Rohit Sharma: ಮೈದಾನಕ್ಕೆ ಇಳಿಯುತ್ತಿದ್ದಂತೆ ದಾಖಲೆ ಬರೆಯಲಿರುವ ರೋಹಿತ್
18ನೇ ಆವೃತ್ತಿಯ ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಈ ಮೆಗಾ ಲೀಗ್‌ನಲ್ಲಿ ಹಲವು ಸ್ಟಾರ್ ಆಟಗಾರರು ತಮ್ಮ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ. ಹಲವು ಆಟಗಾರರು ಈ ಲೀಗಿನ ಮೂಲಕ ತಾವು ಇನ್ನು ಹೆಚ್ಚು ದಿನಗಳ ಕಾಲ ಆಡಬಲ್ಲೇವು ಎಂಬುದನ್ನು ಸಾಬೀತು ಪಡಿಸಿಕೊಳ್ಳಲಿದ್ದಾರೆ. ಇನ್ನು ಹಲವು ಆಟಗಾರರು ನಮ್ಮಲ್ಲೂ ಕ್ಷಮತೆ ಇದೆ ಎಂಬುದನ್ನು ಸಾರಿ ಹೇಳಲಿದ್ದಾರೆ. ಈ ಮೂಲಕ ತಮ್ಮನ್ನು ಸಹ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಿ ಎಂದು ಒತ್ತಾಯಿಸಲಿದ್ದಾರೆ. ಇನ್ನು ಹಲವು ಆಟಗಾರರು ಸಿಕ್ಕ ಅವಕಾಶದಲ್ಲಿ ಮಿಂಚಿ ಅಬ್ಬರಿಸಲಿದ್ದಾರೆ. ಇದೇ ಸಾಲಿಗೆ ಸೇರುವ ಆಟಗಾರ ರೋಹಿತ್ ಶರ್ಮಾ.
ಪಾಕಿಸ್ತಾನ ಆಯೋಜಿತ ಚಾಂಪಿಯನ್ಸ್ ಟ್ರೋಫಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಟೀಮ್ ಇಂಡಿಯಾ ತಂಡದ ನಾಯಕ ರೋಹಿತ್ ಶರ್ಮಾ. ಫೈನಲ್ ಪಂದ್ಯದಲ್ಲಿ ಮನಮೋಹಕ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಕಾಣಿಕೆ ನೀಡಿದರು. ಈಗ ಇವರು ಐಪಿಎಲ್‌ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ರೋಹಿತ್ ಶರ್ಮಾ ಮಾರ್ಚ್ 23 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಖಾಡಕ್ಕೆ ಇಳಿಯುತ್ತಲೇ ದಾಖಲೆಯನ್ನು ಬರೆಯಲಿದ್ದಾರೆ.

ಮಾರ್ಚ್ 22 ರಿಂದ 18ನೇ ಆವೃತ್ತಿಯ ಐಪಿಎಲ್ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಕಾದಾಟ ನಡೆಸಲಿವೆ. ಬಳಿಕ ಮಾರ್ಚ್ 23 ರಂದು ನಡೆಯುವ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕೆ ಇಳಿಯುತ್ತಿದ್ದಂತೆ ದೊಡ್ಡ ದಾಖಲೆ ಬರೆಯಲಿದ್ದಾರೆ.
ರೋಹಿತ್ ಶರ್ಮಾ ದಾಖಲೆ
ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿ ನಾಯಕ. ಈಗ ಇವರು ಬರೀ ಆಟಗಾರನಾಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಲೇ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ ಅವರ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಇವರಿಗಿಂತ ಮುಂಚೂಣಿಯಲ್ಲಿ ಸದ್ಯ ಮಹೇಂದ್ರ ಸಿಂಗ್ ಧೋನಿ ಮಾತ್ರ ಇದ್ದಾರೆ.
ರೋಹಿತ್ ಶರ್ಮಾ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಲೆಕ್ಕಾಚಾರದಲ್ಲಿ ಎರಡನೇ ಸ್ಥಾನಕ್ಕೆ ತಲುಪಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ಎರಡನೇ ಸ್ಥಾನದಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ 257 ಪಂದ್ಯಗಳನ್ನು ಆಡಿದ್ದಾರೆ. ರೋಹಿತ್ ಶರ್ಮಾ ಸಹ ಇಷ್ಟೇ ಪಂದ್ಯಗಳನ್ನು ಆಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಮೈದಾನಕ್ಕೆ ಇಳಿಯುತ್ತಿದ್ದಂತೆ ದಾಖಲೆ ಬರೆಯಲಿದ್ದಾರೆ. ದಿನೇಶ್ ಕಾರ್ತಿಕ್ ಅವರ ಪಂದ್ಯಗಳ ಲೆಕ್ಕಾಚಾರವನ್ನು ಮೀರಿ ನಿಲ್ಲಲಿದ್ದಾರೆ.

ಒಂದೇ ತಂಡದ ಪರ ಅತಿ ಹೆಚ್ಚು ಪಂದ್ಯ ಆಡಿದ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮಹೇಂದ್ರ ಸಿಂಗ್ ಧೋನಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ. ಇವರು 264 ಪಂದ್ಯಗಳನ್ನು ಆಡಿದ ದಾಖಲೆ ಹೊಂದಿದ್ದಾರೆ. ಈ ವೇಳೆ ಇವರು 5243 ರನ್ ಕಲೆ ಹಾಕಿದ್ದಾರೆ. ಇನ್ನು ಒಂದೇ ತಂಡದ ಪರ ಅತಿ ಹೆಚ್ಚು ಐಪಿಎಲ್ ಪಂದ್ಯಗಳನ್ನು ಆಡಿದ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರದ್ದಾಗಿದೆ. ಇವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 252 ಪಂದ್ಯಗಳನ್ನು ಆಡಿದ ಹೆಗ್ಗಳಿಕೆ ಹೊಂದಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ 5 ಆಟಗಾರರು
ಮಹೇಂದ್ರ ಸಿಂಗ್ ಧೋನಿ (ಸಿಎಸ್‌ಕೆ, ಪುಣೆ), 264 ಪಂದ್ಯ, 5243 ರನ್
ದಿನೇಶ್ ಕಾರ್ತಿಕ್ (ಡಿಸಿ, ಜಿಎಲ್, ಕೆಕೆಆರ್, ಪಂಜಾಬ್, ಮುಂಬೈ, ಆರ್‌ಸಿಬಿ), 257 ಪಂದ್ಯ, 4842 ರನ್
ರೋಹಿತ್ ಶರ್ಮಾ (ಡಿಸಿಎಚ್, ಮುಂಬೈ), 257 ಪಂದ್ಯ, 6628 ರನ್
ವಿರಾಟ್ ಕೊಹ್ಲಿ (ಆರ್‌ಸಿಬಿ), 252 ಪಂದ್ಯ, 8004 ರನ್
ರವೀಂದ್ರ ಜಡೇಜಾ (ಸಿಎಸ್‌ಕೆ, ಜಿಎಲ್, ಕೊಚ್ಚಿ, ಆರ್‌ಆರ್), 240 ಪಂದ್ಯ, 2959 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications