For Quick Alerts
ALLOW NOTIFICATIONS  
For Daily Alerts
 

ರೋಹಿತ್‌ ಈ ಟೂರ್ನಿ ಆಡುವುದು ಪಕ್ಕಾ: ವಿರಾಟ್‌ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇತ್ತೀಚಿಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ಸರಣಿ ಈ ಇಬ್ಬರಿಗೂ ಮಹತ್ವದಾಗಿತ್ತು. ಈ ವೇಳೆ ಈ ಇಬ್ಬರೂ ಸ್ಟಾರ್ ಆಟಗಾರರು ತಮ್ಮ ನೈಜ ಆಟ ಆಡಿದ್ದಾರೆ. ಇನ್ನು ರೋಹಿತ್‌ ಶರ್ಮಾ ಆರ್ಭಟಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರೆ, ವಿರಾಟ್ ಕೊನೆಯ ಪಂದ್ಯದಲ್ಲಿ ಭರ್ಜರಿ ಕಂ ಬ್ಯಾಕ್ ಮಾಡಿದ್ದಾರೆ.

ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಗಳು ಭಾರತದಲ್ಲಿ ನಡೆಯಲಿವೆ. ಈ ಸರಣಿಯಲ್ಲಿ ಉಭಯ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಈ ಸರಣಿಯ ಬಳಿಕ ದೇಶೀಯ ಟೂರ್ನಿಗಳು ನಡೆಯಲಿವೆ. ಈ ಸರಣಿಯಲ್ಲಿ ಉಭಯ ಆಟಗಾರರು ಇಳಿಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಗ್ ಅಪ್‌ಡೇಟ್‌ ಸಿಕ್ಕಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿ ಆಡುತ್ತಾರೆ ಎಂಬುದು ತಿಳಿದು ಬಂದಿದೆ. ಆದರೆ ವಿರಾಟ್‌ ಕೊಹ್ಲಿ ಬಗ್ಗೆ ಯಾವುದೇ ಅಪ್‌ಡೇಟ್ ಇಲ್ಲ.

Rohit Sharma to Play Vijay Hazare Trophy Uncertainty Over Virat Kohli s Domestic Participation

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಆಸೆಯನ್ನು ಹೊಂದಿದ್ದಾರೆ. ಇವರಿಬ್ಬರಿಗೂ ಇದು ಸುಲಭದ ಕೆಲಸವಲ್ಲ. ಉಭಯ ಆಟಗಾರರು ಈಗಾಗಲೇ ಟಿ20 ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ವರದಿಯ ಪ್ರಕಾರ, ಇವರಿಬ್ಬರೂ ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ಆಡುವುದನ್ನು ಬಯಸಿದಲ್ಲಿ ದೇಶೀಯ ಟೂರ್ನಿಯಲ್ಲಿ ಆಡಬೇಕಾಗುತ್ತದೆ. ವಿಜಯ್‌ ಹಜಾರೆ ಟ್ರೋಫಿ ಡಿ.24 ರಿಂದ ಆರಂಭವಾಗಲಿದೆ. ಈ ವೇಳೆಗೆ ಉಭಯ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಆಡಿ ಮುಕ್ತರಾಗುತ್ತಾರೆ. ಇವರಿಬ್ಬರು ಮತ್ತೆ ಜನವರಿ 11, 2026 ರಂದು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಕಣಕ್ಕೆ ಇಳಿಯಲಿದ್ದಾರೆ.

ವಿರಾಟ್‌ ಕೊಹ್ಲಿ ಬಗ್ಗೆ ಇಲ್ಲ ಸ್ಪಷ್ಟತೆ

ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ಗೆ ರೋಹಿತ್ ಶರ್ಮಾ ತಾವು ವಿಜಯ್‌ ಹಜಾರೆ ಟ್ರೋಫಿಗೆ ಲಭ್ಯರಿರುವುದಾಗಿ ತಿಳಿಸಿದ್ದಾರೆ. ಆದರೆ ವಿರಾಟ್‌ ಕೊಹ್ಲಿ ಅವರ ಲಭ್ಯತೆಯ ಬಗ್ಗೆ ಇನ್ನು ಯಾವುದೇ ಸ್ಪಷ್ಟತೆ ಇಲ್ಲ. ಈ ಇಬ್ಬರೂ ಸ್ಟಾರ್ ಆಟಗಾರರು ಮುಂದೆ ದೊಡ್ಡ ಸವಾಲು ಇದೆ. ಈ ಸವಾಲನ್ನು ಮೀರಿ ನಿಲ್ಲಲು ಈ ಇಬ್ಬರೂ ಆಟಗಾರರು ಪಂದ್ಯಗಳನ್ನು ಆಡುವ ಮೂಲಕ ಫಿಟ್ನೆಸ್ ಕಾಯ್ದುಕೊಳ್ಳಬಹುದಾಗಿದೆ.

Rohit Sharma to Play Vijay Hazare Trophy Uncertainty Over Virat Kohli s Domestic Participation

ಆಸ್ಟ್ರೇಲಿಯಾ ಪ್ರವಾಸದಲ್ಲಿ ಉಭಯ ಆಟಗಾರರು ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ವೇಳೆ ವಿರಾಟ್‌ ಕೊಹ್ಲಿ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಸೊನ್ನೆ ಸುತ್ತಿದರೆ, ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಜೊತೆಗೂಡಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಲ್ಲಿ ಮಿಂಚಿದ್ದರು. ಹೀಗಾಗಿ ಇವರಿಬ್ಬರ ಬ್ಯಾಟಿಂಗ್ ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

Story first published: Wednesday, November 12, 2025, 17:26 [IST]
Other articles published on Nov 12, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+