Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ: ರೋಹಿತ್ ಶರ್ಮಾ ಟೆಸ್ಟ್‌ ತಂಡಕ್ಕೆ ಮರಳಲು ವೇದಿಕೆ ಸಿದ್ಧ

Rohit Sharma set to replace Mayank Agarwal as India gear up for Sydney test vs Australia

ಸಿಡ್ನಿಯಲ್ಲಿ ಗುರುವಾರದಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಟೀಮ್ ಇಂಡಿಯಾ ಅನುಭವಿ ಆಟಗಾರ ರೋಹಿತ್ ಶರ್ಮಾ ಸಜ್ಜಾಗಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಸುದೀರ್ಘ ಒಂದು ವರ್ಷಗಳಿಗೂ ಹೆಚ್ಚಿನ ಸಮಯದ ಬಳಿಕ ಟೀಮ್ ಇಂಡಿಯಾ ಟೆಸ್ಟ್ ತಂಡದ ಜರ್ಸಿ ತೊಡಲು ಸಜ್ಜಾಗಿದ್ದಾರೆ. ರೋಹಿತ್ ಶೃ್ಮಾ ಕೊನೆಯ ಬಾರಿಗೆ ಟೀಮ್ ಇಮಡಿಯಾ ಪರವಾಗಿ 2019ರ ನವೆಂಬರ್ ತಿಂಗಳಿನಲ್ಲಿ ನಡೆದ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.

ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೆಸ್ಟ್ ತಂಡದ ಉಪನಾಯಕನನ್ನಾಗಿ ರೋಹಿತ್ ಶರ್ಮಾ ಅವರನ್ನು ಹೆಸರಿಸುವ ಮೂಲಕವೇ ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವ ಖಚಿತತೆ ಟೀಮ್ ಮ್ಯಾನೇಜ್ಮೆಂಟ್ ಕಡೆಯಿಂದ ಲಭ್ಯವಾಗಿತ್ತು. ಆದರೆ ಅದಾದ ಬಳಿಕ ನಡೆದ ಆಫ್‌ಫೀಲ್ಡ್ ವಿವಾದಗಳು ಮತ್ತೆ ಗೊಂದಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು.

ರೋಹಿತ್ ಶರ್ಮಾ ಮೂರನೇ ಟೆಸ್ಟ್‌ನಲ್ಲಿ ಮಯಾಂಕ್ ಅಗರ್ವಾಲ್ ಬದಲಿಗೆ ತಂಡ ಸೇರಿಕೊಳ್ಳಲು ವೇದಿಕೆ ಸಜ್ಜಾಗಿದೆ. ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಜೊತೆಗೆ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಗಿಲ್ ಎರಡನೇ ಪಂದ್ಯದಲ್ಲಿ ಟೆಸ್ಟ್‌ಗೆ ಪದಾರ್ಪಣೆಯನ್ನು ಮಾಡಿ ಭರವಸೆಯ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದಾರೆ.

2018-19ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಮರಣೀಯ ಪದಾರ್ಪಣೆ ಮಾಡಿದ್ದ ಮಯಾಂಕ್ ಅಗರ್ವಾಲ್ ಈ ಬಾರಿಯ ಪ್ರವಾಸದಲ್ಲಿ ರನ್ ಗಳಿಸಲು ಪರದಾಡುತ್ತಿದ್ದಾರೆ. ಕರ್ನಾಟಕದ ಈ ಭರವಸೆಯ ಆಟಗಾರ ಟೆಸ್ಟ್‌ನ ಮೊದಲ ಎರಡು ಪಂದ್ಯಗಳಲ್ಲಿ 17, 9, 0 ಹಾಗೂ 5 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ 2019ರಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಸಿದೀರ್ಘ ಮಾದರಿಯ ಕ್ರಿಕೆಟ್‌ನಲ್ಲೂ ಅದ್ಭುತ ಆರಂಭವನ್ನು ನೀಡಿದ್ದರು. 5 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಶರ್ಮಾ 556 ರನ್ ಗಳಿಸಿದ್ದು 3 ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಂದಲೂ ಇದೇ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

Story first published: Wednesday, January 6, 2021, 10:00 [IST]
Other articles published on Jan 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+