ಇಂದು ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಆಡುವಾಗ ರೋಹಿತ್ ಶರ್ಮಾ ದೊಡ್ಡ ದಾಖಲೆ ಮಾಡಿದ್ದಾರೆ. ರೋಹಿತ್ ಶರ್ಮಾ ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರೋಹಿತ್ ಶರ್ಮಾ ಒಂದು ತುದಿಯಲ್ಲಿ ಬ್ಯಾಟಿಂಗ್ ಕಚ್ಚಿ ಕೊಂಡು ಬ್ಯಾಟ್ ಮಾಡಿದರು.
ಇನ್ನು ರೋಹಿತ್ ಶರ್ಮಾ ಈ ಪಂದ್ಯದಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ 66 ರನ್‌ಗಳನ್ನು ಪೂರ್ಣಗೊಳಿಸಿದ ತಕ್ಷಣ, ಅವರು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ದಾಖಲೆಯನ್ನು ದಾದಾ 2008 ರಲ್ಲಿ ಮಾಡಿದ್ದರು.

ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 66 ರನ್ ಗಳಿಸಿದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೌರವ್ ಗಂಗೂಲಿ ಅವರ ಹೆಸರಿನಲ್ಲಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮೀರಿ ನಿಂತರು. ಇದೀಗ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಹಿಟ್ ಮ್ಯಾನ್ ಪಾತ್ರರಾಗಿದ್ದಾರೆ. ಟೆಸ್ಟ್, ODI ಮತ್ತು T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟಾಗಿ ರೋಹಿತ್ ಈ ಸಾಧನೆ ಮಾಡಿದ್ದಾರೆ.
ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 424 ಪಂದ್ಯಗಳನ್ನು ಆಡುವ ಮೂಲಕ 18575 ರನ್ ಗಳಿಸಿದ್ದರು. 2008ರಲ್ಲಿ ಕ್ರಿಕೆಟ್‌ಗೆ ದಾದಾ ವಿದಾಯ ಹೇಳಿದರು. ಅಂದರೆ ಅವರು ನಿವೃತ್ತರಾಗಿ ಸುಮಾರು 16 ವರ್ಷಗಳ ಬಳಿಕ ಟೀಮ್ ಇಂಡಿಯಾದ ಇನ್ನೊಬ್ಬ ನಾಯಕ ಈ ದಾಖಲೆಯನ್ನು ಅಳಿಸಿದ್ದಾರೆ.

ರೋಹಿತ್ 18576ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ
ರೋಹಿತ್ ಶರ್ಮಾ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 469 ಪಂದ್ಯಗಳನ್ನು ಆಡುವ ಮೂಲಕ 18575 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ರೋಹಿತ್ 56 ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ 3827 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಏಕದಿನದಲ್ಲಿ ಅವರು 262 ಪಂದ್ಯಗಳನ್ನು ಆಡಿದ್ದು, 10709 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್ ಶರ್ಮಾ 151 ಪಂದ್ಯಗಳ ಮೂಲಕ 3974 ರನ್ ಗಳಿಸಿದ್ದಾರೆ.
ಹಿಟ್‌ಮ್ಯಾನ್‌ಗಿಂತ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಭಾರತದ ಮೂವರು ಆಟಗಾರರು ಇದ್ದಾರೆ. ಸಚಿನ್ ತೆಂಡೂಲ್ಕರ್ ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ. ಅವರು 664 ಪಂದ್ಯಗಳಲ್ಲಿ 34357 ರನ್ ಗಳಿಸಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 522 ಪಂದ್ಯಗಳನ್ನು ಆಡಿರುವ ಕೊಹ್ಲಿ 26733 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಇದ್ದಾರೆ. ಅವರು 509 ಪಂದ್ಯಗಳನ್ನು ಆಡಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24208 ರನ್ ಗಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಇನ್ನೂ ಎಷ್ಟು ರನ್ ಗಳಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.