ನ್ಯೂಜಿಲೆಂಡ್ ವಿರುದ್ಧದ ಮೊದಲ ಇನಿಂಗ್ಸ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ರೋಹಿತ್ ಶರ್ಮಾ, ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ದಾಖಲೆ ಬರೆದರು. ನ್ಯೂಜಿಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 402 ರನ್‌ಗಳಿಗೆ ಆಲೌಟ್ ಆಯಿತು. ಇನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿತು.
ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಹೀನಾಯವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಆಟಗಾರರು ಪಿಚ್‌ನಲ್ಲಿ ಟೈಮ್ ಸ್ಪೆಂಡ್ ಮಾಡಿ ಬ್ಯಾಟ್ ಮಾಡಿದರು. ಕಿವೀಸ್ ಬೌಲರ್‌ಗಳಿಗೆ ಕಾಟ ನೀಡಿದ ಟೀಮ್ ಇಂಡಿಯಾ ಬ್ಯಾಟರ್ಸ್ ಅವರು ಭರ್ಜರಿಯಾಗಿ ಬ್ಯಾಟಿಂಗ್ ಮಾಡುವ ಸೂಚನೆಯನ್ನು ನೀಡಿತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಾಣಿಸಿಕೊಂಡು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಎರಡನೇ ಇನಿಂಗ್ಸ್‌ನಲ್ಲಿ 63 ಎಸೆತಗಳನ್ನು ಎದುರಿಸಿ 52 ರನ್ ಸಿಡಿಸಿದರು. ಹಿಟ್‌ಮ್ಯಾನ್ ಬ್ಯಾಟಿಂಗ್ ನೋಡ್ತಿದ್ದ ಅಭಿಮಾನಿಗಳು ಇಂದು ಬಿಗ್ ಇನಿಂಗ್ಸ್ ಬರುತ್ತದೆ ಎಂದೇ ಭವಿಸಿದ್ದರು. ಆದರೆ ಅವರ ಆಸೆ ನುಚ್ಚೂ ನೂರಾಗಿದೆ. ರೋಹಿತ್ 8 ಬೌಂಡರಿ, 1 ಸಿಕ್ಸರ್ ಬಾರಿಸಿ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದರು. ಈ ಮೂಲಕ ರೋಹಿತ್ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ದೊಡ್ಡ ಸಾಧನೆ ಮಾಡಿದರು.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಸಾಧನೆ ಮಾಡಿದರು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 15 ರನ್ ಬಾರಿಸುತ್ತಿದ್ದಂತೆ ರೋಹಿತ್ ಮತ್ತೊಂದು ದಾಖಲೆ ನಿರ್ಮಿಸಿದರು. ಇವರು ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 12 ಪಂದ್ಯಗಳ 22 ಇನ್ನಿಂಗ್ಸ್‌ಗಳಲ್ಲಿ 796 ರನ್ ಗಳಿಸಿದ್ದಾರೆ. ಇವರು ಅತಿ ಹೆಚ್ಚು ರನ್ ಗಳಿಸಿರುವ ಲೆಕ್ಕಚಾರಾದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದರು. ಕೇನ್ 8 ಪಂದ್ಯಗಳ 16 ಇನ್ನಿಂಗ್ಸ್‌ಗಳಲ್ಲಿ 757 ರನ್ ಗಳಿಸಿದ್ದಾರೆ.
ಪ್ರಸಕ್ತ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾಗೆ 11ನೇ ಸ್ಥಾನ. ನ್ಯೂಜಿಲೆಂಡ್ ವಿರುದ್ಧದ ಮುಂದಿನ 2 ಪಂದ್ಯಗಳಲ್ಲಿ ಹಿಟ್ ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 1000 ರನ್‌ಗಳ ಗಡಿ ದಾಟುವ ಕನಸು ಹೊಂದಿದ್ದಾರೆ. ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್‌ಗೆ ಮೊದಲ ಸ್ಥಾನ ಇವರು 1712 ರನ್ ಗಳಿಸಿದ್ದರೆ. ಭಾರತದ ಪರ ಯಶಸ್ವಿ ಜೈಸ್ವಾಲ್ 1265 ರನ್ ಗಳಿಸಿದ್ದು ಭಾರತದ ಪರ ಟಾಪ್ ಸ್ಕೋರ್‌ರ ಆಗಿದ್ದಾರೆ.

ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಎರಡನೇ ಇನಿಂಗ್ಸ್‌ನಲ್ಲಿ ಅಜಾಜ್ ಪಟೇಲ್‌ಗೆ ಬಲಿಯಾದರು. ಈ ಮೂಲಕ ರೋಹಿತ್ ವಿಶಿಷ್ಠ ದಾಖಲೆಯನ್ನು ಬರೆದರು. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಬೌಲ್ಡ್ ಆಗಿದ್ದರು. ಈ ಮೂಲಕ ಭಾರತದ ನಾಯಕ ವಿಶಿಷ್ಟ ದಾಖಲೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ, ರೋಹಿತ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಬೌಲ್ಡ್ ಆಗಿದ್ದಾರೆ.