ಶ್ರೇಯಾಂಕ ಪಟ್ಟಿ: 5ನೇ ಸ್ಥಾನಕ್ಕೇರಿದ ದ್ವಿಶತಕದ ಸರದಾರ ರೋಹಿತ್
ನವದೆಹಲಿ, ಡಿಸೆಂಬರ್ 18: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಇಂದು (ಸೋಮವಾರ) ಐಸಿಸಿ ಬಿಡುಗಡೆ ಮಾಡಿದ ನೂತನ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದು, ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.
ಶ್ರೀಲಂಕಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ದ್ವಿಶತಕ (208) ಸಿಡಿಸಿದ್ದರಿಂದ 2 ಸ್ಥಾನ ಬಡ್ತಿ ಪಡೆದು 5ನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ಮತ್ತೋರ್ವ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಧವನ್ ಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಶ್ರೇಯಾಂಕ ಪಟ್ಟಿಯಲ್ಲಿ 14ನೇ ಸ್ಥಾನಕ್ಕೇರಿದ್ದಾರೆ.

ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದುವರೆದರೆ, ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನ, ಡೇವಿಡ್ ವಾರ್ನರ್ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಹಸನ್ ಅಲಿ, ಇಮ್ರಾನ್ ತಾಹಿರ್ ಹಾಗೂ ಜಸ್ಪ್ರೀತ್ ಬುಮ್ರಾ ಕ್ರಮವಾಗಿ ಮೊದಲ 3 ಸ್ಥಾನ ಹಂಚಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ 6 ವಿಕೆಟ್ ಕಬಳಿಸುವ ಮೂಲಕ ಭಾರತದ ಲೆಗ್ ಸ್ಪಿನ್ನರ್ ಚಹಲ್ ಅವರು 23 ಸ್ಥಾನ ಮೇಲಕ್ಕೇರಿ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ 28ಸೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications