Rohit Sharma: ಶಾಹಿದ್ ಅಫ್ರೀದಿ ದಾಖಲೆ ಅಳಿಸಿದ ರೋಹಿತ್ ಶರ್ಮಾ ಸಿಕ್ಸರ್ ಕಿಂಗ್
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ತಮ್ಮ ಮೇಲೆ ಹಲವು ದಿನಗಳಿಂದ ಎದ್ದಿದ್ದ ಪ್ರಶ್ನೆಗಳಿಗೆ ಮೈದಾನದಲ್ಲಿ ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನೀಡಿದ್ದ ಸ್ಥಿರ ಪ್ರದರ್ಶನವನ್ನು ರೋಹಿತ್ ಶರ್ಮಾ, ಭಾರತದಲ್ಲೂ ಮುಂದುವರೆಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರೂ, ಅರ್ಧಶತಕದ ಇನಿಂಗ್ಸ್ ಮೂಲಕ ಹಲವು ದಾಖಲೆಗಳನ್ನು ಬರೆದರು. ಈ ಮೂಲಕ ಪಾಕಿಸ್ತಾನದ ಶಾಹೀದ್ ಆಫ್ರಿದಿ ಅವರ ದಾಖಲೆಯನ್ನು ಅಳಿಸಿ ಹಾಕಿದರು.
ರಾಂಚಿಯಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಆರಂಭಿಕ ರೋಹಿತ್ ಶರ್ಮಾ, ಅಬ್ಬರಿಸಿದರು. ನೆರೆದ ಅಭಿಮಾನಿಗಳಿಗೆ ತಮ್ಮ ಸ್ಥಿರ ಪ್ರದರ್ಶನದ ಮೂಲಕ ಹಬ್ಬದೂಟವನ್ನು ಉಣಬಡಿಸಿದ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಯಾವೊಬ್ಬ ಬ್ಯಾಟರ್ ಮಾಡದ ದಾಖಲೆಯನ್ನು ಮಾಡಿ ಬೀಗಿದರು. ದಕ್ಷಿಣ ಆಫ್ರಿಕಾ ವಿರುದ್ಧ 51 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 57 ರನ್ ಬಾರಿಸಿ ಮಿಂಚಿದರು.

ರೋಹಿತ್ ಶರ್ಮಾ ಬ್ಯಾಕ್ ಟು ಬ್ಯಾಕ್ ಏಕದಿನ ಫಾರ್ಮೆಟ್‌ನಲ್ಲಿ ಮುರನೇ ಅರ್ಧಶತಕ ಬಾರಿಸಿ ಮಿಂಚಿದರು. ಇವರು ಈ ಪಂದ್ಯದಲ್ಲಿ ಮೂರು ಸಿಕ್ಸರ್ ಬಾರಿಸುತ್ತಲೇ ಏಕದಿನ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆಯನ್ನ ಬರೆದರು. ರೋಹಿತ್ ಶರ್ಮಾ ಆಡಿರುವ 277 ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಟ್ಟಾರೆಯಾಗಿ 352 ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ ಪಾಕಿಸ್ತಾನದ ಸ್ಟಾರ್ ಆಟಗಾರ ಶಾಹೀದ್ ಅಫ್ರಿದಿ ಅವರ ದಾಖಲೆಯನ್ನು ಅಳಿಸಿ ಹಾಕಿದರು.
ಪಾಕಿಸ್ತಾನದ ಸೂಪರ್ ಸ್ಟಾರ್ ಆಟಗಾರ ಶಾಹೀದ್ ಆಫ್ರಿದಿ 398 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 351 ರನ್ ಸಿಕ್ಸರ್ ಬಾರಿಸಿದ್ದರು. ಈ ದಾಖಲೆಯನ್ನು ಈಗ ರೋಹಿತ್ ಶರ್ಮಾ ಅಳಿಸಿ ಹಾಕಿದರು.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್
ರೋಹಿತ್ ಶರ್ಮಾ, 277 ಪಂದ್ಯ, 352 ಸಿಕ್ಸರ್
ಶಾಹೀದ್ ಆಫ್ರಿದಿ, 398 ಪಂದ್ಯ, 351 ಸಿಕ್ಸರ್
ಕ್ರಿಸ್ ಗೇಲ್, 301 ಪಂದ್ಯ, 331 ಸಿಕ್ಸರ್
ಸನತ್ ಜಯಸೂರ್ಯ, 445 ಪಂದ್ಯ, 270 ಸಿಕ್ಸರ್
ಎಂ.ಎಸ್ ಧೋನಿ, 350 ಪಂದ್ಯ, 229 ಸಿಕ್ಸರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications