ICC Test Ranking: ಭಾರೀ ಹಿನ್ನೆಡೆ ಅನುಭವಿಸಿದ ರೋಹಿತ್ ಶರ್ಮಾ!
ಜುಲೈ 25 ಗುರುವಾರ, ಭಾರತ ತಂಡದ ಟೆಸ್ಟ್ ಮತ್ತು ಏಕದಿನ ನಾಯಕ ರೋಹಿತ್ ಶರ್ಮಾ ಅವರು ಶ್ರೀಲಂಕಾ ವಿರುದ್ಧದ ಸರಣಿ ಮೂಲಕ ಮರಳಲಿದ್ದಾರೆ. ಅಮೆರಿಕ-ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ಬಳಿಕ ರೋಹಿತ್ ವಿಶ್ರಾಂತಿಯಲ್ಲಿದ್ದಾರೆ.
ಹಿಟ್‌ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿತ್ತು. 2013ರ ನಂತರ ಭಾರತ ಯಾವುದೇ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ.

ಇದಲ್ಲದೇ 2007ರ ನಂತರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಈ ಮೂಲಕ ಎರಡನೇ ಟಿ20 ವಿಶ್ವಕಪ್ ಗೆದ್ದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
ರೋಹಿತ್ ಬದಲಿಗೆ ಸೂರ್ಯ ನಾಯಕ
ಟಿ20 ವಿಶ್ವಕಪ್ ಬಳಿಕ ರೋಹಿತ್ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು. ಹಿಟ್‌ಮ್ಯಾನ್ ಜೊತೆಗೆ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಕೂಡ ನಿವೃತ್ತಿ ಘೋಷಿಸಿದ್ದರು.
ರೋಹಿತ್ ಈಗ ಏಕದಿನ ಮತ್ತು ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರಿಗೆ ಟಿ20 ನಾಯಕತ್ವ ನೀಡಲಾಗಿದೆ. ಸೂರ್ಯ ಈಗಾಗಲೇ ಟೀಮ್ ಇಂಡಿಯಾವನ್ನು ಕಮಾಂಡ್ ಮಾಡಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ಗೆ ನಾಯಕತ್ವ ಸಿಕ್ಕಿರಲಿಲ್ಲ. ಇನ್ನು ಮುಂದೆ ಉಪನಾಯಕನಾಗಿ ಶುಭಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.
ಆಗಸ್ಟ್ 2ರಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ರೋಹಿತ್ ವಾಪಸಾಗಲಿದ್ದಾರೆ. ಆದರೆ, ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ.
ಐಸಿಸಿ ಶ್ರೇಯಾಂಕದಲ್ಲಿ ಹಿಟ್‌ಮ್ಯಾನ್‌ಗೆ ಹಿನ್ನೆಡೆ ಆಗಿದ್ದು, ಒಂದು ಸ್ಥಾನ ಕುಸಿದು ಕೆಳಗೆ ಬಂದಿದ್ದಾರೆ. ಈ ಹಿಂದೆ ರೋಹಿತ್ 6ನೇ ಸ್ಥಾನದಲ್ಲಿದ್ದರು. ಈಗ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಖಾತೆಯಲ್ಲಿ 751 ರೇಟಿಂಗ್ ಅಂಕಗಳಿವೆ. ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಟಾಪ್-10ರಲ್ಲಿ ರೋಹಿತ್-ಯಶಸ್ವಿ ಮತ್ತು ವಿರಾಟ್
ರೋಹಿತ್ ಟೆಸ್ಟ್‌ನಲ್ಲಿ ಭಾರತದ ಅಗ್ರ ಬ್ಯಾಟರ್. ಶ್ರೇಯಾಂಕದಲ್ಲಿ ಅವರಿಗಿಂತ ಉತ್ತಮ ಭಾರತೀಯ ಆಟಗಾರ ಇಲ್ಲ. ಆದರೆ, ರೋಹಿತ್ ನಂತರ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಈ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ.
ಎಂಟನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಉಳಿದಿದ್ದು, ಅವರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಯಶಸ್ವಿ 740 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 737 ರೇಟಿಂಗ್ ಅಂಕಗಳೊಂದಿಗೆ ಟಾಪ್-10 ರ ಕೊನೆಯ ಸ್ಥಾನದಲ್ಲಿದ್ದಾರೆ.
ಸಿರಾಜ್-ಬುಮ್ರಾ ಮತ್ತು ಕುಲದೀಪ್ ಮಿಂಚು
ಟೆಸ್ಟ್ ಶ್ರೇಯಾಂಕದಲ್ಲಿ ವಿಲಿಯಮ್ಸನ್ ನಂತರ ಇಂಗ್ಲೆಂಡ್‌ನ ಜೋ ರೂಟ್ 2ನೇ ಸ್ಥಾನದಲ್ಲಿದ್ದಾರೆ. ಆಂಗ್ಲ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ನಾಲ್ಕು ಸ್ಥಾನ ಮೇಲಕ್ಕೇರಿದ್ದು, 3ನೇ ಸ್ಥಾನವನ್ನು ತಲುಪಿದರು.
ಪಾಕಿಸ್ತಾನದ ಬಾಬರ್ ಅಜಮ್ ಒಂದು ಸ್ಥಾನ ಕುಸಿದು 5ನೇ ಸ್ಥಾನಕ್ಕೆ ತಲುಪಿದ್ದಾರೆ. ನ್ಯೂಜಿಲೆಂಡ್‌ನ ಡಾರೆಲ್ ಮಿಚೆಲ್ 6 ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 7ನೇ ಸ್ಥಾನದಲ್ಲಿದ್ದಾರೆ.
ಏಕದಿನ ಬೌಲಿಂಗ್ ಶ್ರೇಯಾಂಕದ ಬಗ್ಗೆ ಮಾತನಾಡುತ್ತಾ, ಮೂವರು ಭಾರತೀಯ ಬೌಲರ್‌ಗಳು ಟಾಪ್-10 ನಲ್ಲಿದ್ದಾರೆ. ಮೊಹಮ್ಮದ್ ಸಿರಾಜ್ 4ನೇ ಮತ್ತು ಜಸ್ಪ್ರೀತ್ ಬುಮ್ರಾ 5ನೇ ಸ್ಥಾನದಲ್ಲಿದ್ದಾರೆ. ಕುಲದೀಪ್ ಯಾದವ್ 9ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications