ಇಂಗ್ಲೆಂಡ್ ಸರಣಿಗೆ ರೋಹಿತ್ ಶರ್ಮಾ ಸಮರಭ್ಯಾಸ; ನೆಟ್ಸ್‌ನಲ್ಲಿ ಅಬ್ಬರ!
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಸದ್ಯ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಪಡೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಈಗಾಗಲೇ ಒಂದು ಪಂದ್ಯಕ್ಕೆ ಮಳೆ ಕಾಟ ನೀಡಿದ್ದರಿಂದ ಫಲಿತಾಂಶ ಹೀನವಾಗಿದೆ. ಎರಡನೇ ಟಿ20 ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟಿ20 ಸರಣಿಗಳು ಮುಗಿದ ಬಳಿಕ ಉಭಯ ತಂಡಗಳ ನಡುವೆ ಏಕದಿನ ಸರಣಿ ಆರಂಭವಾಗಲಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಅನುಭವಿ ಹಾಗೂ ಯುವ ಆಟಗಾರರ ದಂಡೇ ಇದೆ. ಈ ಸರಣಿಗಾಗಿ ಪ್ರಕಟಿತ ತಂಡದಲ್ಲಿ ಟೀಮ್ ಇಂಡಿಯಾದ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಈ ಸರಣಿಗೆ ರೋಹಿತ್ ಶರ್ಮಾ ಏಕದಿನ ಸರಣಿಗೆ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ.

ರೋಹಿತ್ ಶರ್ಮಾ ಇತ್ತೀಚೆಗೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಅವರು ಈ ವೇಳೆ ಕಠಿಣ ಅಭ್ಯಾಸ ಮಾಡಿದರು. ಹಾಗೂ ದೊಡ್ಡ ಹೊಡೆತಗಳನ್ನು ಬಾರಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ರೋಹಿತ್ ಅವರ ಈ ವಿಡಿಯೋ ಸಖತ್ ವೈರಲ್ ಆಗಿದೆ. ವೀಡಿಯೊದಲ್ಲಿ, ಅವರು ಸ್ಟ್ರೈಟ್ ಡ್ರೈವ್ ಮತ್ತು ಕವರ್ ಡ್ರೈವ್ ಮಾಡುವುದನ್ನು ನೋಡಬಹುದಾಗಿದೆ. ಈ ಸರಣಿಯ ವೇಳೆ ರೋಹಿತ್ ಶರ್ಮಾ ದೊಡ್ಡ ಇನಿಂಗ್ಸ್ ಕಟ್ಟಿ ತಂಡಕ್ಕೆ ಆಧಾರವಾಗುತ್ತಾರೆ ಎಂಬ ನಂಬಿಕೆ ಅಭಿಮಾನಿಗಳದ್ದಾಗಿದೆ.
ಪುಟಿದೇಳುವ ಕನಸಿನಲ್ಲಿ ರೋಹಿತ್
ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಆದರೆ ಮೂರನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಪ್ರಸಕ್ತ ವರ್ಷದಲ್ಲಿ ರೋಹಿತ್ ರನ್ ಕಲೆ ಹಾಕಲು ಪರದಾಟ ನಡೆಸಿದ್ದಾರೆ. ಅವರು ತಮ್ಮ ಹಳೆಯ ಫಾರ್ಮ್‌ಗೆ ಮರಳಲು ಮತ್ತು ಇಂಗ್ಲೆಂಡ್ ವಿರುದ್ಧ ದೊಡ್ಡ ಇನ್ನಿಂಗ್ಸ್ ಕಟ್ಟುವ ಇರಾದೆಯನ್ನು ಹೊಂದಿದ್ದಾರೆ.

ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಆರು ಪಂದ್ಯಗಳನ್ನು ಆಡಿ, 35.37 ರ ಸರಾಸರಿಯಲ್ಲಿ 283 ರನ್ ಗಳಿಸಿದರು ಮತ್ತು ಎರಡು ಅರ್ಧಶತಕಗಳು ಸೇರಿದಂತೆ 157.22 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ರೋಹಿತ್ ಈಗ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ. ಇವರು ದಕ್ಷಿಣ ಆಫ್ರಿಕಾದಲ್ಲಿ 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಆಡುವ ಕನಸು ಕಾಣುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧ ಹೇಗಿದೆ ರೋಹಿತ್ ಪ್ರದರ್ಶನ?
ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಉತ್ತಮ ದಾಖಲೆ ಹೊಂದಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧ ಆಡಿದ 23 ಏಕದಿನ ಪಂದ್ಯಗಳಲ್ಲಿ 47ರ ಸರಾಸರಿಯಲ್ಲಿ 846 ರನ್ ಕಲೆ ಹಾಕಿದ್ದಾರೆ. ಈ ವೇಳೆ 3 ಶತಕ ಹಾಗೂ 4 ಅರ್ಧಶತಕಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

