T20 World Cup 2024: ಬಾಬರ್ ಅಜಮ್ ಟಿ20 ವಿಶ್ವದಾಖಲೆಯನ್ನು ಮುರಿಯಲು ರೋಹಿತ್ ಶರ್ಮಾ ಸಜ್ಜು!
ಜೂನ್ 14 ಶುಕ್ರವಾರ, ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ಭಾರತ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಈ ಮೂಲಕ ಸೂಪರ್-8 ಸುತ್ತಿಗೆ ಅರ್ಹತೆ ಪಡೆದಿದೆ.
ಭಾರತ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನೆಡೆಸುತ್ತಿದ್ದಾರೆ. ಈ ನಾಯಕತ್ವದಲ್ಲಿ ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತ ಬಂದಿದೆ. ಜೊತೆಗೆ ನಾಯಕನಾಗಿಯೂ ರೋಹಿತ್ ಶರ್ಮಾ ಅವರು ಯಶಸ್ಸು ಕಂಡಿದ್ದಾರೆ.

ಇದೀಗ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20ಯಲ್ಲಿ ವಿಶ್ವದಾಖಲೆ ಮಾಡುವ ಸನಿಹದಲ್ಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರೋಹಿತ್ ಶರ್ಮಾ ಅವರು ಪಾಕಿಸ್ತಾನ ನಾಯಕ ಬಾಬರ್ ಅಜಮ್ ಅವರ ವಿಶ್ವ ದಾಖಲೆಯನ್ನು ಮುರಿಯಲಿದ್ದಾರೆ.
ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಅತ್ಯಂತ ಯಶಸ್ವಿ ನಾಯಕನಾಗಲು ಕೇವಲ 4 ಹೆಜ್ಜೆಗಳು ಬಾಕಿ ಇವೆ. ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಸತತ 3 ಪಂದ್ಯಗಳಲ್ಲಿ ಭಾರತ ತಂಡವನ್ನು ಗೆಲ್ಲಿಸಿದ್ದಾರೆ. ಟಿ20 ವಿಶ್ವಕಪ್ 2024 ರಲ್ಲಿ ಐರ್ಲೆಂಡ್, ಪಾಕಿಸ್ತಾನ ಮತ್ತು ಯುನೈಟೆಡ್ ಸ್ಟೇಟ್ಸ್ ಅನ್ನು ಸೋಲಿಸಿದೆ.
ನಾಯಕನಾಗಿ ರೋಹಿತ್ ಶರ್ಮಾ 57 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 44ರಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಟೀಮ್ ಇಂಡಿಯಾ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಟಿ20 ಅಂತಾರಾಷ್ಟ್ರೀಯ ಪಂದ್ಯ ಟೈ ಆಗಿದೆ.

ಇನ್ನೊಂದೆಡೆ ಬಾಬರ್ ಅಜಮ್ ಅವರು 84 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 47ರಲ್ಲಿ ಪಾಕಿಸ್ತಾನ ತಂಡವನ್ನು ಗೆಲಿಸಿದ್ದಾರೆ. ಈ ಅವಧಿಯಲ್ಲಿ ಪಾಕಿಸ್ತಾನ 29 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸೋಲು ಕಂಡಿದೆ.7 ಟಿ20 ಅಂತರಾಷ್ಟ್ರೀಯ ಪಂದ್ಯಗಳು ಅನಿರ್ದಿಷ್ಟವಾಗಿದ್ದು, 1 ಪಂದ್ಯ ಟೈ ಆಗಿದೆ.
ಬಾಬರ್ ಅಜಮ್ ವಿಶ್ವದ ಅತಿ ಹೆಚ್ಚು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದ ನಾಯಕರಾಗಿದ್ದಾರೆ. ಆದರೆ, ರೋಹಿತ್ ಶರ್ಮಾ ಕೆಲವೇ ದಿನಗಳಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಅವರ ವಿಶ್ವದಾಖಲೆಯನ್ನು ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಮುರಿಯಲಿದ್ದಾರೆ ಎಂಬುದು ಅಭಿಮಾನಿಗಳ ನಿರೀಕ್ಷೆಯಾಗಿದೆ.
ಟಿ20 ವಿಶ್ವಕಪ್‌ನಲ್ಲಿ ಭಾರತ ಫೈನಲ್‌ಗೆ ತಲುಪಿದರೆ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಭಾರತ ಜೂನ್ 15 ರಂದು ಕೆನಡಾ ವಿರುದ್ಧ ಗುಂಪು ಹಂತದ ಪಂದ್ಯವನ್ನು ಆಡಬೇಕಾಗಿದೆ. ಇದಾದ ಬಳಿಕ ಟೀಂ ಇಂಡಿಯಾ ಸೂಪರ್-8 ಸುತ್ತಿನಲ್ಲಿ 3 ಪಂದ್ಯಗಳನ್ನು ಆಡಲಿದೆ.
ನಂತರ ಟೀಮ್ ಇಂಡಿಯಾ ಸೂಪರ್-4 ಸುತ್ತಿಗೆ ಅರ್ಹತೆ ಪಡೆದರೆ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನೂ ಆಡುವ ಅವಕಾಶವಿದೆ. ಅಗ ರೋಹಿತ್ ಶರ್ಮಾ, ಬಾಬರ್ ಅಜಮ್ ಅವರ ವಿಶ್ವ ದಾಖಲೆಯನ್ನು ಮುರಿಯಲು ಕೇವಲ 4 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಈ ಮೂಲಕ ರೋಹಿತ್ ಶರ್ಮಾ ಗರಿಷ್ಠ 48 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದ ವಿಶ್ವದ ನಾಯಕನಾಗಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications