Asia Cup 2022: ರೋಹಿತ್ ಕೊಹ್ಲಿಗಿಂತ ಬೆಸ್ಟ್ ಕ್ಯಾಪ್ಟನ್ ಆಗಲು ಇನ್ನೊಂದು ಪಂದ್ಯ ಸಾಕು!

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ನಿರತವಾಗಿರುವ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊನ್ನೆಯಷ್ಟೇ 5 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಗೆಲುವಿನ ಖಾತೆ ತೆರೆದು ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿದೆ.
ಹೀಗೆ ಈ ಗೆಲುವಿನ ಮೂಲಕ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿರುವ ಟೀಮ್ ಇಂಡಿಯಾ ಆಗಸ್ಟ್ 31ರಂದು ನಡೆಯುವ ಪಂದ್ಯದಲ್ಲಿ ಕ್ವಾಲಿಫೈಯರ್ ಸುತ್ತಿನಲ್ಲಿ ಗೆದ್ದು ಏಷ್ಯಾಕಪ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿರುವ ಹಾಂಗ್ ಕಾಂಗ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿಯೂ ಸಹ ಜಯ ಸಾಧಿಸಿದರೆ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಳ್ಳಲಿದ್ದು ಅಧಿಕೃತವಾಗಿ ಟೂರ್ನಿಯ ಸೂಪರ್ 4 ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿದೆ.
ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಹಾಂಗ್ ಕಾಂಗ್ ವಿರುದ್ಧದ ಈ ಪಂದ್ಯದಲ್ಲಿ ಗೆಲ್ಲಲು ಯೋಜನೆಗಳನ್ನು ಹೆಣೆಯುತ್ತಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೂಪರ್ 4 ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳುವುದು ಮಾತ್ರವಲ್ಲದೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶೇಷ ಮೈಲಿಗಲ್ಲೊಂದನ್ನು ದಾಟಲಿದೆ.

ಕೊಹ್ಲಿ ನಾಯಕತ್ವದ ಸಾರ್ವಕಾಲಿಕ ದಾಖಲೆ ಮುರಿಯಲಿದ್ದಾರೆ ರೋಹಿತ್
ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಒಟ್ಟಾರೆ 30 ಟಿ ಟ್ವೆಂಟಿ ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದೆ ಹಾಗೂ ರೋಹಿತ್ ಶರ್ಮಾ ನಾಯಕತ್ವದಲ್ಲಿಯೂ ಸಹ 30 ಟಿ ಟ್ವೆಂಟಿ ಪಂದ್ಯಗಳಲ್ಲಿ ಗೆದ್ದಿದೆ. ಹೌದು, ಪಾಕಿಸ್ತಾನ ವಿರುದ್ಧದ ಗೆಲುವು ರೋಹಿತ್ ಶರ್ಮಾ ನಾಯಕತ್ವದ ಅಡಿಯಲ್ಲಿ ಭಾರತ ಗೆದ್ದ ಮೂವತ್ತನೇ ಟಿಟ್ವೆಂಟಿ ಗೆಲುವಾಗಿತ್ತು ಹಾಗೂ ಈ ಮೂಲಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ಈ ಅಂಕಿಅಂಶದಲ್ಲಿ ಸರಿದೂಗಿಸಿದ್ದರು. ಇದೀಗ ನಾಯಕನಾಗಿ ಅತಿ ಹೆಚ್ಚು ಟಿ ಟ್ವೆಂಟಿ ಪಂದ್ಯ ಗೆಲ್ಲಿಸಿದ ಅಂಕಿಅಂಶದಲ್ಲಿ ವಿರಾಟ್ ಕೊಹ್ಲಿಗೆ ಸರಿಸಮನಾಗಿರುವ ರೋಹಿತ್ ಶರ್ಮಾ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿದರೆ ಕೊಹ್ಲಿಯನ್ನು ಸರಿಗಟ್ಟಲಿದ್ದಾರೆ.

ಯಾರ ನಾಯಕತ್ವದಲ್ಲಿ ಎಷ್ಟು ಟಿ20 ಗೆಲುವು?
• ಎಂಎಸ್ ಧೋನಿ ನಾಯಕತ್ವದಡಿಯಲ್ಲಿ 72 ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 41 ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಎಂಎಸ್ ಧೋನಿ ಅತಿ ಹೆಚ್ಚು ಟಿ ಟ್ವೆಂಟಿ ಪಂದ್ಯಗಳನ್ನು ಗೆಲ್ಲಿಸಿದ ಭಾರತದ ನಾಯಕ ಎನಿಸಿಕೊಂಡಿದ್ದಾರೆ.
• ರೋಹಿತ್ ಶರ್ಮಾ ನಾಯಕತ್ವದ ಅಡಿಯಲ್ಲಿ ಒಟ್ಟು 36 ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 30 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ.
• ವಿರಾಟ್ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಒಟ್ಟು 50 ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಭಾರತ 30 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ.

ರೋಹಿತ್ ಶರ್ಮಾ ಅತಿ ಯಶಸ್ವಿ ಟಿ ಟ್ವೆಂಟಿ ನಾಯಕ
ಈ ಮೇಲಿನ ಅಂಕಿ ಅಂಶಗಳನ್ನು ಗಮನಿಸಿದರೆ ರೋಹಿತ್ ಶರ್ಮಾ ಅವರ ಗೆಲುವಿನ ಶೇಕಡಾಂಶ ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿಗಿಂತ ಹೆಚ್ಚಿದೆ. ವಿರಾಟ್ ಕೊಹ್ಲಿ 50 ಟಿ ಟ್ವೆಂಟಿ ಪಂದ್ಯಗಳಲ್ಲಿ ನಾಯಕನಾಗಿ ಸಾಧಿಸಿದ್ದ ಅಂಕಿಅಂಶವನ್ನು ರೋಹಿತ್ ಶರ್ಮಾ ಕೇವಲ 36 ಪಂದ್ಯಗಳಲ್ಲಿಯೇ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಎಂ ಎಸ್ ಧೋನಿ ಅವರ ಅಂಕಿ ಅಂಶವನ್ನು ಸಹ ಸರಿಗಟ್ಟಿ ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ಟಿ ಟ್ವೆಂಟಿ ನಾಯಕ ಎಂಬ ಹೊಚ್ಚ ಹೊಸ ದಾಖಲೆ ಬರೆಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications