ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್ ಶರ್ಮಾ ಟೀಮ್ ಇಂಡಿಯಾದ ಟಿ20 ತಂಡಕ್ಕೆ ನಾಯಕನಾಬೇಕು: ಪಾರ್ಥೀವ್ ಪಟೇಲ್

Rohit Sharma should be made India captain: Parthiv Patel

ಐಪಿಎಲ್‌ನಲ್ಲಿ ಮುಂಬೈ ತಂಡವನ್ನು ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ನಂತರ ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ನಾಯಕತ್ವ ರೋಹಿತ್ ಶರ್ಮಾ ವಹಿಸಿಕೊಳ್ಳಬೇಕು ಎಂಬ ಕೂಗು ಜೋರಾಗಿದೆ. ಸಾಕಷ್ಟು ಮಾಜಿ ಕ್ರಿಕೆಟಿಗರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಪಾರ್ಥಿವ್ ಪಟೇಲ್ ಕೂಡ ಇದೇ ಮಾತನ್ನು ಹೇಳಿದ್ದಾರೆ.

ಪಾರ್ಥೀವ್ ಪಟೇಲ್ ಬುಧವಾರ 18 ವರ್ಷಗಳ ವೃತ್ತಿ ಜೀವನದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗೆ ವಿದಾಯವನ್ನು ಹೇಳಿದ್ದಾರೆ. ಈ ನಿವೃತ್ತಿ ಘಓಷಣೆಯ ಬಳಿಕ ಪಾರ್ಥೀವ್ ರೋಹಿತ್ ಶರ್ಮಾಗೆ ನಾಯಕತ್ವ ಚರ್ಚೆಗೆ ತಮ್ಮ ಧ್ವನಿಗೂಡಿಸಿದ್ದಾರೆ.

ಎಲ್ಲಾ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್ಎಲ್ಲಾ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

ರೋಹಿತ್ ಶರ್ಮಾಗೆ ಟೀಮ್ ಇಂಡಿಯಾದ ನಾಯಕತ್ವ ಕೊಡುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ ಎಂದು ಪಾರ್ಥೀವ್ ಪಟೇಲ್ ಹೇಳಿದ್ದಾರೆ. ರೋಹಿತ್ ಶರ್ಮಾ ಆಡಲು ಫಿಟ್ ಆಗಿದ್ದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್‌ನಲ್ಲಿ ಮುನ್ನಡೆಸಲು ಇದು ಉತ್ತಮವಾದ ಸಂದರ್ಭ. ಮುಂದಿನ ವರ್ಷ ನಡೆಯುವ ವಿಶ್ವಕಪ್‌ನ ದೃಷ್ಟಿಯಿಂದ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಬೇಕು ಎಂದಿದ್ದಾರೆ.

"ರೋಹಿತ್ ಶರ್ಮಾ ತಂಡವನ್ನು ಬೇಗೆ ಬೆಳೆಸಬೇಕೆಂದು ಕಲಿಸಿದ್ದಾರೆ. ಆತ ಟೂರ್ನಿಯನ್ನು ಹೇಗೆ ಗೆಲ್ಲುವುದು ಎಂಬುದನ್ನು ತಿಳಿಸಿದ್ದಾರೆ. ಒಂದು ಮಾದರಿಯಲ್ಲಿ ಆತನಿಗೆ ನಾಯಕತ್ವ ನೀಡುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ ಎಂಬುದು ನನ್ನ ಭಾವನೆ. ಇದು ಕೊಹ್ಲಿಯ ಮೇಲಿರುವ ಭಾರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಿದೆ" ಎಂದು ಪಾರ್ಥೀವ್ ಪಟೇಲ್ ಹೇಳಿದ್ದಾರೆ.

ಭಾರತ vs ಆಸ್ಟ್ರೇಲಿಯಾ: ಟೀಮ್ ಇಂಡಿಯಾಕ್ಕೆ 20 ಶೇ. ದಂಡಭಾರತ vs ಆಸ್ಟ್ರೇಲಿಯಾ: ಟೀಮ್ ಇಂಡಿಯಾಕ್ಕೆ 20 ಶೇ. ದಂಡ

ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಗಾಯದ ಕಾರಣದಿಂದ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಆದರೆ ಟೆಸ್ಟ್ ತಂಡಕ್ಕೆ ಅಂತಿಮ ಕ್ಷಣದಲ್ಲಿ ರೋಹಿತ್ ಶರ್ಮಾ ಅವರನ್ನು ಹೆಸರಿಸಲಾಗಿದ್ದು ಅವರಿನ್ನೂ ಎನ್‌ಸಿಎನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಅವರು ಲಭ್ಯರಾಗಲಿದ್ದಾರೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ.

Story first published: Wednesday, December 9, 2020, 23:13 [IST]
Other articles published on Dec 9, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X