ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ರೋಹಿತ್ ದ್ವಿಶತಕ ಬಾರಿಸುವುದು ಖಚಿತ: ಮಾಜಿ ಪಾಕ್ ಆಟಗಾರ

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆ ಹುಟ್ಟಿಕೊಂಡಿದ್ದು ಯಾವ ತಂಡ ಜಯ ಸಾಧಿಸಲಿದೆ ಎಂಬುದರ ಕುರಿತು ದೊಡ್ಡ ಮಟ್ಟದ ಚರ್ಚೆಗಳಾಗುತ್ತಿವೆ.
ಯುಎಇಯಲ್ಲಿ ಐಪಿಎಲ್ ಮುಂದುವರೆದಾಗ ಈ 3 ತಂಡಗಳು ಕಂಗಾಲಾಗುವುದು ಖಚಿತ!
ಈ ವೇಳೆ ಮಾತನಾಡಿರುವ ಪಾಕಿಸ್ತಾನದ ಮಾಜಿ ಆಟಗಾರ ರಮೀಜ್ ರಾಜಾ ಜೂನ್ 18ರಿಂದ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಭವಿಷ್ಯವನ್ನು ನುಡಿದಿದ್ದು ರೋಹಿತ್ ಶರ್ಮಾ ದ್ವಿಶತಕ ಸಿಡಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2022: ಹೊಸ ತಂಡಗಳಾಗಿ ಸೇರ್ಪಡೆಯಾಗಬಹುದಾದ 5 ನಗರಗಳು
ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಆರಂಭಿಕ ಆಟಗಾರರಾಗಿ ಶುಬ್ಮನ್ ಗಿಲ್ ಮತ್ತು ರೋಹಿತ್ ಶರ್ಮಾ ಕಣಕ್ಕಿಳಿಯಬೇಕೆಂದು ರಮೀಜ್ ರಾಜಾ ಹೇಳಿದ್ದಾರೆ. 'ಶುಬ್ಮನ್ ಗಿಲ್ ಮತ್ತು ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರೆ, ಭಾರತ ತಂಡಕ್ಕೆ ಹೆಚ್ಚಿನ ಕಷ್ಟ ಮತ್ತು ಒತ್ತಡವಿರುವುದಿಲ್ಲ. ಈ ಇಬ್ಬರು ಆಟಗಾರರು ಆರಂಭವನ್ನು ಮಾಡಿದರೆ ಟೀಮ್ ಇಂಡಿಯಾ ಉತ್ತಮ ಮೊತ್ತವನ್ನು ದಾಖಲಿಸಿದ್ದು, ಒಂದುವೇಳೆ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಡೆಸಿದರೆ ದ್ವಿಶತಕ ಬಾರಿಸುವುದು ಖಚಿತ' ಎಂದು ರಮೀಜ್ ರಾಜಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications