Rohit Sharma: ಫ್ಯಾನ್ಸ್‌ಗೆ ನೋವುಂಟು ಮಾಡಿದ ರೋಹಿತ್ ಶರ್ಮಾ ವಿಡಿಯೋ; ಎಲ್ಲೆಡೆ ವೈರಲ್!
ಮೇ 7 ಮಂಗಳವಾರ, ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ ಮುಂಬೈ ಇಂಡಿಯನ್ಸ್ ಸೋಲಿಸಿತು. ಈ ಪಂದ್ಯದ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗಿದೆ. ಜೊತೆಗೆ ರೋಹಿತ್ ಶರ್ಮಾ ಅಭಿಮಾನಿಗಳಿಗೆ ನೋವುಂಟು ಮಾಡಿದೆ.
ಹೈದರಾಬಾದ್ ಎದುರು ಆರಂಭಿಕರಾಗಿ ಇನ್ನಿಂಗ್ಸ್ ಶುರು ಮಾಡಿದ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡುವಲ್ಲಿ ಎಡುವಿದರು. ರೋಹಿತ್ ಕೇವಲ 4 ರನ್ ಗಳಿಸಿ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ಔಟ್ ಆದರು.

ಬಳಿಕ ಡ್ರೆಸ್ಸಿಂಗ್ ರೂಮ್‌ಗೆ ಹೋದ ರೋಹಿತ್ ತುಂಬಾ ದುಃಖಿತರಾಗಿ ಕಣ್ಣೀರಿಟ್ಟಿದ್ದಾರೆ. ನಂತರ ರೋಹಿತ್ ಶರ್ಮಾ ಕಣ್ಣೀರು ಒರೆಸಿಕೊಳ್ಳುವ ವಿಡಿಯೋ ಕೆಲವೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೆ ಅಭಿಮಾನಿಗಳು ರೋಹಿತ್ ಶರ್ಮಾ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸುತ್ತಿದ್ದಾರೆ.
ಈ ವಿಡಿಯೋವನ್ನು ಹಂಚಿಕೊಂಡಿರುವ ಅಭಿಮಾನಿಯೊಬ್ಬ, ಡ್ರೆಸ್ಸಿಂಗ್ ರೂಮ್‌ನಲ್ಲಿ ರೋಹಿತ್ ಶರ್ಮಾ ಅವರ ಈ ದೃಶ್ಯವನ್ನು ನೋಡಿದ ನಂತರ ಎದೆಗುಂದಿದೆ ಎಂದು ಬರೆದುಕೊಂಡಿದ್ದಾರೆ. ಮತ್ತೊರ್ವ ಟಿ20 ವಿಶ್ವಕಪ್‌ಗೂ ಮುನ್ನ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಬೇಕು ಎಂದು ತಿಳಿಸಿದ್ದಾರೆ.
ರೋಹಿತ್ ಶರ್ಮಾ ಈ ಋತುವಿನಲ್ಲಿ ಒಂದು ಶತಕವನ್ನು ಗಳಿಸಿದ್ದು ಬಿಟ್ಟರೆ ನಿರಂತರವಾಗಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಕೇವಲ 33 ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು ರೋಹಿತ್ ಶರ್ಮಾ ಒಂದು ಋತುವಿನಲ್ಲಿ ಗೋಲ್ಡನ್ ಡಕ್ ಕೂಡ ಆಗಿದ್ದರು. ನಂತರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಜೇಯ 105 ರನ್‌ಗಳ ಇನ್ನಿಂಗ್ಸ್ ಅನ್ನು ಆಡಿದ್ದರು. ಅದರೆ ಚೆನ್ನೈ ಎದುರು ಈ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಸೋತಿತ್ತು.
ಯಶಸ್ವಿ ನಾಯಕ
ರೋಹಿತ್ ಶರ್ಮಾ ಓರ್ವ ಅದ್ಭುತ ಬ್ಯಾಟರ್ ಮಾತ್ರವಲ್ಲದೆ ನಾಯಕನಾಗಿ ಯಶಸ್ಸು ಕಂಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ತಮ್ಮ ನಾಯಕತ್ವದ ಕೌಶಲ್ಯದಿಂದ ಪ್ರಭಾವ ಬೀರಿರುವ ರೋಹಿತ್ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಇದುವರೆಗೆ 5 ಬಾರಿ ಪ್ರಶಸ್ತಿ (2013, 2015, 2017, 2019 ಮತ್ತು 2020) ಗೆಲ್ಲುವಂತೆ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಿದ್ದಾರೆ.
ಐಪಿಎಲ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿರುವ ರೋಹಿತ್252 ಪಂದ್ಯಗಳಿಂದ ಒಟ್ಟು 6522 ರನ್‌ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು 42 ಅರ್ಧ ಶತಕಗಳು ಸೇರಿವೆ. 109 ಅಧಿಕ ಸ್ಕೋರ್ ಆಗಿದೆ. ಐಪಿಎಲ್‌ನ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ 2023ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ 597 ರನ್‌ಗಳನ್ನು ಕಲೆಹಾಕಿ ಎರಡನೇ ಸ್ಥಾನದಲ್ಲಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications