ajinkya Rahane to be lead in Test series

ಈ ಎಲ್ಲಾ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರೋಹಿತ್ ಶರ್ಮಾಗೆ ಮುಂದಿನ ಕೆರಿಬಿಯನ್ ಪ್ರವಾಸದಿಂದ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಸಂಪೂರ್ಣ ಪ್ರವಾಸದಿಂದ ರೋಹಿತ್ ಹೊರಗುಳಿಯಲಿದ್ದಾರಾ ಅಥವಾ ಟೆಸ್ಟ್ ಸರಣಿಯಿಂದ ಮಾತ್ರವೇ ವಿಶ್ರಾಂತಿ ಪಡೆಯಲಿದ್ದಾರಾ ಎಂಬುದರ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ದೊರೆಯಬೇಕಿದೆ.

ಭಾರತ ಆಯ್ಕೆಗಾರರು ಇನ್ನಷ್ಟೇ ನಾಯಕ ರೋಹಿತ್ ಶರ್ಮಾ ಜೊತೆಗೆ ಚರ್ಚಿಸಲಿದ್ದು ಅದಾದ ಬಳಿಕ ಈ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಭಾರತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು ಅದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಮದ್ಯಗಳ ಟಿ20 ಸರಣಿಯನ್ನು ಆಡಲಿದೆ. ಜುಲೈ 12ರಿಂದ ಈ ಪ್ರವಾಸ ಅಧಿಕರತವಾಗಿ ಆರಂಬಗೊಳ್ಳಲಿದೆ.

ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವುದು ಇನ್ನಷ್ಟೇ ಅಧಿಕರತವಾಗಬೇಕಿದೆ. ಒಂದು ವೇಲೆ ಅವರು ವಿಶ್ರಾಮತಿ ಬಯಸಿದಲ್ಲಿ ಟೀಮ್ ಇಂಡಿಯಾ ಹೊಸ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯನ್ನಾಡುವುದು ಅನಿವಾರ್ಯವಾಗಲಿದೆ. ಹೀಗಾಘಿ ಆ ಜವಾಬ್ಧಾರಿಯನ್ನು ಯಾರು ವಹಿಸಲಿದ್ದಾರೆ ಎಂಬುದು ಕುಡ ಕುತೂಹಲ ಮೂಡಿಸಿದೆ.

ಇನ್ನು ವೆಸ್ಟ್ ಇಂಡೀಸ್ ಪ್ರವಾಸದಿಂದ ವಿರಾಟ್ ಕೊಹ್ಲಿ ಕೂಡ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಹಾಗಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ಸರಣಿಗೆ ಅಜಿಂಕ್ಯಾ ರಹಾನೆ ಅವರನ್ನು ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ರಹಾನೆ ಭಾರತದ ಪರವಾಗಿ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್‌ಗಳಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 46 ರನ್‌ಗಳಿಸಿದ್ದರು.

ಅಜಿಂಕ್ಯಾ ರಹಾನೆ ಈ ಹಿಂದೆ ಸಿಕ್ಕ ಅವಕಾಶದಲ್ಲಿ ಟೆಸ್ಟ್ ಮದರಿಯಲ್ಲಿ ಟೀಮ್ ಇಂಡಿಯಾವನ್ನು ಅದ್ಭುತವಾಗಿ ಮುನ್ನಡೆಸಿದ್ದರು. 2021ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ಅಜಿಂಕ್ಯಾ ರಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದು ಎರಡು ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಈ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಪಿಯನ್ನು 2-1 ಅಂತರದಿಂದ ಸತತ ಎರಡನೇಬಾರಿಗೆ ಆಸಿಸ್ ನೆಲದಲ್ಲಿ ಕೈವಶ ಮಾಡಿಕೊಂಡಿರುವುದು ಈಗ ಇತಿಹಾಸ.

Story first published: Friday, June 16, 2023, 14:26 [IST]
Other articles published on Jun 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+