Champions Trophy: ಪಾಕಿಸ್ತಾನಕ್ಕೆ ಹೋಗದ ರೋಹಿತ್; ಉದ್ಘಾಟನಾ ಸಮಾರಂಭ ರದ್ದು
ಬಹುನಿರೀಕ್ಷಿತ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭಕ್ಕಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುವ ಗೊಂದಲಕ್ಕೆ ತೆರೆ ಬಿದ್ದಿದೆ. ವರದಿಗಳ ಪ್ರಕಾರ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿವೆ. ಹೀಗಾಗಿ ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುವ ಅಗತ್ಯವಿಲ್ಲ. ಬಹುದಿನಗಳಿಂದ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭಕ್ಕೆ ರೋಹಿತ್ ಶರ್ಮಾ ಹೋಗುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು.
ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ತೆರಳಲು ಭಾರತ ಸರ್ಕಾರ ಅನುಮತಿ ನೀಡಿಲ್ಲ. ಪರಿಣಾಮ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಉಳಿದ ತಂಡಗಳ ಪಂದ್ಯಗಳು ಪಾಕಿಸ್ತಾನದಲ್ಲಿ ಆಯೋಜನೆಗೊಂಡಿವೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ಮತ್ತು ನಾಯಕರ ಫೋಟೋಶೂಟ್ ಅನ್ನು ರದ್ದುಪಡಿಸಲು ಟೀಮ್ ಇಂಡಿಯಾ ಮತ್ತು ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣವಲ್ಲ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಟೂರ್ನಿಗೆ ತಡವಾಗಿ ಬರುವ ನಿರೀಕ್ಷೆಯಿದೆ. ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಫೆಬ್ರವರಿ 18 ರಂದು ಲಾಹೋರ್ ತಲುಪಲಿದೆ. ಇದಕ್ಕೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯ ಫೆಬ್ರವರಿ 12 ರಂದು ನಡೆಯಲಿದ್ದು. ಇದಾದ ನಂತರ ಇಂಗ್ಲೆಂಡ್ ತಂಡ ಒಂದು ವಾರ ರಜೆ ತೆಗೆದುಕೊಳ್ಳಲಿದೆ.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ಎರಡು ಟೆಸ್ಟ್ ಪಂದ್ಯಗಳ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಂಡಿದೆ. ಈ ಸರಣಿ ಮುಕ್ತಾಯವಾದ ಐದು ದಿನಗಳ ನಂತರ ಫೆಬ್ರವರಿ 19 ರಂದು ಆಸ್ಟ್ರೇಲಿಯಾ ಪಾಕಿಸ್ತಾನವನ್ನು ತಲುಪುವ ನಿರೀಕ್ಷೆಯಿದೆ. ಹೀಗಾಗಿ ಉಭಯ ತಂಡಗಳ ನಾಯಕರು ಉದ್ಘಾಟನಾ ಸಮಾರಂಭಕ್ಕೆ ಲಭ್ಯವಿರುವುದಿಲ್ಲ. ಹೀಗಾಗಿ ಎಲ್ಲ ನಾಯಕರು ಲಭ್ಯವಿಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಯಾವುದೇ ನಾಯಕರ ಫೋಟೋ ಶೂಟ್ ಅಥವಾ ಜಂಟಿ ಪತ್ರಿಕಾಗೋಷ್ಠಿ ನಡೆಯುವುದಿಲ್ಲ ಎಂದು ವರದಿಗಳು ತಿಳಿಸಿವೆ.
ಫೆಬ್ರವರಿ 16 ರಂದು ಲಾಹೋರ್ ಫೋರ್ಟ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭವನ್ನೂ ನಡೆಸಲು ಪಿಸಿಬಿ ಸಜ್ಜಾಗಿದೆ. ಈ ಸಮಾರಂಭ ಪಿಸಿಬಿ ಮತ್ತು ಐಸಿಸಿ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications